ಕಲಬುರಗಿ; ನಾಳೆ 19ನೇ ಸಚಿವ ಸಂಪುಟ ಸಭೆ: ನಿಷೇದಾಜ್ಞೆ ಜಾರಿ

ಕಲಬುರಗಿ: ಕಲಬುರಗಿಯಲ್ಲಿ ನಡೆಯಲಿರುವ 19ನೇ ಸಚಿವ ಸಂಪುಟದ ಸಭೆ ಹಿನ್ನೆಲೆಯಲ್ಲಿ ಮಿನಿ ವಿಧಾನ ಸೌಧ ಜಿಲ್ಲಾಧಿಕಾರಿಗಳ ಕಚೇರಿಯ ವ್ಯಾಪ್ತಿಯ ಸುತ್ತ ಮುತ್ತ 200 ಮೀಟರೆಗೆ ನಗರದ ಉಪ ಪೊಲೀಸ್ ಆಯುಕ್ತರು, (ಕಾ & ಸು) ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳಾಗಿರುವ ಐಪಿಎಸ್ ಕನಿಕಾ ಸಿಕ್ರಿವಾಲ ಅವರು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯ ವೇಳೆ ಸಂಘಟನೆಗಳು, ಪ್ರತಿಭಟನೆ ಮತ್ತು ಮುಷ್ಕರ ಮಾಡುವ ಸಾದ್ಯತೆ ಇರುವುದರಿಂದ ಕಾನೂನು ಸುವ್ಯಸ್ಥೆ ಹಿತದೃಷ್ಠಿಯಿಂದ ಸುಂಗಮ ಸಚಿವ ಸಂಪುಟ ಸಭೆ ನಡೆಸಲು ಆಯುಕ್ತರು ದಂಡ ಪ್ರಕ್ರಿಯಾ ಸಂಹಿತೆಯ ಕಲಂ 163 ನೇ ಪ್ರಕರಣದ ಅನ್ವಯ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ ಸಚಿವ ಸಂಪುಟ ನಡೆಯುವ ಸ್ಥಳದಿಂದ 200 ಮೀಟರ ಬಿ.ಎನ್.ಎಸ್.ಎಸ್ ಕಾಯ್ದೆ ಪ್ರಕ್ರಿಯಾ ಸಂಹಿತೆ ಕಾಯ್ದೆ 1973 ರ ಕಲಂ: 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಮಂಗಳವಾರ 10 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ಈ ಪ್ರದೇಶದಲ್ಲಿ ನಿಷೇಧಾಜ್ಞೆ ಹೊರಡಿಸಿರುವ ಅವರು ಮೆರವಣಿಗೆ, ಪ್ರತಿಭಟನೆ, ಸಭೆ, 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಶಸ್ತ್ರಗಳನ್ನು, ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ, ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇವಸ್ತುಗಳನ್ನು ಒಯ್ಯುವುದು, ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಮತ್ತು ಶೇಖರಿಸುವುದು, ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

12 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

22 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

22 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

22 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago