ಶಹಾಬಾದ: ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್‍ನ ಚಂಪಾಬಾಯಿ ರಾಜು ಮೇಸ್ತ್ರಿ ಆಯ್ಕೆಯಾದರೇ, ಉಪಾಧ್ಯಕ್ಷೆಯಾಗಿ ಫಾತಿಮಾ ಬಾಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ವಾರ್ಡ ನಂ.12ರ ಸದಸ್ಯ ರವಿ ರಾಠೋಡ ಕೇವಲ 5 ಮತಗಳನ್ನು ಪಡೆದರೇ, ಕಾಂಗ್ರೆಸ್ ಪಕ್ಷದ 6ನೇ ವಾರ್ಡನ ಸದಸ್ಯೆ ಚಂಪಾಬಾಯಿ ರಾಜು ಮೇಸ್ತ್ರಿ 19 ಮತಗಳನ್ನು ಪಡೆದು ಗೆಲುವು ಸಾಧಿಸಿದರು.ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ವಾರ್ಡ ನಂ.15ರ ಸದಸ್ಯೆ ಫಾತಿಮಾ ಬಾಕರ್ ನಾಮಪತ್ರ ಸಲ್ಲಿಸಿದ್ದರು.ಪ್ರತಿಸ್ಪರ್ಧಿಯಾಗಿ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾದರು.
ನಗರಸಭೆಯು 27 ವಾರ್ಡ ಸದಸ್ಯರನ್ನು ಒಳಗೊಂಡಿದ್ದು, ಅದರಲ್ಲಿ ವಾರ್ಡ ನಂ.3 ರ ಕಾಂಗ್ರೆಸ್ ಸದಸ್ಯ ಇನಾಯತ್‍ಖಾನ ಜಮಾದಾರ ಅವರ ಮರಣದಿಂದ 26 ಸದಸ್ಯಕ್ಕೆ ಕುಸಿದಿದೆ. ಚುನಾವಣೆ ಸಂದರ್ಭದಲ್ಲಿ ವಾರ್ಡ ನಂ.13ರ ಪಕ್ಷೇತರ ಸದಸ್ಯ ರಜನಿಕಾಂತ ಕಂಬಾನೂರ ಹಾಗೂ ವಾರ್ಡ ನಂ.16ರ ಕಾಂಗ್ರೆಸ್ ಸದಸ್ಯ ಅವಿನಾಶ ಕಂಬಾನೂರ ಅವರು ಗೈರು ಹಾಜರಾಗಿದ್ದರಿಂದ ಒಟ್ಟು 24 ಮತಗಳು ಚಲಾವಣೆಯಾಗಿವೆ. ಪೂರ್ಣ ಬಹುಮತ ಹೊಂದಿದ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದೆ.
ಸೇಡಂ ಎಸಿ ಪ್ರಭುರೆಡ್ಡಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…