ಸೋಲ್ಲಾಪುರದವರ ಕನ್ನಡ ಪ್ರೀತಿ ಮೆಚ್ಚುವಂತದ್ದು: ಡಾ ಪುರುಷೊತ್ತಮ ಬಿಳಿಮಲೆ

ಸೋಲಾಪುರ : ಗಡಿ ಭಾಗದಲ್ಲಿರುವ ಸೋಲಾಪುರ ಜಿಲ್ಲೆಯ ಜನರಲ್ಲಿ ಕನ್ನಡದ ಬಗ್ಗೆ ಇರುವ ಪ್ರೀತಿ, ಸ್ನೇಹ, ಗೌರವ, ವಾತ್ಸಲ್ಯ ನೋಡಿದರೆ ಮಹಾರಾಷ್ಟ್ರದ ಗಡಿಭಾಗದಲ್ಲಿ ಕನ್ನಡ ಉಳಿಯುವ ಭವಿಷ್ಯವಿದೆ. ಕನ್ನಡ ಮಾಧ್ಯಮ ಶಾಲೆಗಳು ಮಾತೃಭಾಷೆಯಾದ ಕನ್ನಡಕ್ಕೆ ವಿಶೇಷ ಒತ್ತು ನೀಡಿ ಪಾಲಕರಲ್ಲಿ ಕನ್ನಡ ಕುರಿತು ಪ್ರೀತಿ ವಾತ್ಸಲ್ಯ ಮೂಡಿಸಿ ಅವರಲ್ಲಿ ಮಾತೃಭಾಷೆಗೆ ವಿಶೇಷ ಸ್ಥಾನಮಾನ ಇರುವಂತೆ ಮಾಡಿರುವುದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅಭಿಪ್ರಾಯ ವ್ಯಕ್ತಪಡಿಸಿದರು.

ಭಾನುವಾರ ಸೋಲಾಪುರದ ಕರ್ಮ ಯೋಗಿ ಅಪ್ಪಾಸಾಹೇಬ ಕಾಡಾದಿ ಸಾಂಸ್ಕೃತಿಕ ಭವನ ಶಂಕರ ನಗರದಲ್ಲಿ ಜರುಗಿದ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳು ಹೊರ ರಾಜ್ಯದಲ್ಲಿ ಕಲಿತು ಒಳ ಬಂದಾಗ ಅವರಿಗೆ ಹಿಂದುಳಿದ ವರ್ಗದಲ್ಲಿ ಸೀಟು ಕೊಡಬೇಕು ಹಾಗೂ ಉನ್ನತ ಶಿಕ್ಷಣದಲ್ಲಿ ಶೇ.5 ರಷ್ಟು ಮೀಸಲಾತಿ ನೀಡಬೇಕು.

20 ಶತಮಾನದ ದೊಡ್ಡ ವಿದ್ವಾಂಸ, ಚಿಂತಕ, ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ ಆರ್ ಅಂಬೇಡ್ಕರ್ ಮಹಾರಾಷ್ಟ್ರದವರಾಗಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ. ಗಡಿಭಾಗದಲ್ಲಿರುವ ಕನ್ನಡಿಗರಿಗೆ ಮರಾಠಿಗರು ಪ್ರೋತ್ಸಾಹ ನೀಡಿ ಕನ್ನಡ -ಮರಾಠಿ ಮಾತೃಭಾಷೆ ಉಳಿಯುವಂತೆ ಮಾಡಿ ಅಭಿವೃದ್ಧಿಪಡಿಸಿ ಮಾತೃಭಾಷೆಗೆ ವಿಶೇಷ ಸ್ಥಾನಮಾನ ಇರಬೇಕು ಎಂದು ಪುರುಷೋತ್ತಮ ಬಿಳಿಮಲೆ ಹೇಳಿದರು.

ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಗೃಹ ಸಚಿವರಾದ ಸಿದ್ದರಾಮ ಮೇತ್ರೆ ಅವರು, ಜಿಲ್ಲೆಯ ಗಡಿಭಾಗದಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳು ಕನ್ನಡಿಗರ ಮಾತೃಭಾಷೆಯಾದ ಕನ್ನಡವನ್ನು ಉಳಿಸಿಕೊಳ್ಳಲು ಶಿಕ್ಷಕರು ಹಾಗೂ ಪಾಲಕರು ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವುದು ಅದಕ್ಕೆ ಪೂರಕವಾಗಿ ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಗಡಿಭಾಗದಲ್ಲಿರುವ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ನಗದು ಹಾಗೂ ಪ್ರಶಸ್ತಿ ಪ್ರಮಾಣ ನೀಡಿ ಪ್ರೋತ್ಸಾಹಿಸುತ್ತಿರುವುದು ಅತ್ಯಂತ ಶ್ಲ್ಯಾ ಘನೀಯ ಕಾರ್ಯವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಅಕ್ಕಲಕೋಟ ಸಿಬಿ ಖೇಡಗಿ ಬಸವೇಶ್ವರ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಗುರುಲಿಂಗಪ್ಪ ಧಬಾಲೆ ಮಾತನಾಡಿ ಉನ್ನತ ಶಿಕ್ಷಣದಲ್ಲಿ ಮಹಾರಾಷ್ಟ್ರದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಅತ್ಯಂತ ಕಡಿಮೆಯಾಗಿದ್ದು ಕನ್ನಡ ಮಾಧ್ಯಮದಲ್ಲಿ ಉನ್ನತ ಶಿಕ್ಷಣ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಬೇಡಿಕೆ ಸಲ್ಲಿಸಿದರು.

