ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಣಯ ಕೈಗೊಳ್ಳುವ ನಿರೀಕ್ಷೆ ಇದೆ: ಭೀಮನಗೌಡ ಪರಗೊಂಡ

0
94

ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ ಜನರ ಬೇಡಿಕೆಗೆ ಈ ಸಚಿವ ಸಂಪುಟ ಸಭೆಯಲ್ಲಿ ಹಲವಾರು ನಿರ್ಣಯಗಳನ್ನು ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಕಾರ್ಯದರ್ಶಿ ಹಾಗೂ ನ್ಯಾಯವಾದಿಗಳಾದ ಭೀಮನಗೌಡ ಪರಗೊಂಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕ ಭಾಗದ ವಕೀಲರಿಗಾಗಿ ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ಯಾಕೆ ಇನ್ನು ಸ್ಥಾಪನೆ ಮಾಡಬೇಕು ಹಾಗೂ ವಕೀಲರ ಕ್ಷೇಮಾಭಿವೃದ್ಧಿಗಾಗಿ ನೂತನ ವಿಮೆಯನ್ನು ಹಾಗೂ ವಕೀಲರ ಕಲ್ಯಾಣಕ್ಕಾಗಿ 50 ಕೋಟಿ ಮೀಸಲು ಇಡಬಹುದು ಎಂಬ ಭಾವನೆಯು ಈ ಭಾಗದ ವಕೀಲರಲ್ಲಿ ತಲೆದೂರಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಗ್ರಾಮೀಣಾಭಿವದ್ದಿ, ಪಂಚಾಯತ ರಾಜ್ ಇಲಾಖೆಯ ಸಚಿವ ಪ್ರಿಯಾಂಕ ಖರ್ಗೆ ಅವರು ಈ ಬಗ್ಗೆ ಗಮನ ಹರಿಸಿ, ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡುತ್ತಾರೆ ಎಂಬ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here