ಶಹಾಬಾದ: ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್‍ನ ಚಂಪಾಬಾಯಿ ರಾಜು ಮೇಸ್ತ್ರಿ ಆಯ್ಕೆಯಾದರೇ, ಉಪಾಧ್ಯಕ್ಷೆಯಾಗಿ ಫಾತಿಮಾ ಬಾಕರ್ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನಗರಸಭೆಯ ಮುಂಭಾಗದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಗುಲಾಲ ಎರಚಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಖಾಡಾ ಅಧ್ಯಕ್ಷ ಡಾ.ರಶೀದ್ ಮರ್ಚಂಟ್, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕಾಂಗ್ರೆಸ್‍ನ ಚಂಪಾಬಾಯಿ ರಾಜು ಮೇಸ್ತ್ರಿ ಗೆಲುವು ಸಾಧಿಸಿದರೇ, ಉಪಾಧ್ಯಕ್ಷೆಯಾಗಿ ಫಾತಿಮಾ ಬಾಕರ್ ಅವಿರೋಧ ಆಯ್ಕೆಯಾಗುವ ಮೂಲಕ ನಗರಸಭೆಯ ಗದ್ದುಗೆ ಕಾಂಗ್ರೆಸ್ ಪಾಲಾಗಿದೆ.ನಗರದ ಅಭಿವೃದ್ಧಿ ದೃಷ್ಠಿಯಿಂದ ಉತ್ತಮ ಕೆಲಸಗಳು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ನಿರ್ವಹಿಸಿಕೊಂಡು ಹೋಗಬೇಕು.ಆ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು.
ಕಾಂಗ್ರೆಸ್ ಮುಖಂಡ ಶಿವಾನಂದ ಪಾಟೀಲ ಮರತೂರ ಮಾತನಾಡಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕಾಂಗ್ರೆಸ್‍ನ ಚಂಪಾಬಾಯಿ ರಾಜು ಮೇಸ್ತ್ರಿ ಉಪಾಧ್ಯಕ್ಷೆಯಾಗಿ ಫಾತಿಮಾ ಬಾಕರ್ ಆಯ್ಕೆಯಾಗಿದಕ್ಕೆ ಶುಭಾಶಯಗಳನ್ನು ಕೋರಿದರು.ಅಲ್ಲದೇ ನಗರಸಭೆಯ ಆಡಳಿತದ ಚುಕ್ಕಾಣಿಯನ್ನು ಸರಿಯಾಗಿ ನಡೆಸಿ.ಮೂಲಭೂತ ಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಬೇಕು.ಬಂದ ಅನುದಾನವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡುವ ಮೂಲಕ ಮಾದರಿ ನಗರವನ್ನಾಗಿ ಮಾಡುವ ಸಂಕಲ್ಪ ತೊಡಬೇಕು.ಅದಕ್ಕೆ ಎಲ್ಲರ ಸಹಕಾರದಲ್ಲಿ ಅಭಿವೃದ್ಧಿ ಕಾರ್ಯಗಳು ಮುನ್ನಡೆಸಿಕೊಂಡು ಹೋಗಬೇಕೆಂದು ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ರೇವುನಾಯಕ ಬೆಳಮಗಿ, ಕೂಡಾ ಅಧ್ಯಕ್ಷ ಮಜ್ಜರ್ ಅಲಂ ಖಾನ್, ವಿಜಯಕುಮಾರ ಮುಟ್ಟತ್ತಿ, ಮೃತ್ಯುಂಜಯ್ ಹಿರೇಮಠ,ಶರಣಗೌಡ ಪಾಟೀಲ ಗೋಳಾ(ಕೆ),ಸುರೇಶ ನಾಯಕ, ಮಾಣಿಕ್‍ಗೌಡ, ಲಕ್ಷ್ಮಿಬಾಯಿ ಕುಸಾಳೆ,ಸಾಬೇರಾಬೇಗಂ, ಕಿರಣ ಚವ್ಹಾಣ,ನಾಗಣ್ಣ ರಾಂಪೂರೆ,ನಾಗರಾಜ ಸಿಂಘೆ, ಫಜಲ್ ಪಟೇಲ್,ಸೂರ್ಯಕಾಂತ ಕೋಬಾಳ, ಡಾ.ಅಹ್ಮದ್ ಪಟೇಲ್,ತಿಪ್ಪಣ್ಣ ನಾಟೇಕಾರ, ರಾಜೇಶ ಯನಗುಂಟಿಕರ್,ಮಹ್ಮದ್ ಬಾಕರ್, ರಾಜ ಮಹ್ಮದ್ ರಾಜಾ,ಹಾಷಮ್ ಖಾನ, ರಮೇಶ ಪವಾರ,ನಾಗೇಂದ್ರ ನಾಟೇಕಾರ,ಶಂಕರ ಕುಸಾಳೆ,ಮಹ್ಮದ್ ಅಜರ್ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…