ಸಮಾರಂಭದಲ್ಲಿ ಮಹಾರಾಷ್ಟ್ರ ರಾಜ್ಯದ 84 ಪ್ರೌಢಶಾಲೆ ಹಾಗೂ 20 ಪದವಿಪೂರ್ವ ಕಾಲೇಜುಗಳಲ್ಲಿ 10ನೇ ಮತ್ತು 12ನೇ ತರಗತಿಗಳನ್ನು ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿ ಶಾಲಾ ಮಟ್ಟದಲ್ಲಿ ಪ್ರಥಮ ದ್ವಿತೀಯ ತೃತೀಯ ಸ್ಥಾನಗಳಿಸಿದ ಒಟ್ಟು 652 ವಿದ್ಯಾರ್ಥಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗದು ಬಹುಮಾನವಾಗಿ ಪ್ರಥಮ ₹12000 ದ್ವಿತೀಯ ₹11000 ತೃತೀಯ ₹10,000 ಹಾಗೂ ಪ್ರಶಸ್ತಿ ಪತ್ರ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮ ಅಕ್ಕಲಕೋಟ ತಾಲೂಕಿನ ವಾಗ್ದರಿ ಕನ್ನಡ ಪ್ರಾಥಮಿಕ ಶಾಲೆಯ ಮಕ್ಕಳಿಂದ ವಚನ ನೃತ್ಯ ದೊಂದಿಗೆ ಪ್ರಾರಂಭವಾಯಿತು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ ಅತಿಥಿಗಳನ್ನು ಸ್ವಾಗತಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ದ್ರಾಕ್ಷಾಯಿಣಿ ಹುಡೇದ , ವಿರೂಪಣ್ಣ ಕಲ್ಲೂರ, ಗಜಲ್ ಸಾಹಿತಿ ಗಿರೀಶ ಜಕಾಪೂರೆ , ಕಸಾಪ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಸೋಮಶೇಖರ ಜಮಶೆಟ್ಟಿ, ಆದರ್ಶ ಕನ್ನಡ ಬಳಗದ ಅಧ್ಯಕ್ಷ ಮಲಿಕಜಾನ್ ಶೇಖ, ಸಾಹಿತಿ ಬಸವರಾಜ ಮಸೂತಿ, ಪ್ರಾಧ್ಯಾಪಕ ಬಿ.ಬಿ.ಪೂಜಾರಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಯಶಸ್ವಿಗೆ ಬಸವರಾಜ ಧನಶೆಟ್ಟಿ, ರಾಜಶೇಖರ್ ಉಮಾರಾಣಿಕರ್, ವಿದ್ಯಾಧರ ಗುರವ, ಶರಣು ಕೋಳಿ, ರಾಮ ಸೊಲ್ಲಾಪುರೆ, ಶರಪ್ಪ ಫುಲಾರಿ, ಪ್ರಶಾಂತ ಬಿರಾದಾರ ಸೇರಿದಂತೆ ಆದರ್ಶ ಕನ್ನಡ ಬಳಗದ ಪದಾಧಿಕಾರಿಗಳು ಶ್ರಮಿಸಿದರು. ಮಹೇಶ ಮೇತ್ರಿ ಮತ್ತು ಸಂಗಡಿಗರು ಸುಗಮ ಸಂಗೀತ ಕಾರ್ಯಕ್ರಮ ನೀಡಿದರು. ಚಿದಾನಂದ ಮಠಪತಿ ನಿರೂಪಿಸಿದರು, ವಿದ್ಯಾಧರ್ ಗುರವ ವಂದಿಸಿದರು.

ಕರ್ನಾಟಕ ಸರಕಾರವು ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕೊಡಮಾಡುವ ಕನ್ನಡ ಮಾಧ್ಯಮ ಪ್ರಶಸ್ತಿ ಮಹಾರಾಷ್ಟ್ರದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಕನ್ನಡ ಕಲಿಯಲು ಪ್ರೇರಣೆ ನೀಡುತ್ತಿದ್ದು, ಇದರಿಂದ ಗಡಿಯಾಚೆ ಇರುವ ಕನ್ನಡ ಮಕ್ಕಳಿಗೆ ಮುಂದಿನ ಶಿಕ್ಷಣಕ್ಕೆ ಅನುಕೂಲವಾಗಿದೆ. – ಸೋಮಶೇಖರ್ ಜಮಶೆಟ್ಟಿ, ಅಧ್ಯಕ್ಷರು, ಕಸಾಪ ಮಹಾರಾಷ್ಟ್ರ ಘಟಕ

ಕರ್ನಾಟಕ ಸರಕಾರ ಮಹಾನೆಲದ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡಬೇಕು. ನಮ್ಮ ಜಾತಿ ಪ್ರವರ್ಗಗಳನ್ನು ಯಥಾವತ್ತಾಗಿ ಸ್ವಿಕರಿಸಬೇಕು. ಇಲ್ಲಿ ಕಲಿತ ಮಕ್ಕಳಿಗೂ ಕರ್ನಾಟಕದಲ್ಲಿ ದೊರೆಯುವ ಎಲ್ಲ ಸೌಲಭ್ಯಗಳು ದೊರೆಯಬೇಕು. – ಮಲಿಕಜಾನ್ ಶೇಖ, ಅಧ್ಯಕ್ಷರು, ಆದರ್ಶ ಕನ್ನಡ ಬಳಗ, ಮಹಾರಾಷ್ಟ್ರ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago