ಕಲಬುರಗಿ: ಬಿಜೆಪಿ ಪಕ್ಷದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಭಟನೆ ಮಾಡುವುದಿದ್ದರೆ ಶಾಸಕ ಮುನಿರತ್ನ ವಿರುದ್ದ ಮಾಡಲಿ ಅದಕ್ಕೂ ಮೊದಲು ಶಿಕ್ಷಣ ಸಂಸ್ಥೆಗಾಗಿ ಪಡೆದ ಜಾಗದಲ್ಲಿ ಬಿರಿಯಾನಿ ಹೊಟೇಲ್ ನಡೆಸುತ್ತಿರುವುದರ ಬಗ್ಗೆ ಸ್ಪಷ್ಟನೆ ನೀಡಲಿ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಸರಕಾರದಲ್ಲ ನಯಾ ಪೈಸೆ ಕೊಡಲು ಆಗಿಲ್ಲಿ, ಸಂಪುಟ ಸಭೆ ನಡೆಯುತ್ತಿದನ್ನು ಸಹಿಸದೆ ಇಲ್ಲಿ ಬಂದು ಡ್ರಾಮಾ ಮಾಡಬಾರದು ಎಂದು ವಿಧಾನ ಪರಿಷತ್ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಟಾಂಗ್ ನೀಡಿದರು.
ಫಾಸ್ಟ್ ಟ್ರಾಕ್ ಕೋರ್ಟ್ ಆಗಬೇಕಿರುವುದು ಬಿಜೆಪಿ ಹಗರಣದ ಬಗ್ಗೆ ವಿಚಾರಣೆ ನಡೆಸಲು ಹೊರತು ದರ್ಶನ್ ಕೇಸ್ ಬಗ್ಗೆ ವಿಚಾರಣೆ ನಡೆಸಲು ಅಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಾಗಮಂಗಲ ಗಲಭೆ ವಿಚಾರ, ಸಮಗ್ರ ತನಿಖೆ ನಡೆಸಲಾಗುತ್ತಿದೆ. ಅದರ ಹಿಂದೆ ಯಾರೇ ಇದ್ದರೂ ಕಾನೂನು ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಈಗಾಗಲೇ ಹೇಳಿದ್ದಾರೆ ಎಂದು ಖರ್ಗೆ, ಗಲಭೆ ಬಗ್ಗೆ ಪರಿಶೀಲನೆ ಮಾಡಲು ಬಿಜೆಪಿ ಸತ್ಯಶೋಧನೆ ಸಮತಿ ರಚಿಸಿರುವ ಬಗ್ಗೆ ವ್ಯಂಗ್ಯವಾಡಿದರು. ರಾಜ್ಯದಲ್ಲಿ ಬರಗಾಲ ಇದ್ದಾಗ ಬಿಜೆಪಿ ಯಾಕೆ ಸತ್ಯಶೋಧನೆ ಸಮಿತಿ ರಚನೆ ಮಾಡಲಿಲ್ಲ? ಎಂದು ಪ್ರಶ್ನಿಸಿದರು.
ನಾಗಮಂಗಲ ಗಲಭೆ ಬಗ್ಗೆ ಮಾತನಾಡುವ ಪ್ರಧಾನಿ ಯಡಿಯೂರಪ್ಪನವರ ಪೋಕ್ಸೋ ಕೇಸಿನ ಬಗ್ಗೆ, ಮುನರತ್ನ ಕೇಸಿನ ಬಗ್ಗೆ ಯಾಕೆ ಮಾತನಾಡಲ್ಲ ? ಅವರಿಗೆ ಮಾಹಿತಿ ಹೋಗಿರುತ್ತದೆ ತಾನೇ ? ಎಂದು ಪ್ರಿಯಾಂಕ್ ಪ್ರಶ್ನಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ 30,000 ಹುದ್ದೆ ಭರ್ತಿ:
2013-18 ರ ಅವಧಿಯಲ್ಲಿ ಕಕ ಭಾಗದ13,000 ಶಿಕ್ಷಕರು ಸೇರಿದಂತೆ 30,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ 6500 ಶಿಕ್ಷಕರು ಸೇರಿದಂತೆ 15000 ಖಾಲಿ ಹುದ್ದೆ ತುಂಬಲಾಗುವುದು ನಂತರ ಎರಡು ವರ್ಷದ ಅವಧಿಯಲ್ಲಿ 25,000 ಹುದ್ದೆ ತುಂಬಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದರು.
ನಮ್ಮ ಸರ್ಕಾರದ ಅವಧಿ ಮುಗಿಯುವದರೊಳಗೆ 50,000 ಖಾಲಿಹುದ್ದೆ ತುಂಬುವುದಾಗಿ ಹಾಗೂ ವಾರ್ಷಿಕ 5000 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹಿರಿಯ ನಾಯಕರಾದ ಖರ್ಗೆ ಹಾಗೂ ಸಿಎಂ ಭರವಸೆ ನೀಡಿದ್ರು ಅದಕ್ಕೆ ಬದ್ಧವಾಗಿದ್ದೇವೆ ಎಂದರು.
ಬಿಜೆಪಿಯವರನ್ನು ಜನರು ತಿರಸ್ಕಾರ ಮಾಡಿದ್ದಾರೆ. ಅವರು ಸಕರಾತ್ಮಕ ರಾಜಕೀಯ ಮಾಡದೆ ಜನರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಮತ್ತು ಸತ್ಯಕ್ಕೆ ಸಂಬಂಧವೇ ಇಲ್ಲ ಎಂದು ಪಾಟೀಲ್ ಕುಟುಕಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಮ್ ಖಾನ್ ಸೇರಿದಂತೆ ಹಲವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…