ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು
ಕೊಪ್ಪಳ, ರಾಯಚೂರು,ಬಳ್ಳಾರಿ ಹಾಗೂ ನೆರೆಯ ಆಂಧ್ರಪ್ರದೇಶ ಕಡಪಾ,ಕರ್ನೂಲು ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ತುಂಗಭದ್ರಾ ನದಿಗೆ ಹೊಸಪೇಟೆ-ಕೊಪ್ಪಳ ಮಧ್ಯೆ ಇರುವ ಜಲಾಶಯದ 19 ನೇ ಕ್ರೆಸ್ಟಗೇಟು ಸುಮಾರು ಒಂದು ತಿಂಗಳ ಹಿಂದೆ ಕಿತ್ತು ಹೋಗಿ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿದುಹೋಗುತ್ತಿತ್ತು,ರೈತರು ಆತಂಕಗೊಂಡಿದ್ದರು, ಸರ್ಕಾರ,ಸ್ಥಳೀಯ ಜನಪ್ರತಿನಿಧಿಗಳು ,ಇಂಜಿನಿಯರುಗಳು ತೋರಿದ ಕಾಳಜಿ ಹಾಗೂ ತಜ್ಞ ಕನ್ಹಯ್ಯ ನಾಯ್ಡು ನೇತೃತ್ವ ನೂರಾರು ಕಾರ್ಮಿಕರ ತಂಡ ಶ್ರಮವಹಿಸಿ ಕೇವಲ ಐದು ದಿನಗಳಲ್ಲಿ ಗೇಟು ಅಳವಡಿಸಿ ನೀರು ಪೋಲಾಗುವುದನ್ನು ನಿಯಂತ್ರಿಸಿದರು.ಪರಿಣಾಮವಾಗಿ ಈಗ ಜಲಾಶಯ ಪುನಃ ಭರ್ತಿಯಾಗಿದೆ.
ಕ್ರೆಸ್ಟ್ ಗೇಟ್ ದುರಸ್ತಿಗೆ ಶ್ರಮಿಸಿದ ಎಲ್ಲ ಅಧಿಕಾರಿಗಳು, ಇಂಜನಿಯರು ಹಾಗೂ ಕಾರ್ಮಿಕರು ಸೇರಿ ಸುಮಾರು 108 ಜನರಿಗೆ ಅಂದು ಸತ್ಕರಿಸಿ,ಗೌರವಿಸಲಾಗುವುದು ಎಂದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…