ಕಲಬುರಗಿ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಲಬುರ್ಗಿ ಶಿಶು ಅಭಿವೃದ್ಧಿ ಯೋಜನೆ ಕಲಬುರ್ಗಿ ಗ್ರಾಮೀಣ ಹರಸೂರ ವಲಯ ಭೂಪಾಲ್ ತೆಗನೂರ್ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮವನ್ನು ಮಾನ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಪ್ರೇಮಾ ಕಲಬುರ್ಗಿ ಮತ್ತು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಭೀಮಬಾಯಿ ದೀಪ ಬೆಳಗಿಸುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ಸಮಯದಲ್ಲಿ ಮಾತನಾಡಿದ CDPO ಪ್ರೇಮಾ ಕಲಬುರ್ಗಿ ಸೆಪ್ಟೆಂಬರ್ ತಿಂಗಳ ಪೋಷಣ ಮಾಸಾಚರಣೆ ಇದರ ಅಡಿಯಲ್ಲಿ ಗರ್ಭಿಣಿ ಬಾಣಂತಿಯರು ಪೌಷ್ಟಿಕ ಆಹಾರ ಸೇವನೆಯ ಪ್ರಮುಖವಾಗಿದ್ದು ಅಂಗನವಾಡಿ ಕೇಂದ್ರಗಳಲ್ಲಿ ಸಿಗುವ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುಬೇಕು. ಪೌಷ್ಟಿಕ ಆಹಾರ ಸೇವನೆಯಿಂದ ಸಿಗುವ ಲಾಭಗಳ ಬಗ್ಗೆ ಹೇಳುತ್ತಾ ಪ್ರಮುಖವಾಗಿ ಗರ್ಭಿಣಿಯರಲ್ಲಿ ರಕ್ತ ಹೀನತೆ ಹೋಗಲಾಡಿಸುವುದು, ವೈಯಕ್ತಿಕ ಸ್ವಚ್ಛತೆ,ಹಸಿರು ತರಕಾರಿ ಸೇವನೆಯಿಂದ ಗರ್ಭಿಣಿಯರಲ್ಲಿರುವ ಮಗುವಿನ ಬೆಳವಣಿಗೆಗೆ ಸಹಾಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ CDPO ಶ್ರೀ ಮತಿ ಪ್ರೇಮಾ ಕಲ್ಬುರ್ಗಿ ACDPO ಶ್ರೀಮತಿ ಭೀಮಬಾಯಿ,ವಲಯ ಮೇಲ್ವಿಚಾರಕಿ ಶ್ರೀಮತಿ ವೈಶಾಲಿ, ಪಿಡಿಒ ಗರ್ಭಿಣಿ ಬಾಣಂತಿಯರು ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು ಉಪಸ್ಥಿತರಿದ್ದರು.