ಒಂದು ತಿಂಗಳೊಳಗೆ ವಕ್ಫ್ ಆಸ್ತಿ ಖಾತಾ ಅಪಡೇಷನ್ ಕಾರ್ಯ ಮುಗಿಸಲು ಗಡುವು

ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರಿಂದ ವಕ್ಫ್ ಇಲಾಖೆ ಪ್ರಗತಿ ಪರಿಶೀಲನೆ

ಕಲಬುರಗಿ; ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿನ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಖಾತಾ ಅಪಡೇಷನ್ ಕಾರ್ಯ ಮುಂದಿನ ಒಂದು ತಿಂಗಳೊಳಗೆ ಮುಗಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಹಾಗೂ ವಸತಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಅಧಿಕಾರಿಗಳಿಗೆ ಗಡುವು ನೀಡಿದರು.

ಗುರುವಾರ ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ವಕ್ಫ್ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಕಲಬುರಗಿ ಜಿಲ್ಲೆಯಲ್ಲಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ 2,566, ನಗರ ಸ್ಥಳೀಯ ಸಂಸ್ಥೆಗಳಲ್ಲಿ 572 ಹಾಗೂ ಆರ್.ಡಿ.ಪಿ.ಆರ್. ಕಚೇರಿಯಲ್ಲಿ ನೂರಾರು ಸಂಖ್ಯೆಯಲ್ಲಿ ಬಾಕಿ ಇವೆ. ಬಹಳ ವರ್ಷಗಳಿಂದ ಈ ಕಾರ್ಯ ನಾನಾ ಕಾರಣಕ್ಕೆ ನೆನೆಗುದ್ದಿಗೆ ಬಿದ್ದಿದ್ದು, ಇದನ್ನು ಆದ್ಯತೆ ಮೇಲೆ ಮುಗಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ರಾಜ್ಯದಲ್ಲಿ 1.08 ಲಕ್ಷ ಎಕರೆ ವಕ್ಫ್ ಆಸ್ತಿ ಇದ್ದು, ಇದರಲ್ಲಿ 85 ಸಾವಿರ ಎಕರೆ ಪ್ರದೇಶ ಒತ್ತುವರಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ 21,440 ಎಕರೆ ಆಸ್ತಿ ಪೈಕಿ 3,610 ಮತ್ತು ಯಾದಗಿರಿ ಜಿಲ್ಲೆಯಲ್ಲಿ 6,194 ಪೈಕಿ 123 ಎಕರೆ ಆಸ್ತಿ ಒತ್ತುವರಿಯಾಗಿದ್ದು, ಇದನ್ನು ತೆರವುಗೊಳಿಸಲು ಆಯಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಲೀಸ್ ಅಧೀಕ್ಷಕರ ಸಹಕಾರ ಅತ್ಯಗತ್ಯವಾಗಿದೆ. ವಕ್ಫ್ ಆಸ್ತಿ ಸಾರ್ವಜನಿಕರು ಮುಸ್ಲಿಂ ಸಮಾಜಕ್ಕೆ ನೀಡಿದ ದೇಣಿಗೆ ಆಸ್ತಿಯಾಗಿದೆ. ಈ ಆಸ್ತಿ ಸಂರಕ್ಷಿಸುವುದು ಪುಣ್ಯದ ಕೆಲಸವಾಗಿದ್ದು, ಈ ಕುರಿತು ಸಮನ್ವಯತೆ ಸಾಧಿಸಬೇಕು ಎಂದು ವಕ್ಫ್ ಅಧಿಕಾರಿಗಳಾದ ಕಲಬುರಗಿಯ ಹಜರತ್ ಅಲಿ ಮತ್ತು ಯಾದಗಿರಿಯ ಜರೀನಾ ಬೇಗಂ ಅವರಿಗೆ ಸಚಿವರು ಖಡಕ್ ಸೂಚನೆ ನೀಡಿದರು.

