ಕೇಂದ್ರದ ಮಲತಾಯಿ ಧೋರಣೆ ಖಂಡಿಸಿ ಪ್ರವೀಣ್ ಶೆಟ್ಟಿ ಬಣ ಜಾಥಾ ಯಶಸ್ವಿ

ಕಲಬುರಗಿ: ಮೀಸಲಿರಿಸಿದ್ದ ಭೂಮಿ ಗೋವಾ ಸರ್ಕಾರದ ವಿದ್ಯುತ್ ಯೋಜನೆಯ ಪಾಲಾಗಿದ್ದು, ಕೇಂದ್ರದ ವನ್ಯಜೀವಿ ಮಂಡಳಿ ಅನುಮತಿ ನೀಡಿದ್ದು 435 ಎಕರೆಯಲ್ಲಿ ವಿದ್ಯುತ್ ಯೋಜನೆಗೆ ಹಸಿರು ನಿಶಾನೆ ಸಿಕ್ಕಂತಾಗಿದೆ. ಆನೆ, ಹುಲಿ, ಕಾರಿಡಾರ್ ಅಭಯಾರಣ್ಯವಿದ್ದರು ಲೆಕ್ಕಿಸದೆ ಅನುಮತಿ ನೀಡಿದೆ ಎಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಅವರು ಆರೋಪಿಸಿದ್ದಾರೆ.

ಬೆಂಗಳೂರು ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರಿನ ಮಹತ್ವಾಕಾಂಕ್ಷಿ ಯೋಜನೆಯಾದಕಳಸಾ ಬಂಡೂರಿ ನಾಲಾಯೋಜನೆ, ರಾಜಕಾರಣಿಗಳ ಇಚ್ಛಾಶಕ್ತಿಯ ಕೊರತೆಯಿಂದ ಈ ಯೋಜನೆ ನೆನೆಗುದಿಗೆ ಬಿದ್ದಿದ್ದು ಈ ಭಾಗದ ಜನರಿಗೆ ಕುಡಿಯುವ ನೀರಿನ ಅಭಾವ ಹೇಳತೀರದಾಗಿದೆ. ಮೇಲಿಂದ ಮೇಲೆ ಗದಗ ಜಿಲ್ಲೆ ಬರಗಾಲಕ್ಕೆ ತುತ್ತಾಗುತ್ತಿದ್ದು ಜನರು ಸಂಕಷ್ಟದಲ್ಲಿದ್ದಾರೆ ಎಂದಿದ್ದಾರೆ.

ಕುಡಿಯುವ ನೀರಿನ,ಕರ್ನಾಟಕದ ಹೋರಾಟಕ್ಕೆ ಸುಪ್ರೀಂಕೋರ್ಟಿನ ನೆಪವೊಡ್ಡಿ ರಾಜ್ಯದ ಮನವಿಯನ್ನು ತಿರಸ್ಕರಿಸುತ್ತಿರುವ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿ. ಈ ಕೂಡಲೇ ರಾಜ್ಯ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕೊಂಡೊಯ್ದು ಪ್ರಧಾನಿಗಳನ್ನು ಭೇಟಿ ಮಾಡಿ ತೀವ್ರ ಪ್ರತಿಭಟನೆಯನ್ನು ದಾಖಲಿಸಿ ಎಚ್ಚರಿಕೆಯನ್ನು ರವಾನಿಸಬೇಕು ಕಾನೂನಿನ ಹೋರಾಟಕ್ಕೆ ಮುಂದಾಗಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಮೇಕ್ರಿ ವೃತ್ತದಿಂದ ನೂರಾರೂ ವಾಹನಗಳಲ್ಲಿ ಹೊರಾಡಲಾಗುವುದು. ಅಂದು ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಿ. ಕಿತ್ತೂರು ರಾಣಿ ಚೆನ್ನಮ್ಮಹಾಗೂಸಂಗೊಳ್ಳಿರಾಯಣ್ಣ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ವಿವಿಧ ಜಿಲ್ಲೆಯ ಜಿಲ್ಲಾಧ್ಯಕ್ಷರುಗಳು ಹಾಗೂ ಕಾರ್ಯಕರ್ತರೊಂದಿಗೆ ವಾಹನಗಳ ಮೂಲಕ ನರಗುಂದ ತಲುಪಲಾಗುವುದು. ನಂತರ ಹೋರಾಟದಲ್ಲಿ ಹುತಾತ್ಮರಾದ ಹೋರಾಟಗಾರರಿಗೆ ನಮಿಸಿ ನರಗುಂದದಿಂದ ಗದಗಿನವರೆಗೆ ಎರಡು ದಿನಗಳ ಪಾದಯಾತ್ರೆ ಆರಂಭಿಸಲಾಯಿತು.

ಕಳಸ ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಗೊಳಿಸುವಂತೆ ಮತ್ತು ನಾಡಿನ ಸಂಪತ್ತು ಕಪ್ಪದ ಗುಡ್ಡ ರಕ್ಷಣೆಗೆ ಒತ್ತಾಯಿಸಿ. ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಮತ್ತು ಸಹಸ್ರಾರು ಕಾರ್ಯಕರ್ತರು ನರಗುಂದದಿಂದ ಗದಗ ಜಿಲ್ಲಾ ಕಛೇರಿ ವರೆಗೂ ಬೃಹತ್ ಪಾದಯಾತ್ರೆಯನ್ನು ಪೂರ್ಣಗೊಳಿಸಿ, ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ, ಉತ್ತರ, ಕಲ್ಯಾಣ ಕರ್ನಾಟಕ ಹಾಗೂ ಎಲ್ಲಾ ಜಿಲ್ಲಾಧ್ಯಕ್ಷರು, ತಾಲೂಕ ಅಧ್ಯಕ್ಷರು, ಪದಾಧಿಕಾರಿಗಳು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

19 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago