ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಿ

ಕಲಬುರಗಿ: ಬಾಕಿ ವೇತನ ಪಾವತಿಸಲು ಸಿಬ್ಬಂದಿ ಕಡಿತ ಮಾಡಿದ ಆದೇಶವನ್ನು ವಾಪಸ್ ಪಡೆಯಬೇಕು. ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದ ಮುಂದೆ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದ ಸದಸ್ಯರು ಪ್ರತಿಭಟಿಸಿದರು.

ಜಿಲ್ಲೆಯಲ್ಲಿರುವ ವರ್ಗಗಳ ಹಿಂದುಳಿದ ಇಲಾಖೆಯ ವಸತಿನಿಲಯಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ ಮಾಡಿರುವುದರಿಂದ 2ರಿಂದ 3 ಅಡುಗೆ ಸಿಬ್ಬಂದಿ ನೇಮಕ ಮಾಡಲಾಗಿತ್ತು. ಸರ್ಕಾರ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಿದ್ದಾರೆ ಎಂದು ಆರೋಪಿಸಿ ರೂ.4.50 ಕೋಟಿ ಪಾವತಿ ಮಾಡಿಲ್ಲ. ಇದರಿಂದ ಕಳೆದ ಏಳೆಂಟು ತಿಂಗಳಿಂದ ವೇತನವಾಗದೇ ಹೊರಗುತ್ತಿಗೆ ನೌಕರರು ಜೀವನ ನಡೆಸುವುದು ಕಷ್ಟವಾಗಿದೆ’ ಎಂದು. ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರ ಸಿಬ್ಬಂದಿ ಕಡಿತ ಮಾಡಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ ಮಾಡಿರುವುದು ಸರಿಯಲ್ಲ. ಆದೇಶವನ್ನು ಬೇಗ ಹಿಂಪಡೆಯಬೇಕು. 50 ವಿದ್ಯಾರ್ಥಿಗಳಿಗೆ ಮೂರು ಜನ ಅಡುಗೆ ಸಿಬ್ಬಂದಿ ನೇಮಕ ಮಾಡಬೇಕು. ರಾತ್ರಿ ಕಾವಲುಗಾರರನ್ನು ನೇಮಿಸಬೇಕು. ಕಾಯಂ ನೌಕರರ ಸ್ಥಳಗಳಲ್ಲಿ ಮಾತ್ರ ಕಾಯಂ ನೌಕರರ ನೇಮಕ ಮಾಡಬೇಕು. ಹೊರಗುತ್ತಿಗೆ ನೌಕರರಿಗೆ 8 ಗಂಟೆ ಮಾತ್ರ ಕೆಲಸ ನೀಡಬೇಕು. ಬಾಕಿ ವೇತನ ಪಾವತಿ ಮಾಡಬೇಕು. ಕನಿಷ್ಠ ವೇತನ ಜಾರಿ ಮಾಡಬೇಕು’ ಎಂದು ಸರ್ಕಾರವನ್ನು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಜಿಲ್ಲಾ ಘಟಕದ ಅಧ್ಯಕ್ಷ ಪರಶುರಾಮ ಹಡಗಲಿ, ಜಿಲ್ಲಾ ಕಾರ್ಯದರ್ಶಿ ಕಾಶಿನಾಥ ಬಂಡೆ, ಬಾಬು ಹೊಸಮನಿ, ರವಿಚಂದ್ರ ಯರಗೋಳ, ನಾಗರಾಜ ಕಟ್ಟಿಮನಿ ಪಾಲ್ಗೊಂಡಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago