ಕಲಬುರಗಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಕಲಬುರಗಿಯಲ್ಲಿ ರಾಷ್ಟ್ರೀಯ ಲೋಕ ಅದಾಲತನ್ನು ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿ ಕಲಬುರಗಿ ವತಿಯಿಂದ ಆಯೋಜಿಸಲಾಗಿತ್ತು.
ಸದರಿ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು ವಾಹನ ಅಪಘಾತ, ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಕರ್ನಾಟಕ ಉಚ್ಚ ನ್ಯಾಯಾಲಯ ಕಲಬುರಗಿ ಪೀಠದಲ್ಲಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.
ಸದರಿ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಎಸ್.ಸುನಿಲ್ ದತ್ ಯಾದವ್ ಮತ್ತು ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ರಾಮಚಂದ್ರ ಡಿ. ಹುದ್ದಾರ್ ರವರು ಭಾಗವಹಿಸಿದ್ದರು.
ಈ ಲೋಕ ಅದಾಲತನಲ್ಲಿ ಒಟ್ಟು 225 ಪ್ರಕರಣಗಳನ್ನು ವಿಲೇವಾರಿ ಮಾಡಲಾಯಿತು ಹಾಗೂ ರೂ. 5,55,67,757/- ಗಳ ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಯಿತು. ಉಚ್ಚ ನ್ಯಾಯಾಲಯದ ಕಾನೂನು ಸೇಬಾ ಸಮಿತಿ ಕಾರ್ಯದರ್ಶಿ ಗಳಾದ ದಯಾನಂದ ವೀ.ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.