ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ ಪ್ರಸಿದ್ಧ ಸೂಫಿ ಸಂತ ಹಜರತ್ ಖಾಜಾ ಬಂದಾ ನವಾಜ್ (ರ.ಅ) ದರ್ಗಾಕ್ಕೆ ಭೇಟಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ನಂತರ ದರ್ಗಾದ ಪೀಠಾಧಿಪತಿಗಳ ನಿವಾಸದಲ್ಲಿ ಪೀಠಾಧಿಪತಿಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ದರ್ಗಾದ ಪ್ರಸ್ತುತ ಪೀಠಾಧಿಪತಿಗಳಾಗಿರುವ ಸೈಯದ್ ಖುಸ್ರೋ ಅಲಿ ಅಲ್ ಹುಸೇನಿ ಅವರ ಜೊತೆ ಮಾತುಕತೆ ನಡೆಸಿದರು.
ಡಾ. ಸೈಯದ್ ಮುಸ್ತಫಾ ಅಲ್ ಹುಸೈನಿ, ಸೈಯದ್ ಅಖಿಬ್ ಹುಸೈನಿ ಮತ್ತು ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಅನ್ವರ್ ಬಾಷಾ ಹಾಗೂ ವಕ್ಫ್ ಸಲಹಾ ಸಮಿತಿ ಜಿಲ್ಲಾ ಅಧ್ಯಕ್ಷರಾದ ಹಬಿಬ್ ಸರ್ಮಸ್ತ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಜೊತೆಗೆ ಇದ್ದರು.