ಬುಧವಾರ ಕಲಬುರಗಿಯಲ್ಲಿ ವಕ್ಫ್ ಅದಾಲತ್ ನಡೆಸಿದ್ದು, ಕಲಬುರಗಿ ಜಿಲ್ಲೆಯಿಂದ 368 ಅರ್ಜಿ ಸ್ವೀಕರಿಸಲಾಗಿದೆ. ಇದರಲ್ಲಿ 100 ಒತ್ತುವರಿ, 55 ಖಬರಸ್ತಾನ್ ಬೇಡಿಕೆ ಹಾಗೂ ಇತರೆ ವಿಷಯಕ್ಕೆ 213 ಸೇರಿವೆ. ಅದೇ ರೀತಿ ಯಾದಗಿರಿ ಜಿಲ್ಲೆಯಿಂದ ಸಲ್ಲಿಕೆಯಾದ 82 ಅರ್ಜಿಯಲ್ಲಿ 38 ಅರ್ಜಿ ಒತ್ತುವರಿ, 33 ಖಬರಸ್ತಾನ್ ಬೇಡಿಕೆ ಹಾಗೂ ಉಳಿದ 11 ಅರ್ಜಿಗಳು ಭೂಮಿ ಮಂಜೂರಾತಿ, ಖಾತಾ ಅಪಡೇಟ್, ಸರ್ವೇ ಸಮಸ್ಯೆಗಳಿಗೆ ಸಂಬಂಧಿಸಿವೆ. ಇವುಗಳನ್ನು ಸಹ ಆದ್ಯತೆ ಮೇಲೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು ಎಂದರು.

ಖಬರಸ್ತಾನ್ ಬೇಡಿಕೆ ಪರಿಶೀಲಿಸಿ: ಮುಸ್ಲಿಂ ಸಮುದಾಯದ ಜನರ ಅಂತ್ಯ ಸಂಸ್ಕಾರಕ್ಕೆ ಸರ್ಕಾರಿ ಜಮೀನು ಇಲ್ಲದಿದ್ದಲ್ಲಿ ಖಾಸಗಿ ಜಮೀನು ಖರೀದಿಸಿ ಖಬರಸ್ತಾನಕ್ಕೆ ಜಮೀನು ಮಂಜೂರು ಮಾಡಬೇಕು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಡಿ.ಸಿ.ಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಲಬುರಗಿ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಜಿಲ್ಲೆಯಲ್ಲಿ ಖಬರಸ್ತಾನ್ ಮಂಜೂರಾತಿಗೆ ಸಲ್ಲಿಕೆಯಾದ 23ರಲ್ಲಿ ಈಗಾಗಲೆ ಎರಡು ಮಂಜೂರು ಮಾಡಿದ್ದು, ಉಳಿದವು ಇಲಾಖಾ ಹಂತದಲ್ಲಿ ಪರಿಶೀಲನೆಯಲ್ಲಿವೆ ಎಂದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಕೆ.ಅನ್ವರ್ ಭಾಷಾ, ಯಾದಗಿರಿ ಜಿಲ್ಲಾಧಿಕಾರಿ ಬಿ.ಸುಶೀಲಾ, ಕಲಬುರಗಿ ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಡಿ.ಸಿ.ಪಿ. ಕನಿಕಾ ಸಿಕ್ರಿವಾಲ್, ಯಾದಗಿರಿ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಧರಣೇಶ ಎಸ್.ಪಿ., ಕಲಬುರಗಿ ಜಿಲ್ಲಾ ಪಂಚಾಯತ್ ಸಿ.ಇ.ಓ. ಭಂವರ್ ಸಿಂಗ್ ಮೀನಾ, ಯಾದಗಿರಿ ಸಿ.ಇ.ಓ ಲವೀಶ್ ಓರ್ಡಿಯಾ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ವಕ್ಫ್ ಬೋರ್ಡ್ ಸಿ.ಇ.ಓ ಜಿಲಾನಿ ಮೊಕಾಶಿ, ಕಲಬುರಗಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಸೈಯದ್ ಹಬೀಬ್ ಸರ್ಮಸ್ತ್, ಯಾದಗಿರಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಜಹಿರುದ್ದಿನ್ ಸವೆರಾ ಸೇರಿದಂತೆ ಎರಡು ಜಿಲ್ಲೆಗಳ ಅಲ್ಪಸಂಖ್ಯಾತ, ವಕ್ಫ್ ಇಲಾಖೆಗಳ ಅಧಿಕಾರಿಗಳು, ತಾಲೂಕಿನ ತಹಶೀಲ್ದಾರರು, ಎ.ಡಿ.ಎಲ್.ಆರ್, ಡಿ.ಡಿ.ಎಲ್.ಆರ್., ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago