ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹಾಗೂ ಶಾಸಕ ಬಿ.ಆರ್.ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಪತ್ರಿಕಾಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತರಾತುರಿಯಲ್ಲಿ ಸಂಪುಟ ಸಭೆ ನಡೆದಿದ್ದರಿಂದ ಈ ಭಾಗದ ಅಭಿವೃದ್ಧಿಗೆ ಮೂಲದಲ್ಲಿ ಬೇಕಾದ ಕೊಡುಗೆಗಳನ್ನು ಕೊಡಲಾಗಿಲ್ಲ ಎಂದು ಹೇಳಿದರು.
ನೇಮಕಾತಿ ಬಗ್ಗೆ ಸ್ಪಷ್ಟತೆಯಿಲ್ಲ: ಈ ಭಾಗ ಅಭಿವೃದ್ಧಿ ಹೊಂದಬೇಕಾದರೆ ಮುಖ್ಯವಾಗಿ ಶೈಕ್ಷಣಿಕವಾಗಿ ಮುಂದುವರಿಯಬೇಕು. ಅದಕ್ಕಾಗಿ ಶಿಕ್ಷಕರ ನೇಮಕಾತಿ ನಡೆಯಬೇಕಾಗಿದೆ. ಈ ಕುರಿತು ಸಂಪುಟದಲ್ಲಿ ನಿರ್ಣಯ ಯಾವುದೇ ಸ್ಪಷ್ಟತೆ ನೀಡುತ್ತಿಲ್ಲ. ಗುಲ್ಬರ್ಗ ವಿಶ್ವ ವಿದ್ಯಾಲಯದಲ್ಲಿ ಶೇ.80 ಉಪನ್ಯಾಸಕಾರ ಹುದ್ದೆ ಖಾಲಿ ಇವೆ. ಇಲ್ಲಿ ವಿದ್ಯಾರ್ಥಿಗಳು ಕಲಿಯುವುದು ಯಾವಾಗ ಎಂದು ಸ್ಪಚ್ಟಪಡಿಸಿದ ಅವರು, ಸುಮಾರು 28,000 ಭರ್ತಿಯ ನಿರ್ಣಯ ಮುಂದಿನ ಸಂಪುಟ ಸಭೆಯಲ್ಲಿ ಕೈಗೊಳ್ಳಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಸ ಹೈ ಸ್ಕೂಲ್ ಮತ್ತು ಕಾಲೇಜುಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕಾಗಿತ್ತು ಎಂದು ಹೇಳಿದರು.
ಜನಪ್ರತಿನಿಧಿಗಳ ಜತೆ ಚರ್ಚೆ ನಡೆಸಲಿ: ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಈ ಭಾಗದ ಜನಪ್ರತಿನಿಧಿಗಳಿಗೆ ಅರಿವಿದೆ. ಅಧಿಕಾರಿಗಳಿಗೆ ಕೇವಲ ಕಾನೂನು ಮಾತ್ರ ತಿಳಿದಿದೆ. ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ಮಾತ್ರ ಸಮಸ್ಯೆ ನೀಗಿಸುತ್ತಾರೆ ಎಂದು ಪರೋಕ್ಷವಾಗಿ ಜನಪ್ರತಿನಿಧಿಗಳಿಂದ ಯಾವುದೇ ಸಲಹೆ ಸ್ವೀಕಾರ ಮಾಡಿಲ್ಲ ಎಂದು ಹೇಳಿದಂತಿತ್ತು.
ಸರಕಾರಿ ನೌಕರರ ಬಡ್ತಿ ಅನ್ಯಾಯದ ವಿರುದ್ಧ ಮೇಲ್ಮನವಿ ಸಲ್ಲಿಕೆ ಮಾಡಲು 371(ಜೆ)ಗಾಗಿ ಪ್ರತ್ಯೇಕ ಕೆಎಟಿ ಕಲಬುರಗಿಯಲ್ಲಿ ಪ್ರಾರಂಭ ಮಾಡುವಂತೆ ಮನವಿ ಮಾಡಲಾಗಿತ್ತು. ಆದರೆ ಅದರ ಬಗ್ಗೆಯೂ ಚರ್ಚೆ ನಡೆಸಿಲ್ಲ.
ಮೂಲದಲ್ಲಿ ಕಲ್ಯಾಣದಲ್ಲಿ ಇರುವ ಸಮಸ್ಯೆಗಳ ಪರಿಹಾರಕ್ಕೆ ಚರ್ಚೆ ನಡೆದಿಲ್ಲ ಎಂದು ಹೇಳಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…