ಕಲಬುರಗಿ: ಸ್ಥಾಪಿತ ಸಿದ್ಧಾಂತ ಹೊಡೆದು ಹಾಕಿ ಅವೈದಿಕ ವಚನ ಸಾಹಿತ್ಯವನ್ನು ಜನಮಾನಸಕ್ಕೆ ಮುಟ್ಟಿಸಿದ ಡಾ.‌ಎಂ.ಎಂ.‌ಕಲಬುರ್ಗಿ ಯವರು ಸತ್ಯದ ಸಂಶೋಧಕರಾಗಿದ್ದರು ಎಂದು ಶರಣ ಸಾಹಿತಿ ಡಾ. ಜೆ.ಎಸ್. ಪಾಟೀಲ ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಡಾ. ಎಂ.ಎಂ. ಕಲಬುರಗಿ ವಿಚಾರ ವೇದಿಕೆಯ ಸಹಯೋಗದಲ್ಲಿ ನಗರದ ಕನ್ನಡ ಭವನದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ಹುತಾತ್ಮ ಡಾ. ಎಂ.ಎಂ. ಕಲಬುರ್ಗಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಅನುಭಾವ ನೀಡಿದ ಅವರು, ವಿಜಯನಗರ ಸಾಮ್ರಾಜ್ಯ ಹಾಗೂ ಲಿಂಗಾಯತ ಪರಂಪರೆಯ ನಿಜ ಚರಿತ್ರೆಯನ್ನು ಕಟ್ಟಿಕೊಟ್ಟ ಕಲಬುರ್ಗಿಯವರು ಸಾವಿನ ನಂತರ ತಮ್ಮ ವೈಚಾರಿಕ ಚಿಂತನೆಯ ಮೂಲಕ ಜನರ ಮಧ್ಯೆ ಜೀವಂತವಾಗಿದ್ದಾರೆ ಎಂದು ತಿಳಿಸಿದರು.

ಸಂಪ್ರದಾಯವಾದಿಗಳು ಹಾಗೂ ಪಟ್ಟಭದ್ರರ ಕುತಂತ್ರಕ್ಕೆ ಬಲಿಯಾದ ಕಲಬುರ್ಗಿಯವರು ಲಿಂಗಾಯತ ಸಂಸ್ಕೃತಿಯ ಮೇಲೆ ವೈದಿಕ ದಾಳಿಯನ್ನು ಕಂಡು ಹಿಡಿದು ಲಿಂಗಾಯತ ಧರ್ಮದ ಅಸ್ಮಿತೆ ಕಾಪಾಡಿದ ಮಹಾನ್ ಚಿಂತಕರಾಗಿದ್ದರು ಎಂದರು.

ಲಿಂಗಾಯತ ಚಳವಳಿ ಇಂದು ನಿನ್ನೆಯದಲ್ಲ. 1945ರಿಂದಲೇ ಆರಂಭವಾದುದು. ಲಿಂಗಾಯತ ಐಕ್ಯ ಸಂಘದ ಮೂಲಕ ಹೋರಾಟ ಮಾಡಿದ್ದರು.‌ ವಿವಾದಗ್ರಸ್ಥ ವಚನ ದರ್ಶನ ಕೃತಿ ಶರಣ ಸಾಹಿತ್ಯ ಹಾಗೂ ಲಿಂಗಾಯತ ಧರ್ಮವನ್ನು ನಾಶ ಮಾಡುವ ಹುನ್ನಾರವಿದ್ದು, ಈ ಬಗ್ಗೆ ಜಾಗೃತರಾಗಿರಬೇಕು ಎಂದು ಎಚ್ಚರಿಕೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಆಳಂದ ತೋಂಟದಾರ್ಯ ಅನುಭವ ಮಂಟಪದ ವಿಶ್ವನಾಥ ಕೋರಣೇಶ್ವರ ಮಾತನಾಡಿ, ಬಸವಣ್ಣ ಸ್ಥಾಪಿಸಿದ ಲಿಂಗಾಯತ ಧರ್ಮ ಕರ್ನಾಟಕದ ಮೊಟ್ಟ ಮೊದಲ ಸ್ವತಂತ್ರ ಧರ್ಮ. ಬಸವಣ್ಣನವರು ಈ ನೆಲದ ಭೂಮಿಪುತ್ರರು. ಯುವ ಪೀಳಿಗೆ ವಿಚಾರಗಳನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಹೇಳಿದರು.

