ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25
ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು ತಾಲೂಕು ಕ್ರೀಡಾಂಗಣದ ವ್ಯವಸ್ಥಾಪಕ ಮರಿಯಪ್ಪ ಬೊಮ್ಮನಳ್ಳಿಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ಬಾಲ್, ಖೋಖೋ, ಕಬ್ಬಡ್ಡಿ, ಥ್ರೋ ಬಾಲ್, ಯೋಗಾ, ಕ್ರೀಡೆಗಳನ್ನು ಆಯ್ಕೆ ಮಾಡಲಾಗುವುದು. ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸ್ವ-ಇಚ್ಛೆಯಿಂದ ಭಾಗವಹಿಸಬಹುದಾಗಿರುತ್ತದೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ನಿವಾಸಿಗಳಾಗಿರಬೇಕು, ರಕ್ಷಣಾ ಪಡೆ, ಅರೆ ರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳಾಗಿರಬಾರದು, ಒಬ್ಬ ಕ್ರೀಡಾಪಟು ಅಥವಾ ತಂಡ ಒಂದು ಬಾರಿ ತಾಲೂಕು, ಜಿಲ್ಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದರೆ ಬೇರೆ ತಾಲೂಕು, ಜಿಲ್ಲಾ ಕ್ರೀಡಾಕೂಟದಲ್ಲಿ ಭಾಗವಹಿಸುವಂತಿಲ್ಲ. ಈ ಕ್ರೀಡಾಕೂಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಗುಂಪು ಕ್ರೀಡೆಯಲ್ಲಿ ಪ್ರಥಮ ತಂಡಗಳು ಜಿಲ್ಲಾ ಮಟ್ಟಕ್ಕೆ ಅರ್ಹರಿರುತ್ತಾರೆ.
ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಬೇಕು ಹೆಚ್ಚಿನ ಮಾಹಿತಿಗಾಗಿ ಶಿವಶರಣಪ್ಪ ಮಂಠಾಳೆ ಟಿಪಿಒ-7892652212, ಮರಿಯಪ್ಪ -9945230160 ಅವರನ್ನು ಸಂಪರ್ಕಿಸಬೇಕು ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…