ಅಫಜಲಪುರ; ವಿದ್ಯಾರ್ಥಿಗಳು ಹಾಗೂ ಪ್ರತಿಯೊಬ್ಬರು ಪ್ರತಿನಿತ್ಯ ನಮ್ಮ ಪರಿಸರವನ್ನು ಸಂರಕ್ಷಿಸಲು ಮುಂದಾದಾಗ ಮಾತ್ರ ಸುಂದರ ಭವಿಷ್ಯ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ರಾಷ್ಟ್ರಮಟ್ಟದ ಪ್ರೇರಣ ಭಾಷಣಕಾರರು ಹಾಗೂ ಪರಿಸರ ರತ್ನ ಪ್ರಶಸ್ತಿ ಪುರಸ್ಕೃತರು ಆದ ಡಾ. ಪೃಥ್ವಿರಾಜ್ ಎಸ್ ಲಕ್ಕಿ ಅವರು ಹೇಳಿದರು.
ಅವರು ಅಪಜಲಪುರ ತಾಲೂಕಿನ ಮಣ್ಣೂರ್ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಬೀದರ್ನಾಥ್ ಜ್ಞಾನ ಚೇತನ ಚಾರ್ ಟೇಬಲ್ ಟ್ರಸ್ಟ್ ನವರು ಏರ್ಪಡಿಸಿದ್ದ ವ್ಯಕ್ತಿತ್ವ ವಿಕಸನ ಮತ್ತು ಪರಿಸರ ಸಂರಕ್ಷಣೆ ಎಂಬ ವಿಷಯದ ಕುರಿತು ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ದಿನದಿಂದ ದಿನಕ್ಕೆ ಪರಿಸರ ತುಂಬಾ ಹದಗೆಡುತ್ತಿದೆ, ವರ್ಷದಿಂದ ವರ್ಷಕ್ಕೆ ಬಿಸಿಲು ಹೆಚ್ಚಾಗುತ್ತಲೇ ನಡೆದಿದೆ, ಪರಿಸರ ಸಂರಕ್ಷಣೆ ಇಂದಿನ ಯುವಕರು ಹಾಗೂ ವಿದ್ಯಾರ್ಥಿಗಳು ಮನಸ್ಸು ಮಾಡಿದಾಗ ಮಾತ್ರ ಸಾಧ್ಯವಾಗುತ್ತದೆ ಕಾರಣ ವಿದ್ಯಾರ್ಥಿಗಳು ಪರಿಸರದ ಉಳಿವಿಗೆ ಸತತ ಪ್ರಯತ್ನ ಮಾಡಿ ಹೆಚ್ಚು ಹೆಚ್ಚು ಗಿಡಗಳನ್ನು ನೆಡಿಸಿ ಪಾಲನೆ ಪೋಷಣೆ ಮಾಡಬೇಕೆಂದು ಹೇಳಿದರು.
ಕಾಲೇಜಿನ ಪ್ರಾಚಾರ್ಯರಾದ ಶಾಂತರಸ ಹೊಸಮನಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಈ ದೇಶದಲ್ಲಿ ಬದಲಾವಣೆಯ ಗಾಳಿ ಬೀಸಬೇಕಾದರೆ ಅದು ಯುವಕರಿಂದ ಹಾಗೂ ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯ ಕಾರಣ ವಿದ್ಯಾರ್ಥಿಗಳು ಸಮಾಜದಲ್ಲಿ ಪರಿಸರ ಜಾಗೃತಿ ಮೂಡಿಸಿ ಪರಿಸರ ಉಳಿಸಲು ಮುಂದಾಗಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಉಪನ್ಯಾಸಕರಾದ ಅಶ್ವಿನ್ ಕುಮಾರ್, ರಂಜಾನ್, ಹಿನಾ ಪಟೇಲ್, ಜಟ್ಟೆಪ್ಪ ಪೂಜಾರಿ ಉಪಸ್ಥಿತರಿದ್ದರು. ಜಟ್ಟೆಪ್ಪ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು, 150 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…