4ನೇ ಇಸ್ಲಾಮಿಕ್ ಕಲಾ ಪ್ರದರ್ಶನ ಉದ್ಘಾಟನೆ | ಕಲೆಗೆ ಕ್ರಾಂತಿ ತರುವ ಶಕ್ತಿ ಇದೆ: ಕೆ ನೀಲಾ

ಕಲಬುರಗಿ: ಈ ಜಗತ್ತಿನಲ್ಲಿ ಕ್ರಾಂತಿಯನ್ನು ತರುವಲ್ಲಿ ಕಲೆ ಯಾವಾಗಲೂ ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ಭಾμÉ ಯಾವುದೇ ಧರ್ಮಕ್ಕೆ ಸೇರಿಲ್ಲ ಎಂದು ಸಾಮಾಜಿಕ ಕಾರ್ಯಕರ್ತೆ ನೀಲಾ ಕೆ ಅವರು ಹೇಳಿದರು.

ಸೋಮವಾರ ಹಿದಾಯತ್ ಸೆಂಟರ್‍ನಲ್ಲಿ ಈದ್ ಮಿಲಾದ್ (ಪ್ರವಾದಿ ಮುಹಮ್ಮದ್ ಅವರ ಜನ್ಮದಿನ) ಅಂಗವಾಗಿ ಆಯೋಜಿಸಲಾದ 4 ನೇ ಇಸ್ಲಾಮಿಕ್ ಕಲಾ ಪ್ರದರ್ಶನದಲ್ಲಿ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿದರು.ಹಲವಾರು ಸಮುದಾಯಗಳ ಕಲಾವಿದರು ವಿಭಿನ್ನ ಚಿತ್ರಗಳ ಮೂಲಕ ತಮ್ಮ ಆಲೋಚನೆಗಳನ್ನು ಪ್ರದರ್ಶಿಸಿದ್ದು ಸಂತೋಷದ ಕ್ಷಣವಾಗಿದೆ ಎಂದು ಅವರು ಹೇಳಿದರು. ಒಗ್ಗಟ್ಟು ಇಂದಿನ ದಿನಗಳಲ್ಲಿ ಅತ್ಯಂತ ಮುಖ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಎರಡು ದಿನಗಳ ಕಲಾ ಪ್ರದರ್ಶನದಲ್ಲಿ ಕಲಬುರಗಿ, ಚಿತ್ರದುರ್ಗ, ಧಾರವಾಡ, ಹುಮನಾಬಾದ್, ಬೀದರ್, ಬಿಜಾಪುರ, ಬಸವಕಲ್ಯಾಣ, ಶಹಾಪುರ ಸೇರಿದಂತೆ ರಾಜ್ಯದ 32 ಕಲಾವಿದರು ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸಿದ್ದಾರೆ ಎಂದು ಪ್ರದರ್ಶನದ ಸಂಚಾಲಕ ಮಹಮ್ಮದ್ ಅಯಾಜೋದ್ದೀನ್ ಪಟೇಲ್ ವಿವರಿಸಿದರು.

ಬಹಮನಿ ಫೌಂಡೇಶನ್ ಅಧ್ಯಕ್ಷ ರಿಜ್ವಾನ್ ಉರ್ ರೆಹಮಾನ್ ಸಿದ್ದಿಕಿ ಪ್ರದರ್ಶನವನ್ನು ಉದ್ಘಾಟಿಸಿದರು.ಖ್ಯಾತ ಕಲಾವಿದ ಬಸವರಾಜ ಆರ್.ಉಪ್ಪಿನ್, ಜೀ ಮೌಂಟ್ ಲಿಟರಾ ಶಾಲೆಯ ಅಧ್ಯಕ್ಷ ತಾಹೆರ್ ಅಲಿ, ಸರ್ಕಾರಿ ನಿವೃತ್ತ ಅಲ್ಪಸಂಖ್ಯಾತ ನೌಕರರ ಸಂಘದ ಅಧ್ಯಕ್ಷ ಸೈಯದ್ ನಜೀರುದ್ದೀನ್ ಮುತವಳ್ಳಿ, ಎಂಜಿನಿಯರ್ ಅಬ್ದುಲ್ ಕಾದರ್ ಅತಿಥಿಗಳಾಗಿದ್ದರು.

ಖ್ಯಾತ ಕಲಾವಿದ ಸುಬ್ಬಯ್ಯ ನೀಲಾ, ರಾಜಶೇಖರ್ ಶಾಮಣ್ಣ, ರೆಹಮಾನ್ ಪಟೇಲ್, ಶಾಹೆದ್ ಪಾμÁ, ಶೇಕ್ ಅಹ್ಸಾನ್, ಕಹಕಶನ್ ನಜನೀನ್, ದಾದಾಪೀರ್, ವೀರಶೆಟ್ಟಿ ಮಾಲಿಪಾಟೀಲ್, ಸೈಯದ್ ಮುಸ್ತಫಾ, ಬಿಎನ್ ಪಾಟೀಲ್, ಅರ್ಮಾಖಾನ್ ಸೇರಿದಂತೆ ಹಲವರು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು.

ಪ್ರದರ್ಶನವು ಸಾರ್ವಜನಿಕರಿಗೆ ಸೆಪ್ಟೆಂಬರ್ 18 ರವರೆಗೆ ಬೆಳಿಗ್ಗೆ 10.30 ರಿಂದ ಸಂಜೆ 7 ರವರೆಗೆ ತೆರೆದಿರುತ್ತದೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

13 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

23 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

23 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

23 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago