ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಬಗ್ಗೆ ಚರ್ಚಿಸಿ ನೀಲಿ ನಕ್ಷೆ: ಸಚಿವ ಪ್ರಿಯಾಂಕ್ ಖರ್ಗೆ

ಇಂದು ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು ಬೆಳಿಗ್ಗೆ ಸರ್ದಾರ ವಲಭಭಾಯಿ ಪಟೇಲ್ ಅವರ ಪ್ರತಿಮೆ‌ ಮಾಲಾರ್ಪಣೆ ಮಾಡಿ ನಂತರ ಡಿಎಆರ್ ಮೈದಾನದಲ್ಲಿ‌ ಧ್ವಜಾರೋಹಣ ನೆರವೇರಿಸಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದ ಅವರು ಕಲ್ಯಾಣ ಕರ್ನಾಟಕ‌ ಭಾಗದ ಜನರ ಬಹು ನಿರೀಕ್ಷೆಯ‌ಂತೆ ಸಿಎಂ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಕಲಬುರಗಿ ಯಲ್ಲಿ ಸೆಪ್ಟೆಂಬರ್ 17 ರಂದು ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ದಿಯ ಕುರಿತು ಚರ್ಚಿಸಿ ನೀಲಿ ನಕ್ಷೆ ತಯಾರಿಸುವ ಬಗ್ಗೆಯೂ ಕೂಡಾ ನಿರ್ಧರಿಸಲಾಗುವುದು ಎಂದು ಅವರು ಹೇಳಿದರು.

ನಮ್ಮ ಭಾಗದ ಎಲ್ಲ ಶಾಸಕರ ಬೇಡಿಕೆಯ ಪಟ್ಟಿ ನೋಡಿದರೆ ರಾಜ್ಯದ ಬಜೆಟ್ ಗಾತ್ರದಷ್ಟಾಗುತ್ತದೆ. ಆದರೆ ಮ್ಯಾಕ್ರೋ ಯೋಜನೆಯಡಿಯಲ್ಲಿ ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಕೊನೆ ಪಕ್ಷ ಈ ಸಲ ಯೋಜನೆಗಳ ಬಗ್ಗೆ ಚರ್ಚಿಸಿದರೆ ಮುಂದಿನ ವರ್ಷವಾದರೂ ಯೋಜನೆ ಬರುತ್ತವೆ ಎಂದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದ ಸಚಿವರು ತಮ್ಮ ಸರ್ಕಾರ ಬಂದ ಮೇಲೆ ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ನಮ್ಮ ಇಲಾಖೆಯಲ್ಲಿಯೇ 800 ಇಂಜಿನಿಯರ್ ಗಳ ಹುದ್ದೆ ಭರ್ತಿ ಮಾಡಲಾಗಿದೆ ಎಂದರು.

ಮುಂದಿನ ಎರಡು ವರ್ಷದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ನಮ್ಮ ಭಾಗದ ರಸ್ತೆಗಳ ರಿಪೇರಿ ಹಾಗೂ ಉನ್ನತಿಕರಣ ಮಾಡಲಾಗುವುದು ಎಂದು ಹೇಳಿದ ಖರ್ಗೆ, ಕಲಬುರಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಬಗ್ಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ನಮ್ಮ ಭಾಗದ ಅಭಿವೃದ್ದಿ ವಿಚಾರದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಅವರು ಭರವಸೆ ನೀಡಿದರು.

ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಹಂತಹಂತವಾಗಿ ತುಂಬಲಾಗುವುದು ಎಂದು ಇದೇ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಮ್ ಖಾನ್, ಜಿಲ್ಲಾಧಿಕಾರಿ ಫೌಜಿಯಾ ತರನ್ನೂಮ್, ಜಿಲ್ಲಾ ಪಂಚಾಯತಿ ಸಿಇಓ ಸೇರಿದಂತೆ ಇತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

9 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

19 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

19 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

19 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago