ಕಲಬುರಗಿ: ವಿಧಾನ ಸಭೆ ಚುನಾವಣೆಯಲ್ಲಿ ಮುಸ್ಲಿಮರಿಗೆ ಶೇಕಡಾ ನಾಲ್ಕರಷ್ಟು ಮೀಸಲಾತಿ ನೀಡುವ ಭರವಸೆ ಕೂಡಲೇ ಈಡೇರಿಸಬೇಕೆಂದು ಒತ್ತಾಯಿಸಿ ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಸೆ. 17 ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ನಿಮತ್ತು ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಸಚಿವ ಸಂಪುಟದ ಹಿನ್ನೆಲೆಯಲ್ಲಿ ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿಗಳು ಪೊಲೀಸ್ ಪರೇಡ್ ಮೈದಾನದಲ್ಲಿ ಸಾರ್ವಜನಿಕರಿಂದ ಆಹ್ವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಿದರು.
ಮುಸ್ಲಿಮ್ ಸಮುದಾಯವು ಶಿಕ್ಷಣ,ಉದ್ಯೋಗ, ಆರ್ಥಿಕತೆ ಹೀಗೆ ಎಲ್ಲಾ ರಂಗಗಳಲ್ಲಿ ತೀರಾ ಹಿಂದುಳಿದಿದೆ. ಸಾಚಾರ್ ಸಮಿತಿಯ ವರದಿಯು ಇದನ್ನು ಬಹಿರಂಗ ಪಡಿಸಿದೆ. ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದ ಅಲ್ಪಸಂಖ್ಯಾತರು ಈ ಕ್ಷೇತ್ರಗಳಲ್ಲಿ ತೀರಾ ಹಿಂದುಳಿದಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಜನಸಂಖ್ಯೆ ಗೆ ಅನುಗುಣವಾಗಿ ಬಜೆಟ್ ನೀಡಿ ಈ ಭಾಗದ ಅಭಿರುದ್ಧಿಗೆ ವಿಶೇಷ ಕಾಳಜಿ ವಹಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಅಬ್ದುಲ್ ಖಾದಿರ್, ರಾಜ್ಯ ಕಾರ್ಯದರ್ಶಿ ಮುಬಿನ್ ಅಹ್ಮದ್, ಜಿಲ್ಲಾ ಕಾರ್ಯನಿರತ ಅಧ್ಯಕ್ಷರಾದ ಸಲೀಮ್ ಅಹ್ಮದ್ ಚಿತಾಪುರಿ, ಯುವ ಕರ್ನಾಟಕ ಕರ್ಯದರ್ಶಿ ಫಹಾದ್ ಮೊಹಸಿನ್ ಇದ್ದರು.