ಚಿತ್ತಾಪುರ: ಪಟ್ಟಣದ ನಾಗಾವಿ ಎಲ್ಲಮ ದೇವಸ್ಥಾನದಲ್ಲಿ ನಡೆದ ನಾಗಾವಿ ನಾಡು ನಾಟ್ಯ ಸಂಘದ ಸಭೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಆರು ಜನ ಸಾಧಕರಿಗೆ ನಾಗಾವಿ ನಕ್ಷತ್ರ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಚಂದರ್ ಚವ್ಹಾಣ ತಿಳಿಸಿದ್ದಾರೆ.
ರಂಗಭೂಮಿ ಕ್ಷೇತ್ರ, ವೈದ್ಯಕೀಯ ಕ್ಷೇತ್ರ, ಶಿಕ್ಷಣ ಕ್ಷೇತ್ರ, ಸಮಾಜ ಸೇವೆ ಕ್ಷೇತ್ರ, ಕೂಲಿ ಕಾರ್ಮಿಕ ಕ್ಷೇತ್ರ, ಮಾಧ್ಯಮ ಕ್ಷೇತ್ರ ಹೀಗೆ ಆರು ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ನಾಗಾವಿ ನಕ್ಷತ್ರ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಕಾಶಿನಾಥ ಬಿರಾದರ, ಉಪಾಧ್ಯಕ್ಷ ರವಿ ವಿಟ್ಕರ, ಸಂಘಟನಾ ಕಾರ್ಯದರ್ಶಿ ಅಯ್ಯಣ್ಣ ಗುತ್ತೇದಾರ, ಸಹ ಕಾರ್ಯದರ್ಶಿ ದೇವಿಂದ್ರ ಮಾಟನಳ್ಳಿ, ಖಜಾಂಚಿ ಶ್ರವಣಕುಮಾರ, ನಾಗಯ್ಯ ಸ್ವಾಮಿ, ಸದಾನಂದ ರಾಠೋಡ, ಹಣಮಂತ್ ಮಡ್ಡಿ, ವಿನೋದ ಪವಾರ, ಇರ್ಫಾನ್ ಬಲಾಲಾ, ಅಬ್ದುಲ್ ಮಜೀದ, ನಾಗರಾಜ ಕೊಳ್ಳಿ, ಸಂತೋಷ ಸೇರಿದಂತೆ ಅನೇಕ ಸದಸ್ಯರು ಇದ್ದರು.
ಇದೇ ಸಂದರ್ಭದಲ್ಲಿ ಶ್ರೀ ಗುರು ಕುಮಾರೇಶ್ವರ ನಾಟ್ಯ ಸಂಘ ಹಾನಗಲ್ ಇವರಿಂದ ನೀಡುತ್ತಿರುವ ಕುಮಾರ ಶ್ರೀ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಕಾಶಿನಾಥ ಬಿರಾದರ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…