ಕಲಬುರಗಿ: ಅರವತ್ತು ವರ್ಷ ದಾಟಿದ ಪ್ರತಿಯೋಬ್ಬರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಚಿಂತಕ ಡಾ.ಬಸವರಾಜ ಗುಳಶೆಟ್ಟಿ ಅವರು ತಿಳಿಸಿದರು.
ಇಲ್ಲಿನ ಜಯನಗರ ಶಿವಮಂದಿರದಲ್ಲಿ ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ಹಾಗೂ ಕಂಪನಿಯೋ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 13 ದಿನದ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಜನರು ಇಂದಿನ ದೈನಂದಿನ ಆಹಾರದಲ್ಲಿ ಪೋಷಕಾಂಶಗಳ ಕೊರತೆಯಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ.
ಆಹಾರ ಜೊತೆ ಜೊತೆಗೆ ವ್ಯಾಯಾಮ,ನಡಿಗೆ ಸೇರಿದಂತೆ ದೈಹಿಕ ಪರಿಶ್ರಮವು ಅಗತ್ಯವಾಗಿದೆ.ರಕ್ತ ಚಲನೆಯಲ್ಲಿ ಫಿಜೀಯೋ ಥೆರಪಿ ಪಾತ್ರ ಮುಖ್ಯವಾಗಿದೆ.ಇಂಥ ಉಚಿತ ಶಿಬಿರಗಳಿಂದ ಜನರಲ್ಲಿ ಆರೋಗ್ಯದ ಅರಿವು ಮೂಡಿಸುತ್ತದೆ.ಇದನ್ನು ಆಯೋಜನೆ ಮಾಡಿರುವ ಟ್ರಸ್ಟ್ ಹಾಗೂ ಕಂಪಾನಿಯೋ ಕಾರ್ಯ ಶ್ಲಾಘನೀಯ ಎಂದರು.
ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಮಾತನಾಡಿ ಟ್ರಸ್ಟ್ ವತಿಯಿಂದ ಇಲ್ಲಿವರೆಗೆ ಅನೇಕ ಉಚಿತ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ.ಇದರಿಂದ ಅನೇಕ ಜನರಿಗೆ ಸದುಪಯೋಗವಾಗಿದೆ.13 ದಿನ ನಡೆಯುವ ಈ ಉಚಿತ ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಹೋರಾಟಗಾರ ಭೀಮಶೆಟ್ಟಿ ಯಂಪಳ್ಳಿ, ಬಸವರಾಜ ಕಣ್ಣಿ,ಕಂಪಾನಿಯೋ ಸದಸ್ಯ ಕೌಶಿಕ್ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಕೆ.ಬಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕೋಶಾಧ್ಯಕ್ಷ ಬಸವರಾಜ ಮಾಗಿ,ಸಹ ಕಾರ್ಯದರ್ಶಿ ಸಿದ್ಧಲಿಂಗ ಗುಬ್ಬಿ,ಮಲ್ಲಯ ಸ್ವಾಮಿ ಗಂಗಾಧರಮಠ.ಚಂದ್ರಕಾಂತ ತುಪ್ಪದ,ಮನೋಹರ ಬಡಶೇಷಿ ಮಹಿಳಾ ಸದಸ್ಯರಾದ ಸುಷ್ಮಾ ಮಾಗಿ, ಅನಿತಾ ನವಣಿ, ಲತಾ ತುಪ್ಪದ, ಗೀತಾ ಸಿರಗಾಪೂರ ಸೇರಿದಂತೆ ಬೆರೆ ಬಡಾವಣೆಯ ಹಿರಿಯರು.ಮಹಿಳೆಯರು ನೂರಾರು ಜನರು ಶಿಬಿರದಲ್ಲಿ ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…