ಮಹಿಳೆಯರಿಗೆ ಆರೋಗ್ಯವೆ ಭಾಗ್ಯ : ಡಾ. ಸುರೇಶ ಜಂಗೆ

0
78

ಕಲಬುರಗಿ: ಮಹಿಳೆಯರ ಆರೋಗ್ಯವು ಅನೇಕ ವಿಶಿಷ್ಟ ರೀತಿಯಲ್ಲಿ ಪುರುಷರ ಆರೋಗ್ಯಕ್ಕಿಂತ ಭಿನ್ನವಾಗಿದೆ. ಹೀಗಾಗಿ ಎಲ್ಲಾ ಮಹಿಳೆಯರಿಗೆ ಆರೋಗ್ಯವೆ ಭಾಗ್ಯ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಗ್ರಂಥಾಲಯದ ಗ್ರಂಥಪಾಲಕ ಡಾ. ಸುರೇಶ್ ಜಂಗೆ ಹೇಳಿದರು.

ಗುಲ್ಬರ್ಗ ವಿಶ್ವವಿದ್ಯಾಲಯದ ಗಂಗಾ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಪ್ರೇರಣಾ ಅಭಿವೃದ್ಧಿ ಸೇವಾ ಸಂಸ್ಥೆ ಹಮ್ಮಿಕೊಂಡಿರುವ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ “ಮಹಿಳೆಯರ ಆರೋಗ್ಯ ಮತ್ತು ಜೀವನ ಶೈಲಿ” ಕುರಿತು
ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.

Contact Your\'s Advertisement; 9902492681

ಮಹಿಳೆಯರ ಆರೋಗ್ಯವು ಜನಸಂಖ್ಯೆಯ ಆರೋಗ್ಯಕ್ಕೆ ಒಂದು ಉದಾಹರಣೆಯಾಗಿದೆ, ಅಲ್ಲಿ ಆರೋಗ್ಯವನ್ನು ವಿಶ್ವ ಆರೋಗ್ಯ ಸಂಸ್ಥೆ “ಸಂಪೂರ್ಣ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಯೋಗಕ್ಷೇಮದ ಸ್ಥಿತಿ ಮತ್ತು ಕೇವಲ ರೋಗ ಅಥವಾ ದುರ್ಬಲತೆಯ ಅನುಪಸ್ಥಿತಿಯಲ್ಲ” ಎಂದು ವ್ಯಾಖ್ಯಾನಿಸುತ್ತದೆ. ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಈ ವ್ಯತ್ಯಾಸಗಳು ಮತ್ತಷ್ಟು ಉಲ್ಬಣಗೊಳ್ಳುತ್ತವೆ, ಅಲ್ಲಿ ಮಹಿಳೆಯರು, ಅವರ ಆರೋಗ್ಯವು ಅವರ ಅಪಾಯಗಳು ಮತ್ತು ಅನುಭವಗಳನ್ನು ಒಳಗೊಂಡಿರುತ್ತದೆ, ಅವರು ಮತ್ತಷ್ಟು ಅನನುಕೂಲತೆಯನ್ನು ಹೊಂದಿದ್ದಾರೆ ಎಂದು ಅವರು ಹೇಳಿದರು.

ನಮ್ಮ ವಿಶ್ವವಿದ್ಯಾಲಯದಲ್ಲಿ ಸುಂದರವಾದ ಪರಿಸರ ಸ್ನೇಹಿ ವಾತಾವರಣ ಇದೆ ಇಲ್ಲಿ ವಿದ್ಯಾರ್ಥಿನಿಯರು ಬೆಳಿಗ್ಗೆ ವಾಯು ವಿಹಾರ ಮಾಡುವುದು ಯೋಗ, ಧ್ಯಾನ, ಮಾಡುವುದರಿಂದ ನಿಮ್ಮ ಮಾನಸಿಕ ಸ್ಥಿತಿಗತಿಗಳು ನಿಮ್ಮ ಹತೋಟಿಯಲ್ಲಿ ಇಟ್ಟು ಕೊಳ್ಳಲು ಅನುಕೂಲವಾಗುತ್ತದೆ ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ವಸತಿ ನಿಲಯದ ಪರಿಪಾಲಕರಾದ ಪ್ರೊ, ಪ್ರತೀಮಾ ಮಠದ, ಪ್ರೊ, ಲಲಿತಾ ಜುನ್ನ, ಡಾ. ಮಮತಾ ಮೇಸ್ತ್ರಿ, ಡಾ. ಆರ್. ಎಂ. ವಾಣಿ ಮತ್ತು ವಸತಿ ನಿಲಯದ ವಿದ್ಯಾರ್ಥಿನಿಯರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here