ಪ್ರತ್ಯೇಕ ಸಚಿವಾಲಯಕ್ಕೆ ಕಾಲಮಿತಿ ಅಗತ್ಯ

0
77

ಕಲಬುರಗಿ: ಮಂಗಳವಾರ ನಗರದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಗರದಲ್ಲಿ ಪ್ರತ್ಯೇಕ ಆರಂಭಿಸುವ ನಿರ್ಧಾರ ಕೈಗೊಂಡಿರುವ ರಾಜ್ಯ ಸರಕಾರದ ಕ್ರಮಕ್ಕೆ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಗೌರವಾಧ್ಯಕ್ಷ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮತ್ತು ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಸಂತಸ ವ್ಯಕ್ತಪಡಿಸಿದರು.

ಶರಣ ಬಸವ ವಿಶ್ವವಿದ್ಯಾಲಯದಲ್ಲಿರುವ ಕಾರ್ಯದರ್ಶಿಗಳ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದ ಅವರು, ಕಲಬುರಗಿಯಲ್ಲಿ ಪ್ರತ್ಯೇಕ ಸಚಿವಾಲಯ ಆರಂಭಗೊಳಿಸುವ ಕೆಲಸ ಕಾಲಮಿತಿಯಲ್ಲಿ ಆಗಬೇಕು. ಮುಂದಿನ ಎಂಟು ದಿನಗಳಿಂದ ಒಂದು ತಿಂಗಳೊಳಗೆ ಸಚಿವಾಲಯ ಕಾರ್ಯಾರಂಭ ಮಾಡಬೇಕು ಎಂದು ಒತ್ತಾಯಿಸಿದರು.

Contact Your\'s Advertisement; 9902492681

ಕಲಬುರಗಿ ನಗರದಲ್ಲಿ ಪ್ರತ್ಯೇಕ ಸಚಿವಾಲಯ ಆರಂಭಿಸುವಂತೆ ಸಮಿತಿ ವತಿಯಿಂದ ನಿರಂತರ ಹೋರಾಟಗಳನ್ನು ಹಮ್ಮಿಕೊಳ್ಳುತ್ತಾ ಬರಲಾಗಿತ್ತು. ಸಮಿತಿಯ ಹೋರಾಟದ ಫಲವಾಗಿ ಈಗ ಕಲಬುರಗಿ ನಗರದಲ್ಲಿ ಪ್ರತ್ಯೇಕ ಸಚಿವಾಲಯ ಆರಂಭಿಸುವ ನಿರ್ಧಾರ ಕೈಗೊಂಡಿರುವುದು ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳ ಜನರಲ್ಲಿ ಸಮಾಧಾನ ಮೂಡಿಸಿದೆ ಎಂದರು.

ಸಂವಿಧಾನದ 371(ಜೆ) ಅನುಷ್ಠಾನಗೊಂಡು ದಶಕ ಕಳೆದಿದ್ದರೂ ಪರಿಣಾಮಕಾರಿಯಾಗಿ ಯೋಜನೆಗಳು ಕಾರ್ಯಗತಗೊಳ್ಳುವುದು ವಿಳಂಬವಾಗುತ್ತಿತ್ತು. ಇದೀಗ ಸಚಿವಾಲಯ ಆರಂಭ ಆಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಯೋಜನೆಗಳು ಕಾಲಮಿತಿಯಲ್ಲಿ ಜಾರಿಯಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರತ್ಯೇಕ ಸಚಿವಾಲಯ ಆರಂಭವಾಗುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ, ಪರಿಸರ ಹಾಗೂ ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ, ರೆಹಮಾನ್ ಖಾನ್, ಶಿವರಾಜ ತಂಗಡಗಿ ಸೇರಿದಂತೆ ಈ ಭಾಗದ ಎಲ್ಲ ಸಚಿವರು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ಸಚಿವಾಲಯ ಆರಂಭಗೊಳ್ಳಲು ಕಾರಣರಾಗಿದ್ದಾರೆ ಎಂದು ಸಮಾಧಾನ ವ್ಯಕ್ತಪಡಿಸಿದರು.

ಕಾಲಮಿತಿಯಲ್ಲಿ ಸಚಿವಾಲಯ ಆರಂಭಿಸಬೇಕು ಹಾಗೂ ಕೆಕೆ.ಆರ್.ಡಿ.ಬಿ ಅನುದಾನದ ಬಳಕೆಗೆ ಮಾರ್ಗಸೂಚಿ ಹೊರಡಿಸಬೇಕು ಎಂದು ಒತ್ತಾಯಿಸಿ ಈ ನಿಟ್ಟಿನಲ್ಲಿ ಈ ಭಾಗದ ವಿದ್ಯಾರ್ಥಿಗಳು ಮತ್ತು ಯುವಕರಲ್ಲಿ ಜಾಗೃತಿ ಮೂಡಿಸಲು ಸಮಿತಿ ವತಿಯಿಂದ ಬೃಹತ್ ಹೋರಾಟ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಪ್ರೊ. ಅನಿಲ್ ಬಿಡವೆ, ಪ್ರೊ. ಆರ್.ಕೆ. ಹುಡಗಿ, ಡಾ.ಬಸವರಾಜ ಗುಲಶೆಟ್ಟಿ, ಡಾ.ಮಾಜಿದ್ ದಾಗಿ, ಮನಿಷ್ ಜಾಜು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here