ಚುನಾಯಿತ ಪ್ರತಿನಿಧಿಗಳ ವೈಫಲ್ಯಗಳನ್ನು ಪ್ರಶ್ನಿಸಲು ಜನತೆ ವಿಫಲವಾಗಿರುವುದೇ ಈ ಭಾಗದ ಹಿನ್ನಡೆಗೆ ಕಾರಣ

0
39

ಕಲಬುರಗಿ; ಕಲ್ಯಾಣ ಕರ್ನಾಟಕ ಭಾಗದ ಜನರು ಇಷ್ಟು ವರ್ಷಗಳಿಂದ, ಎಲ್ಲಾ ವಲಯದಲ್ಲಿ ಚುನಾಯಿತ ಪ್ರತಿನಿಧಿಗಳ ವೈಫಲ್ಯವನ್ನು ಪ್ರಶ್ನಿಸದಿರುವುದು ಈ ಭಾಗದ ಹಿನ್ನಡೆಗೆ ಪ್ರಮುಖ ಕಾರಣ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ಹಾಗೂ ಆಳಂದ ಶಾಸಕ ಬಿ. ಆರ್. ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.

ಕಲಬುರಗಿ ನಗರದ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ಸೋಮವಾರದಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಕಲ್ಯಾಣ ಕರ್ನಾಟಕದ ರಚನಾತ್ಮಕ ಅಭಿವೃದ್ಧಿ ಮತ್ತು ಸಂವಿಧಾನದ 371 (ಜೆ) ಕಲಂ ಅನುμÁ್ಠನದಲ್ಲಿನ ಸಾಧನೆಗಳು ಮತ್ತು ಸಮಸ್ಯೆಗಳು” ಕುರಿತು ಒಂದು ದಿನದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

ಪಾಟೀಲ್ ಅವರು ಕಲ್ಯಾಣ ಕರ್ನಾಟಕ ಪ್ರದೇಶದ ಇತಿಹಾಸವನ್ನು ಮತ್ತು ಬ್ರಿಟಿಷರಿಂದ ಭಾರತಕ್ಕೆ ಸ್ವಾತಂತ್ರ್ಯ ದೊರೆತ 13 ತಿಂಗಳ ನಂತರ ಅದು ಭಾರತಕ್ಕೆ ಹೇಗೆ ವಿಲೀನಗೊಂಡಿತು ಎಂದು ವಿವರಿಸಿದರು. ನಿಜಾಮ ಮತ್ತು ಭಾರತೀಯ ಒಕ್ಕೂಟದ ನಡುವಿನ ಒಪ್ಪಂದದ ಪ್ರಕಾರ, ಕಲ್ಯಾಣ ಕರ್ನಾಟಕವನ್ನೂ ಒಳಗೊಂಡಿರುವ ಹೈದರಾಬಾದ್ ಪ್ರಾಂತ್ಯಕ್ಕೂ ಭಾರತವನ್ನು ವಿಸ್ತರಿಸಿ, ಕರ್ನಾಟಕದ ಇತರ ಪ್ರದೇಶಗಳು ಅನುಭವಿಸಿದ ಎಲ್ಲಾ ಪ್ರಯೋಜನಗಳನ್ನು ಕಲ್ಯಾಣ ಕರ್ನಾಟಕ್ಕೆ ಒದಗಿಸುವುದು ಸೇರಿದಂತೆ ಎಲ್ಲಾ ವಿಷಯವನ್ನು ವಿವರವಾಗಿ ಹೇಳಿದರು.

