ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿ ಹಿಡಿಯುವುದು ನಮ್ಮ ಕರ್ತವ್ಯ

0
228

ಶಹಾಬಾದ: ನಾವೆಲ್ಲಾ ಒಂದು, ಸಂವಿಧಾನವೇ ನಮಗೆ ಶ್ರೇಷ್ಠ. ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿ ಹಿಡಿಯುವುದರ ಮೂಲಕ ಅದರ ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪ ಹಳ್ಳಿ ಹೇಳಿದರು.

ಅವರು ರವಿವಾರ ತಾಲೂಕಾಡಳಿತ, ನಗರಸಭೆ, ತಾಪಂ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ವಾಡಿ ವೃತ್ತದಲ್ಲಿ ಆಯೋಜಿಸಲಾದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಮೂಲಕ ಮಾತನಾಡಿದರು.

Contact Your\'s Advertisement; 9902492681

ಪ್ರಜಾಪ್ರಭುತ್ವ ಎಂದರೆ ಯಾವುದೇ ವರ್ಗ, ಗುಂಪು ಅಥವಾ ವ್ಯಕ್ತಿಯ ಅಧೀನದಲ್ಲಿಲ್ಲದೆ ಜನತೆಯ ಅಧೀನದಲ್ಲಿರುವ ಸರ್ಕಾರ ಎಂಬುದನ್ನು ಸಾರ್ವಜನಿಕರು ಅರಿಯಬೇಕಾಗಿದೆ. ಪ್ರಜಾಪ್ರಭುತ್ವವು ಸ್ವಾತಂತ್ರ್ಯ, ಸಮಾನತೆ ಮತ್ತು ನ್ಯಾಯಕ್ಕಾಗಿ ನಮ್ಮ ಅತ್ಯುನ್ನತ ಆಕಾಂಕ್ಷೆಗಳನ್ನು ಸಾಕಾರಗೊಳಿಸುವ ಶಕ್ತಿಯುತ ಮತ್ತು ಕ್ರಿಯಾತ್ಮಕ ಶಕ್ತಿಯಾಗಿದೆ ಎಂದರು.ಕರ್ನಾಟಕ ಸರಕಾರ ಇಂತಹ ದಿಟ್ಟ ನಿರ್ಧಾರದ ಮೂಲಕ ಪ್ರಜಾಪ್ರಭುತ್ವದ ಸಾರವನ್ನು ತಿಳಿಸುವ ನಿಟ್ಟಿನಲ್ಲಿ ಆಯೋಜಿಸಿದ ಕಾರ್ಯಕ್ರಮ ಐತಿಹಾಸಿಕವಾದುದು ಎಂದರು.

ಪೌರಾಯುಕ್ತ ಡಾ. ಕೆ.ಗುರಲಿಂಗಪ್ಪ ಮಾತನಾಡಿ, ಭಾರತ ದೇಶವು ಆತ್ಯಂತ ಭವ್ಯ, ಶಕ್ತಿಶಾಲಿ ಮತ್ತು ಯಶಸ್ವಿ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ ದೇಶವಾಗಿದೆ. ದೇಶದಲ್ಲಿ ಪರಿಣಾಮಕಾರಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮೂಲ ಸಂವಿಧಾನ ಎಂದರು. ಉಪನ್ಯಾಸಕ ಪೀರಪಾಶಾ ಮಾತನಾಡಿದರು.

ಈ ಸಂದರ್ಭದಲ್ಲಿ ಖಾಡಾ ಅಧ್ಯಕ್ಷ ಡಾ.ರಶೀದ್ ಮರ್ಚಂಟ್, ಕೃಷ್ಣಪ್ಪ ಕರಣಿಕ್, ತಾಪಂ ಇಓ ಮಲ್ಲಿನಾಥ ರಾವೂರ, ಗ್ರೇಡ್-2 ತಹಸೀಲ್ದಾರ ಗುರುರಾಜ ಸಂಗಾವಿ, ಪಿಐ ನಟರಾಜ ಲಾಡೆ, ಬಸವರಾಜ ಮಯೂರ, ತಾಲೂಕಾ ದೈಹಿಕ ಶಿಕ್ಷಣಾಧಿಕಾರಿ ಶಿವಶರಣಪ್ಪ ಮಂಟಾಳೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪುತ್ರ ಕರಣಿಕ್, ಪಿ.ಎಸ್.ಮೇತ್ರೆ, ಕಿರಣಕುಮಾರ ಚವ್ಹಾಣ, ಫಜಲ್ ಪಟೇಲ್,ಮೃತ್ಯುಂಜಯ್ ಹಿರೇಮಠ, ದೇವೆಂದ್ರ ಕಾರೊಳ್ಳಿ, ಭೀಮುಗೌಡ ಖೇಣಿ, ಮಲ್ಲಣ್ಣ ಮರತೂರ,ಶಿವರಾಜ ಕೋರೆ, ಮಲ್ಲೇಶಿ ಭಜಂತ್ರಿ,ಹಾಷಮ್ ಖಾನ, ನಾಗೇಂದ್ರ ನಾಟೇಕಾರ, ಶರಣು ಪೂಜಾರ, ಶರಣಗೌಡ ಪಾಟೀಲ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿಗಳು ನಗರದ ಗಣ್ಯರು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ವಿಶ್ವಾದ್ಯಂತ ಪ್ರಜಾಪ್ರಭಯತ್ವದ ಮೌಲ್ಯಗಳು, ಆದರ್ಶಗಳು, ತತ್ವಗಳು ಮತ್ತು ಅದರ ಅನ್ವಯಿಕತೆಯನ್ನು ಒಳಗೊಂಡ ಬೃಹತ ನಿರ್ಣಯ ಹೊರಡಿಸಿದ ಐತಿಹಾಸಿಕ ದಿನವಾಗಿದೆ.ಪ್ರಜಾಪ್ರಭುತ್ವದ ಮೂಲಭೂತ ಹಕ್ಕು ಮತ್ತು ಸಾರ್ವತ್ರಿಕ ಮೌಲ್ಯವಾಗಿದೆ. ಪ್ರಜಾಪ್ರಭುತ್ವ ರಕ್ಷಿಸುವುದು, ಅದರ ಮೌಲ್ಯಗಳನ್ನು ಉತ್ತೇಜಿಸಿವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. – ಜಗದೀಶ ಚೌರ್ ತಹಸೀಲ್ದಾರ ಶಹಾಬಾದ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here