ವಿದ್ಯಾರ್ಥಿಗಳು ಕಲಿಕಾ ಆಸಕ್ತಿಯನ್ನು ಹೆಚ್ಚಿಸಬೇಕು

ಆಳಂದ; ಗಣಿತ ಕಲಿಕಾ ಆಂದೋಲನವು ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಗಣಿತ ವಿಷಯದ ಆಸಕ್ತಿಯನ್ನು ವೃದ್ಧಿಸಿ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಎಂದು ಆಳಂದ ತಾಲ್ಲೂಕಿನ ಹೊದಲೂರು ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಾದ ವೀರೇಶ ಬೋಳಶೆಟ್ಟಿ ಹೇಳಿದರು.

ಗಣಿತ ಕಲಿಕಾ ಆಂದೋಲನದ ಅಂಗವಾಗಿ ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಹಯೋಗದಲ್ಲಿ ಆಳಂದ ತಾಲೂಕಿನ ಹೊದಲೂರು ಗ್ರಾಮ ಪಂಚಾಯತ ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಒಟ್ಟು ಏಳು ಶಾಲೆಗಳ ವಿದ್ಯಾರ್ಥಿಗಳನ್ನೊಳಗೊಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊದಲೂರಿನಲ್ಲಿ ಆಯೋಜಿಸಲಾಗಿದೆ.

ಎಲ್ಲಾ ಮಕ್ಕಳು ಈ ಗಣಿತ ಕಲಿಕಾ ಆಂದೋಲನದ ಪ್ರಯೋಜನವನ್ನು ಪಡೆಯಬೇಕೆಂದು ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ಹೊದಲೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾರಿ ಮುಖ್ಯ ಗುರುಗಳಾದ ಮಂಜು ರೆಡ್ಡಿ ವಹಿಸಿದರು. ಹಿರಿಯ ಶಿಕ್ಷಕರಾದ ಮಲ್ಲಿಕಾರ್ಜುನ ಹೊಸಮನಿ ಕಾರ್ಯಕ್ರಮ ಉದ್ಘಾಟಿಸಿದರು. ನಂದಗೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರಿಯಾಶೀಲ ಶಿಕ್ಷಕರಾದ ರವೀಂದ್ರ ರುದ್ರವಾಡಿಯವರು ಗಣಿತ ಕಲಿಕಾ ಸ್ಪರ್ಧೆಯ ನಿಯಮಗಳನ್ನು ಮಕ್ಕಳೆಲ್ಲರಿಗೂ ತಿಳಿಸಿದರು.

ಗ್ರಾಮೀಣ ಪ್ರದೇಶದ 4, 5 ಮತ್ತು 6ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರತಿವರ್ಷವೂ ಗಣಿತ ಕಲಿಕಾ ಆಂದೋಲನದ ನಿಮಿತ್ತ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಮೂಲಭೂತ ಗಣಿತ ಸಾಕ್ಷರತೆಯನ್ನು ಅಳೆಯುವ ಗಣಿತ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತದೆ. ಈ ಸ್ಪರ್ಧೆಯು ಮಕ್ಕಳಲ್ಲಿ ಗಣಿತದ ಕುರಿತಾಗಿನ ಆಸಕ್ತಿಯನ್ನು ಹೆಚ್ಚಿಸಿ, ಗಣಿತ ಕಲಿಕೆಯನ್ನು ಸಂತಸದಾಯಕವನ್ನಾಗಿ ಮಾಡುವಲ್ಲಿ ಸಹಕಾರಿಯಾಗಿದೆ ಎಂದು ಹೇಳಿದರು.

ಹೊದಲೂರು ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾದ ಶ್ರೀದೇವಿ ಕಾಮಶೆಟ್ಟಿ,ಹೊದಲೂರ ಗ್ರಾಪಂ ಲೆಕ್ಕಾದಿಕಾರಿ ಲಕ್ಪತಿ ಭಾಗವಹಿಸಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಿದ್ದರು. ಕಾರ್ಯಕ್ರಮದಲ್ಲಿ ಹೊದಲೂರ,ಜವಳಗಾ,ಹೊದಲೂರ ತಾಂಡಾ,ನಂದಗೂರು,ಅಣೂರ ಶಾಲೆಯ ಮಕ್ಕಳು,ಶಿಕ್ಷಕರಾದ ಹಣಮಂತ ಪಾತ್ರೆ, ಮೋಹನಕುಮಾರ ಬಿ.ಕೆ. ಕರೆಪ್ಪ ಮುಧೋಳ, ಚಂದ್ರಶೇಖರ ಮಠಪತಿ, ಸ್ವಪ್ನಾ ಮೋದಿ, ನಾಗಿಣಿ ಬಸವರಾಜ ಹಾಗೂ ಅತಿಥಿ ಶಿಕ್ಷಕರು ಸೇರಿದಂತೆ ಗ್ರಾಮದ ಅನೇಕ ಜನ ಭಾಗವಹಿಸಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

10 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

12 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

19 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

19 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago