ಕಲಬುರಗಿ : ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಆನಂದ ದೋಡ್ಡಮನಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಛೇರಿ ಎದರು ಹಿಂದಿ ದಿವಸ ವಿರೋಧಿಸಿ ಒಂದು ದಿನದ ಬೃಹತ್ ಪ್ರತಿಭಟನೆ ಧರಣಿ ಸತ್ಯಾಗ್ರಹ ಜರುಗಿತು.
ಈ ಸಂದರ್ಭದಲ್ಲಿ ಮಹೇಶ್ ಕಾಶಿ, ಮೈಹತಾಬ ಪಟೇಲ್, ಪ್ರವೀಣ್ ಕಟ್ಟಿಮನಿ, ಜಿಲ್ಲಾ ಉಪಾಧ್ಯಕ್ಷ ಸಿದ್ದು ಪೂಜಾರಿ, ಹಾಗೂ ಸೂರ್ಯಕಾಂತ ಪಂಚಾಳ, ಸುರೇಶ ಹೋಸಮನಿ, ಅಪ್ಪು ಛತ್ರಿ, ಚಂದರ ಚವ್ಹಾಣ, ಯಲ್ಲಪ್ಪಾ ಭಂಕಲಗಿ, ಸಚಿನ ಲೋಕಾಣೆ, ಸಾಗಾರ ಡಿ ಅಭಿಶಾಳ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.
ನೀಡುವ ಸಂವಿಧಾನದ 343ರಿಂದ 351ನೇ ವಿಧಿಗಳನ್ನು ರದ್ದುಪಡಿಸಿ ಎಲ್ಲ ಭಾಷೆಗಳೂ ಒಕ್ಕೂಟದ ದೃಷ್ಟಿಯಲ್ಲಿ ಸಮಾನ ಎಂದು ಸಾರಬೇಕು, ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಕೇಂದ್ರ ಸರ್ಕಾರಿ ಇಲಾಖೆಗಳು, ಉದ್ಯಮಗಳಲ್ಲಿ ಕನ್ನಡವೇ ಆಡಳಿತ ಭಾಷೆಯಾಗಬೇಕು. ಎಲ್ಲ ಬಗೆಯ ಪತ್ರ ವ್ಯವಹಾರಗಳೂ ಕನ್ನಡದಲ್ಲೇ ನಡೆಯಬೇಕು.
ಅಂತಾರಾಜ್ಯ ವ್ಯವಹಾರಗಳು ಮತ್ತು ಕೇಂದ್ರ ಸರ್ಕಾರದೊಂದಿಗಿನ ವ್ಯವಹಾರಗಳೂ ಸಹ ಕನ್ನಡ ನುಡಿಯಲ್ಲೇ ಆಗಬೇಕು. ಕರ್ನಾಟಕದಲ್ಲಿ ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ಸೂತ್ರ ಜಾರಿಗೆ ಬರಬೇಕಾಗಿದೆ. ನಮ್ಮ ಶಾಲಾಪಠ್ಯಕ್ರಮಗಳಿಂದ ಹಿಂದಿ ಕಡ್ಡಾಯ ಕಲಿಕೆ ಕೊನೆಗೊಳ್ಳಬೇಕು. ಎಂದು ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಲಾಯಿತು.