ಶಹಾಬಾದ: ಎರಡನೇ ಸ್ವಾತಂತ್ರ್ಯ ಹೋರಾಟವೆಂದೇ ಬಣ್ಣಿಸಲಾಗುವ ಹೈದ್ರಾಬಾದ ಕರ್ನಾಟಕ ವಿಮೋಚನಾ ಹೋರಾಟದಲ್ಲಿ ಪಾಲ್ಗೊಂಡು ತ್ಯಾಗ, ಬಲಿದಾನ ಮಾಡಿದ ಅನೇಕ ಹೋರಾಟ ಮಾಡಿದ ಮಹನೀಯರ ಕೆಚ್ಚು ಮತ್ತು ಅವರ ಆದರ್ಶ ನಮ್ಮೆಲ್ಲರ ಬದುಕಿಗೆ ಸ್ಪೂರ್ತಿಯಾಗಲಿ ಎಂದು ಡಿವಾಯ್‍ಎಸ್‍ಪಿ ಶಂಕರಗೌಡ ಪಾಟೀಲ ಹೇಳಿದರು.
ಅವರು ಮಂಗಳವಾರ ನಗರದ ಡಿವಾಯ್‍ಎಸ್‍ಪಿ ಕಚೇರಿಯಲ್ಲಿ ಆಯೋಜಿಸಲಾದ ಕಲ್ಯಾಣ ಕರ್ನಾಟಕ ಉತ್ಸವ ದಿನದ ಕಾರ್ಯಕ್ರಮದಲ್ಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಭಾರತ ಬ್ರಿಟಿಷರಿಂದ ಸ್ವತಂತ್ರ ಪಡೆದರೂ, ಹೈದ್ರಬಾದ ಕರ್ನಾಟಕ ಮಾತ್ರ ನಿಜಾಮನ ಕೆಟ್ಟ ಕ್ರೌರ್ಯಕ್ಕೆ ಒಳಗಾಗಿ ಜನರು ಬದುಕದಂತಾಗಿ, ಸ್ವಾತಂತ್ಯ್ರ ಹೋರಾಟಕ್ಕಿಂತ ನಿಜಾಮಶಾಹಿ ವಿರುದ್ಧದ ಹೋರಾಟದಲ್ಲಿ ಸಕ್ರೀಯವಾಗಿ ನಾಯಕರು ಪಾಲ್ಗೊಂಡು ಹೈದ್ರಬಾದ ಸಂಸ್ಥಾನ 1948 ಸೆಪ್ಟೆಂಬರ್ 17 ರಂದು ವಿಮೋಚನೆ ಪಡೆಯುವಂತಾದುದು ಚಾರಿತ್ರಿಕ ಸಂಗತಿ ಎಂದು ಹೇಳಿದರು.
ನಗರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ನಟರಾಜ ಲಾಡೆ ಮಾತನಾಡಿ, ಮಹಾನ್ ನಾಯಕರ ತ್ಯಾಗ ಬಲಿದಾನಗಳ ಫಲವಾಗಿ ಹೈದ್ರಬಾದ ಕರ್ನಾಟಕ ಪ್ರದೇಶ ನಿಜಾಮಶಾಹಿ ಕಪಿ ಮುಷ್ಠಿಯಿಂದ ಬಿಡುಗಡೆಗೊಂಡಿತು, ಹೋರಾಟ ಮಾಡಿದ ನಾಯಕರ ರಾಷ್ಟ್ರ ಪ್ರೇಮ ನಮ್ಮೆಲ್ಲರ ಬದುಕಿಗೆ ಪ್ರೇರಣೆಯಾಗಬೇಕು ಅನ್ಯಾಯಗಳ ವಿರುದ್ಧ ಧ್ವನಿ ಎತ್ತಿ ಸತ್ಯಕ್ಕಾಗಿ ಹೋರಾಟ ಮಾಡಬೇಕಾಗಿದೆ. ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದವರನ್ನು ಸ್ಮರಿಸುವ ಮೂಲಕ ಎರಡನೇ ಸ್ವತಂತ್ರೋತ್ಸವವನ್ನು ಅರ್ಥ ಗರ್ಭಿತಗೊಳಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಡಿವಾಯ್‍ಎಸ್‍ಪಿ ಕಚೇರಿಯ ಹಾಗೂ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಇದ್ದರು.
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…