ಪ್ರಗತಿಪರ ಚಿಂತಕ ಪ್ರೊ. ಆರ್.ಕೆ. ಹುಡಗಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿದ್ದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಜಿಲ್ಲಾಧ್ಯಕ್ಷ ರವೀಂದ್ರ ಶಾಬಾದಿ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಜಿ. ಶೆಟಗಾರ, ಚಿಂತಕ ಮಾರುತಿ ಗೋಖಲೆ, ಜಿಲ್ಲಾ ವೀರಶೈವ ಸಮಾಜದ ಪ್ರಧಾನ ಕಾರ್ಯದರ್ಶಿ ಡಾ. ಶ್ರೀಶೈಲ ಘೂಳಿ ಮಾತನಾಡಿದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಜೇವರ್ಗಿ ಬಸವ ಕೇಂದ್ರದ ಅಧ್ಯಕ್ಷ ಶರಣಬಸವ ಕಲ್ಲಾ, ಬೆಂಗಳೂರು ಸಿಸಿಬಿ ಪೊಲೀಸ್ ಸಬ್ ಇನ್ಸ್ ಫೆಕ್ಟರ್ ಜೋತರ್ಲಿಂಗ ಹೊನಕಟ್ಟಿ, ಮಹಾಂತೇಶ ಕಲಬುರ್ಗಿ ವೇದಿಕೆಯಲ್ಲಿದ್ದರು.

ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಶಿವರಂಜನ ಸತ್ಯಂಪೇಟೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಸಂಗಣ್ಣ ಗುಳಗಿ ನಿರೂಪಿಸಿದರು. ಸಂಗಯ್ಯ ಸ್ವಾಮಿ ಹಳ್ಳದಮಠ ಪ್ರಾರ್ಥನೆಗೀತೆ ಹಾಡಿದರು. ಜಗದೀಶ ಕಲಬುರ್ಗಿ ಕಲಬುರ್ಗಿ ವಂದಿಸಿದರು.

ಶಿವಶರಣಪ್ಪ ಮೂಳೆಗಾಂವ, ಡಾ. ಶಾಂತಾ ಅಷ್ಟಿಗೆ, ಪ್ರಭುಲಿಂಗ ಮಹಾಗಾಂವಕರ್, ನಾಗರಾಜ ನಿಂಬರಗಿ, ಸತೀಶ ಸಜ್ಜನಶೆಟ್ಟಿ, ಹಣಮಂತರಾಯ ಕುಸನೂರ, ಶರಣು ಸಿನ್ನೂರ್, ಶರಣು ಮಹಾಜನ್, ಪ್ರೇಮಚಂದ ರಾಯಕೋಟ ಇತರರಿದ್ದರು.

ಕೊಲ್ಲುವುದಾದರೆ ವ್ಯಕ್ತಿಗಳನ್ನು ಕೊಲ್ಲಬಹುದು. ಆದರೆ ಅವರ ವಿಚಾರಗಳನ್ನಲ್ಲ. ಅದರಂತೆ ಕಲಬುರ್ಗಿಯವರು ಸಹ ಸತ್ತಿರಬಹುದು.‌ ಆದರೆ ಅವರ ವಿಚಾರಗಳಿಗೆ ಸಾವಿಲ್ಲ. -ಪ್ರೊ. ಆರ್.ಕೆ. ಹುಡಗಿ, ಚಿಂತಕರು, ಕಲಬುರಗಿ

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

18 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago