ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು; ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು ವಾಕ್ ಸ್ವಾತಂತ್ರ್ಯ ನಮಗೆ ನಮ್ಮ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯ. ಸಂವಿಧಾನದ ಮೂರು ಅಂಗಗಳಿಗೆ ಅಪಾಯ ಬಂದರೆ ಸಮಾಜಕ್ಕೆ ಅಪಾಯ ಬಂದಂತೆ. ವಾಕ್ ಸ್ವಾತಂತ್ರ್ಯ ಆಚರಿಸುವ ಪತ್ರಿಕಾ ರಂಗಕ್ಕೆ ಯಾವ ನಿಬರ್ಂಧಗಳೂ ಇರಬಾರದು ಎನ್ನುವುದನ್ನು ಪಂಡಿತ್ ನೆಹರೂ ಅವರೂ ಬಹಳ ಒತ್ತಿ ಹೇಳಿದ್ದರು ಎಂದು ವಿವರಿಸಿದರು.

ಸುಳ್ಳು ಸುದ್ದಿಗಳ ಅನಾಹುತಗಳಿಗೆ ಉದಾಹರಣೆ ನೀಡಿದ ಮುಖ್ಯಮಂತ್ರಿಗಳು, “ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿಗಳು ಆಡಿದ ಮಾತನ್ನು ನಾನು ಉದಾಹರಿಸಿದ್ದೆ. ” ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ” ಎಂದು ಹಿಂದಿನ ಮುಖ್ಯಮಂತ್ರಿ ಅವರು ಸದನದಲ್ಲೇ ಹೇಳಿದ್ದರು. ಈ ಮಾತನ್ನು ನಾನು ಉದಾಹರಿಸಿದ್ದೆ. ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ನಾನೇ ಆ ಮಾತು ಹೇಳಿದ್ದಾಗಿ ನಕಲಿ ಸುದ್ದಿ ಸೃಷ್ಟಿಸಿ, ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೆರೆಸಿ ತಪ್ಪು ಸಂದೇಶ ಹರಡಿದರು. ಇದರಿಂದ ನಷ್ಟ ಆಗಿದ್ದು ಸಮಾಜಕ್ಕೇ ಹೊರತು ನನಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ನಾವು ಕಾನೂನು ಮಾಡಿದ್ದೇವೆ. ಆದರೆ ಕೇವಲ ಕಾನೂನಿನಿಂದ ಮಾತ್ರ ಫೇಕ್ ನ್ಯೂಸ್ ತಡೆಯಲು ಸಾಧ್ಯವಿಲ್ಲ. ಇಡೀ ಸಮಾಜ ಇದರ ವಿರುದ್ಧ ಧ್ವನಿ ಎತ್ತಿದರೆ ಮಾತ್ರ ಸಾಧ್ಯ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಗ್ಯಾರಂಟಿ ಅನುμÁ್ಠನ ಸಮಿತಿಯ ಪುμÁ್ಪ ಅಮರನಾಥ್, ಶಾಸಕರಾದ ರವಿಶಂಕರ್, ತನ್ವೀರ್ ಸೇಠ್, ನ್ಯೂಸ್ ಫಸ್ಟ್ ಸಿಇಒ ರವಿಕುಮಾರ್ ಉಪಸ್ಥಿತರಿದ್ದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ದೀಪಕ್, ಕಾರ್ಯದರ್ಶಿ ರವಿ ಪಾಂಡವಪುರ ಸೇರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

3 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

5 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

12 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

12 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

13 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

23 hours ago