ಪಾಟೀಲ ಅವರು ಮಾತನಾಡಿ, ಕರ್ನಾಟಕ ಮತ್ತು ಭಾರತದ ಎಲ್ಲಾ ಭಾಗಗಳು ಸಮಾನವಾಗಿ ಅಭಿವೃದ್ಧಿ ಹೊಂದಿದ್ದರೂ ಕಲ್ಯಾಣ ಕರ್ನಾಟಕ ಪ್ರದೇಶವು ಹಲವು ಐತಿಹಾಸಿಕ ಕಾರಣಗಳಿಂದ ಹಿಂದುಳಿದಿದೆ ಮತ್ತು ಚುನಾಯಿತ ಪ್ರತಿನಿಧಿಗಳನ್ನು ಪ್ರಶ್ನಿಸುವ ಮತ್ತು ಸರ್ಕಾರದ ಅಭಿವೃದ್ಧಿ ಚಟುವಟಿಕೆಗಳಲ್ಲಿ ಸಮಾನ ಅವಕಾಶವನ್ನು ಪಡೆಯುವ ಇಚ್ಛಾಶಕ್ತಿ ಹಾಗೂ ಧೈರ್ಯದ ಕೊರತೆ ಕಲ್ಯಾಣ ಕರ್ನಾಟಕ ಭಾಗದ ಜನರಲ್ಲಿದೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಹಣದ ಕೊರತೆ ಇಲ್ಲ ಎಂದ ಅವರು, ಲಭ್ಯವಿರುವ ಅನುದಾನವನ್ನು ಸರಿಯಾಗಿ ಬಳಸಿಕೊಂಡು ಈ ಭಾಗದ ಅಭಿವೃದ್ಧಿಗೆ ಹಾಗೂ ಹಲವಾರು ಕ್ಷೇತ್ರಗಳಲ್ಲಿ ಆಗಿರುವ ಹಿನ್ನಡೆಯನ್ನು ಹೋಗಲಾಡಿಸಬೇಕು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ಈ ಪ್ರದೇಶದ ಅಭಿವೃದ್ಧಿಗೆ ದೃಷ್ಟಿಕೋನ ಯೋಜನೆಯನ್ನು ಸಿದ್ಧಪಡಿಸುವುದರ ಜೊತೆಗೆ ಅಭಿವೃದ್ಧಿಯ ಆದ್ಯತೆಯ ಕ್ಷೇತ್ರಗಳನ್ನು ಸಹ ರಚಿಸಬೇಕು.

ಈ ದೂರದೃಷ್ಟಿಕೋನ ಯೋಜನೆಗೆ ಪ್ರಚೋದನೆಯನ್ನು ನೀಡಬೇಕು. ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಶೇ.90 ರಷ್ಟು ಬೋಧಕ ಹುದ್ದೆಗಳು ಖಾಲಿ ಇದ್ದು, “ಇಂತಹ ದೊಡ್ಡ ಹುದ್ದೆಯೊಂದಿಗೆ ಉನ್ನತ ಶಿಕ್ಷಣ ಕೇಂದ್ರವು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಈ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ತನ್ನ ಕರ್ತವ್ಯವನ್ನು ಹೇಗೆ ನಿರ್ವಹಿಸುತ್ತದೆ” ಎಂದು ಶ್ರೀ ಪಾಟೀಲ್ ನೋವಿನಿಂದ ಹೇಳಿದರು.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಕುರಿತು ವಿಶೇಷ ಉಪನ್ಯಾಸ ನೀಡಿದ ಖ್ಯಾತ ಅರ್ಥಶಾಸ್ತ್ರಜ್ಞ ಪೆÇ್ರ. ಟಿ. ಆರ್. ಚಂದ್ರಶೇಖರ್, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯು ಈ ಪ್ರದೇಶದ ಹಿಂದುಳಿದಿರುವಿಕೆಯನ್ನು ಹೋಗಲಾಡಿಸುವ ಕ್ರಿಯಾ ಯೋಜನೆಯಲ್ಲಿ ಹಲವಾರು ವ್ಯತ್ಯಾಸಗಳನ್ನು ಎತ್ತಿ ತೋರಿಸಿದರು ಮತ್ತು “ಕನ್ಸಟ್ರಕ್ಷನ್, ಕಾಂಟ್ರಾಕ್ಟ್ ಮತ್ತು ಕಮಿಷನ್” ಇದು ಪ್ರತಿ ವರ್ಷ ರಾಜ್ಯ ಸರ್ಕಾರದಿಂದ ಲಭ್ಯವಾಗುವ ಹಣವನ್ನು ಬಳಸಿಕೊಳ್ಳುವುದು ಮಂಡಳಿಯ ಮುಖ್ಯ ಧ್ಯೇಯವಾಕ್ಯವಾಗಿದೆ ಎಂದರು.

ಮಂಡಳಿಯ ಎಡಬಿಡಂಗಿ ಅಭಿವೃದ್ಧಿ ಯೋಜನೆಗಳು ಮತ್ತು ಅನುμÁ್ಠನವು ತನ್ನ ವಾರ್ಷಿಕ ವರದಿಗಳಲ್ಲಿ ಸಿಎಜಿಯ ಕೆಂಗಣ್ಣಿಗೆ ಗುರಿಯಾಗಿದೆ ಮತ್ತು ಮಂಡಳಿಯ ಅಭಿವೃದ್ಧಿಯ ಕ್ಷೇತ್ರಗಳು ಮಾನವ ಸಂಪನ್ಮೂಲಗಳ ಅಭಿವೃದ್ಧಿಗೆ ಪ್ರಾಮುಖ್ಯತೆಯನ್ನು ನೀಡುವ ಬದಲು ರಸ್ತೆಗಳನ್ನು ನಿರ್ಮಿಸುತ್ತಿರುವುದು ಕಂಡುಬಂದಿದೆ ಎಂದು ಪೆÇ್ರ. ಚಂದ್ರಶೇಖರ್ ಹೇಳಿದರು.

