ಪ್ರಜಾಪ್ರಭುತ್ವ ದಿನಾಚರಣೆ- ಮಾನವ ಸರಪಳಿ ಯಶಸ್ವಿ

ಶಹಾಬಾದ: ನಗರದಿಂದ ಹಾದು ಹೋಗುವ ಎನ್‍ಹೆಚ್-150 ಹೆದ್ದಾರಿಗೆ ಹೊಂದಿಕೊಂಡಿರುವ ಮರತೂರದಿಂದ ಶಂಕರವಾಡಿ-ಮಾಲಗತ್ತಿ ಗ್ರಾಮದವರೆಗೆ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ರವಿವಾರ ಅಚ್ಚುಕಟ್ಟಾಗಿ ಮತ್ತು ಅರ್ಥಪೂರ್ಣವಾಗಿ ಮಾನವ ಸರಪಳಿ ರಚಿಸುವುದರ ಮೂಲಕ ತಾಲೂಕಾಡಳಿತ, ನಗರಸಭೆ ಹಾಗೂ ತಾಪಂ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಕಾರ್ಯಕ್ರಮ ಯಶಸ್ವಿಯಾಯಿತು.

ಬೆಳಿಗ್ಗೆ 8 ಗಂಟೆಗೆ ಶಾಲಾ ಮಕ್ಕಳು ಮತ್ತು ಶಿಕ್ಷಕರು ನಿಗದಿತ ಸ್ಥಳಕ್ಕೆ ಬಂದು ಸರದಿಯಲ್ಲಿ ನಿಂತರು. 9.30 ಗಂಟೆಗೆ ರಸ್ತೆಯುದ್ದಕ್ಕೂ ಶಾಲಾ ಮಕ್ಕಳು, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಕೂಲಿ ಕಾರ್ಮಿಕರು, ಸಾರ್ವಜನಿಕರು, ಅಧಿಕಾರಿ-ನೌಕರರು, ಚುನಾಯಿತ ಜನಪ್ರತಿನಿಧಿಗಳು ಪರಸ್ಪರ ಕೈ ಹಿಡಿದು ಮಾನವ ಸರಪಳಿ ರಚಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮಹತ್ವ ವಿಶ್ವಕ್ಕೆ ಸಾರಿದರು.

ಭಾರತದ ಶ್ರೇಷ್ಠ ಸಂವಿಧಾನದ ಮೂಲ ಆಶಯ ವಿಶ್ವಕ್ಕೆ ಪರಿಚಯಿಸುವ ಪ್ರಯತ್ನ ಮತ್ತು ಸಂವಿಧಾನ ಪೀಠಿಕೆ ವಾಚನ ಮಾಡುವ ಮೂಲಕ ಗಮನ ಸೆಳೆಯಲಾಯಿತು.ಪ್ರತಿ ಕಿಮೀ.ಗೆ ಒಬ್ಬರು ನೋಡಲ್ ಅಧಿಕಾರಿ ನೇಮಿಸಲಾಗಿತ್ತು.

ಸರಪಳಿ ಹಾದು ಹೋಗುವ ವಾಹನ ದಟ್ಟಣೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆ ಕಡೆ ಗಮನವಹಿಸಿ ವಾಹನ ಸವಾರರಿಗೆ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆ ನೋಡಿಕೊಂಡರು. ತಾಲೂಕಿನ ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಯಾವುದೇ ಲೋಪವಾಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಂಡರು. ಶಾಲಾ ಮಕ್ಕಳಿಗೆ ನೀರು ಮತ್ತು ಬಿಸ್ಕೀಟ್ ಹಂಚಲಾಯಿತು. ಆದರೆ ಎರಡು ಗಂಟೆಗಳವರೆಗೆ ಮಾನವ ಸರಪಳಿಯಲ್ಲಿ ನಿಂತ ಬಹುತೇಖ ಶಾಲಾ-ಮಕ್ಕಳಿಗೆ, ಉಪನ್ಯಾಸಕರಿಗೆ, ಶಿಕ್ಷಕರಿಗೆ ನೀರಿನ ಸರಿಯಾದ ವ್ಯವಸ್ಥೆ ಮಾಡದಿರುವುದೊಂದೆ ಅಸಮಾಧಾನಕ್ಕೆ ಕಾರಣವಾಯಿತು.

ತಹಸೀಲ್ದಾರ ಜಗದೀಶ ಚೌರ್, ಪೌರಾಯುಕ್ತ ಡಾ. ಕೆ.ಗುರಲಿಂಗಪ್ಪ, ಗ್ರೇಡ್-2 ತಹಸೀಲ್ದಾರ ಗುರುರಾಜ ಸಂಗಾವಿ, ತಾಪಂ ಇಓ ಮಲ್ಲಿನಾಥ ರಾವೂರ, ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪ ಹಳ್ಳಿ, ಖಾಡಾ ಅಧ್ಯಕ್ಷ ಡಾ.ರಶೀದ್ ಮರ್ಚಂಟ್, ವಿಜಯಕುಮಾರ ಮಟ್ಟತ್ತಿ, ಮೃತ್ಯುಂಜಯ್ ಹಿರೇಮಠ, ಪೀರಪಾಶಾ, ಕಿರಣಕುಮಾರ ಚವ್ಹಾಣ,ಪೂಜಪ್ಪ ಮೇತ್ರೆ, ಮಲ್ಲಣ್ಣ ಮರತೂರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

emedialine

Recent Posts

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

7 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

7 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

7 hours ago

ಕನ್ನಡ ದೀಪೋತ್ಸವ: ವಿಜಯೀಭವ ಕೃತಿ ಜನಾರ್ಪಣೆ 24 ರಂದು

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…

7 hours ago

ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಿಂದ ವಿಭಾಗಿಯ ಮಟ್ಟಕ್ಕೆ ಆಯ್ಕೆ

ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…

7 hours ago

ಅಭಿವೃದ್ಧಿ ಪರ ಚಿಂತನೆಯಳ್ಳ ಪ್ರಬುದ್ದ ರಾಜಕಾರಣಿ ಪ್ರಿಯಾಂಕ್ ಖರ್ಗೆ

ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…

7 hours ago