ಕಲಬುರಗಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಡಾ. ಎಂ.ಎಂ. ಕಲಬುರಗಿ ವಿಚಾರ ವೇದಿಕೆಯ ಸಹಯೋಗದಲ್ಲಿ ನಗರದ ಕನ್ನಡ ಭವನದಲ್ಲಿ ಸೆ. 20ರಂದು ಸಂಜೆ 5 ಗಂಟೆಗೆ ಹುತಾತ್ಮ ಡಾ. ಎಂ.ಎಂ. ಕಲಬುರ್ಗಿ ಸಂಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಶಿವರಂಜನ ಸತ್ಯಂಪೇಟೆ ಹಾಗೂ ವೇದಿಕೆ ಅಧ್ಯಕ್ಷ ಮಹಾಂತೇಶ ಕಲಬುರ್ಗಿ ತಿಳಿಸಿದ್ದಾರೆ.
ಆಳಂದ ತೋಂಟದಾರ್ಯ ಅನುಭವ ಮಂಟಪದ ವಿಶ್ವನಾಥ ಕೋರಣೇಶ್ವರ ಸ್ವಾಮೀಜಿ ಉದ್ಘಾಟಿಸಲಿದ್ದು, ಪ್ರಗತಿಪರ ಚಿಂತಕ ಪ್ರೊ. ಆರ್.ಕೆ. ಹುಡಗಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಜಯಪುರದ ಶರಣ ಸಾಹಿತಿ ಡಾ. ಜೆ.ಎಸ್. ಪಾಟೀಲ ಅನುಭಾವ ನೀಡಲಿದ್ದು, ನಿವೃತ್ತ ಪ್ರಾಧ್ಯಾಪಕಿ ಡಾ. ಮೀನಾಕ್ಷಿ ಬಾಳಿ ದಿಕ್ಸೂಚಿ ನುಡಿಗಳನ್ನಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಜಿಲ್ಲಾಧ್ಯಕ್ಷ ರವೀಂದ್ರ ಶಾಬಾದಿ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಜಿ. ಶೆಟಗಾರ, ಚಿಂತಕ ಮಾರುತಿ ಗೋಖಲೆ, ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಜೇವರ್ಗಿ ಬಸವ ಕೇಂದ್ರದ ಅಧ್ಯಕ್ಷ ಶರಣಬಸವ ಕಲ್ಲಾ, ಜಿಲ್ಲಾ ವೀರಶೈವ ಸಮಾಜದ ಪ್ರಧಾನ ಕಾರ್ಯದರ್ಶಿ ಡಾ. ಶ್ರೀಶೈಲ ಘೂಳಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…