“ರಸ್ತೆಗಳನ್ನು ನಿರ್ಮಿಸುವುದು, ವಿಮಾನ ನಿಲ್ದಾಣಗಳನ್ನು ನಿರ್ಮಿಸುವುದು ಈ ಪ್ರದೇಶದ ಹಿಂದುಳಿದಿರುವಿಕೆಯನ್ನು ತೊಡೆದುಹಾಕಲು ಸಹಾಯ ಮಾಡುವುದಿಲ್ಲ, ಆದರೆ ಆರೋಗ್ಯ ಮತ್ತು ಶಿಕ್ಷಣ ಸೂಚ್ಯಂಕದ ಪ್ರಕಾರ, ಆರೋಗ್ಯ ಮೂಲಸೌಕರ್ಯವನ್ನು ಸುಧಾರಿಸುವುದು ಮತ್ತು ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಈ ಪ್ರದೇಶದ ಅಭಿವೃದ್ಧಿ ಸೂಚ್ಯಂಕದಲ್ಲಿ ಸ್ವಯಂಚಾಲಿತವಾಗಿ ಹೆಚ್ಚಳಕ್ಕೆ ಕಾರಣವಾಗುತ್ತದೆ” ಕಲ್ಯಾಣ ಕರ್ನಾಟಕ ಪ್ರದೇಶದ ಆರೋಗ್ಯ ಮತ್ತು ಶಿಕ್ಷಣ ಸೂಚ್ಯಂಕವು ತೀರಾ ಕೆಳಮಟ್ಟದಲ್ಲಿದೆ.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಶೇಕಡಾ 75 ರಷ್ಟು ಮಹಿಳೆಯರು ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ ಮತ್ತು ಅದೇ ರೀತಿ ಹೆಚ್ಚಿನ ಸಂಖ್ಯೆಯ ಮಕ್ಕಳು ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ ಮತ್ತು ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಅಥವಾ ಮಂಡಳಿಯಿಂದ ಯಾವುದೇ ಪ್ರಯತ್ನ ಮಾಡಲಾಗಿಲ್ಲ. ರಾಜ್ಯದಲ್ಲಿ ಮಹಿಳಾ ಸಾಕ್ಷರತೆ ಪ್ರಮಾಣ ಸರಾಸರಿ ಶೇಕಡಾ 70 ರಷ್ಟರ ಪ್ರಮಾಣಕ್ಕೆ ಹೋಲಿಸಿದರೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮಹಿಳಾ ಸಾಕ್ಷರತೆ ಶೇಕಡಾ 48 ರಷ್ಟಿದೆ ಎಂದು ತಿಳಿಸಿದರು.

ಪೆÇ್ರ. ಚಂದ್ರಶೇಖರ್ ಮಾತನಾಡಿ, ಒಂದು ಪ್ರದೇಶದ ಹಿಂದುಳಿದಿರುವಿಕೆಯನ್ನು ಹೋಗಲಾಡಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುವ ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯನ್ನು ಅರಿತು, ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಲು ಅಭಿವೃದ್ಧಿ ಮಂಡಳಿಗಳಿಗೆ ಪ್ರತಿ ವರ್ಷ ಅನುದಾನ ನೀಡಬೇಕು ಎಂದು ಆಗ್ರಹಿಸಿದರು.

ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಹಾಗೂ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಗೌರವಾಧ್ಯಕ್ಷ ಶ್ರೀ ಬಸವರಾಜ ದೇಶಮುಖ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿದ್ದರು. ರಜಾಕ್ ಉಸ್ತಾದ್ ಅವರು 371 (ಜೆ) ಕಲಂ ಅನುμÁ್ಠನದಲ್ಲಿನ ಸಾಧನೆಗಳು ಮತ್ತು ಅದರ ಸಮಸ್ಯೆಗಳ ಕುರಿತು ಮತ್ತು ಪೆÇ್ರ. ಬಸವರಾಜ ಕುಮ್ನೂರ ಅವರು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಕುರಿತು ಉಪನ್ಯಾಸ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here