ಶಿಕ್ಷಣದ ಜೊತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಆದರ್ಶ ಸಮಾಜ ನಿರ್ಮಿಸಿ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಇಂದು ೨೦೨೪-೨೫ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಈ ಸಮಾರಂಭಕ್ಕೆ ಉದ್ಘಾಟಕರಾಗಿ ಆಗಮಿಸಿದ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಂಸ್ಥೆಯ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳ ಅಭಿವೃದ್ಧಿ ಮಂಡಳಿಯ ಸದಸ್ಯರಾದ ಶ್ರೀ ಅರುಣಕುಮಾರ ಎಮ್. ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮಹಾವಿದ್ಯಾಲಯದ ಎಲ್ಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ತಮ್ಮ ಶಾಲಾ ದಿನಗಳ ಸವಿ ನೆನಪಿಸಿ ಕೊಳ್ಳುತ್ತಾ, ೧೯೬೫ ರಲ್ಲಿ ಸ್ಥಾಪನೆಯಾದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಹಿಂದುಳಿದ ಪ್ರದೇಶ ಎಂಬ ಹಣೆಪಟ್ಟಿ ಕಟ್ಟಿಕೊಂಡ ಕಲ್ಯಾಣ ಕರ್ನಾಟಕ ಪ್ರದೇಶದ ಅನೇಕ ವಿದ್ಯಾರ್ಥಿನಿಯರ ಸಾಧನೆಯ ಮೆಟ್ಟಿಲಾಗಿದೆ ಎಂದು ಮಾತನಾಡಿದರು.

ಮುಂದುವರೆದು ಮಾತನಾಡುತ್ತಾ ಸೋಲು ಎನ್ನುವುದು ಯಶಸ್ಸಿಗೆ ದಾರಿ. ವೈಫಲ್ಯಕ್ಕೆ ಅಂಜಬಾರದು. ಜಗತ್ತಿನಲ್ಲಿ ಸೋಲಿನಿಂದ ಯಶಸ್ಸಿನತ್ತ ತಿರುಗಿದ ಹಲವಾರು ಪ್ರಮುಖ ವ್ಯಕ್ತಿಗಳನ್ನು ನಾವೆಲ್ಲರೂ ಇಂದಿನ ಯುಗದಲ್ಲಿ ನಾವು ಕಾಣಬಹುದಾಗಿದೆ.

ಜೀವನವೆಂಬುದು ಏಳುಬೀಳಿನ ಕಥೆ, ನೋವು-ನಲಿವಿನ ಜೊತೆ, ಸೋಲು-ಗೆಲುವಿನ ಕಂತೆ. ಅನುಭವವೆಂಬ ವಿಶಾಲ ಸಾಗರದುದ್ದಕ್ಕೂ ಈಜುತ್ತಾ, ಸಿಹಿ-ಕಹಿ ನೆನಪುಗಳೊಂದಿಗೆ, ಮಾಡಿದ ತಪ್ಪು ತಿದ್ದಿಕೊಂಡು ಸರಿ ಮಾರ್ಗದಲ್ಲಿ ನಡೆಯುವುದೇ ನಿಜವಾದ ಜೀವನ. ಈ ಜೀವನ ನಾವು ಅಂದುಕೊಂಡಂತೆ ಖಂಡಿತಾ ಇರುವುದಿಲ್ಲ ! ಆದರೆ ಉತ್ತಮ ಜೀವನ ರೂಪಿಸಿಕೊಳ್ಳುವ ಮುಖ್ಯ ರೂವಾರಿ ನಾವೇ ಆಗಿರುತ್ತೇವೆ ಎಂಬುದು ಸತ್ಯ. ಹೀಗಾಗಿ ಸಂಸ್ಥೆಯ ನಮ್ಮ ಮಹಾವಿದ್ಯಾಲಯದ ಪ್ರವೇಶ ದ್ವಾರದಲ್ಲಿ “ನನ್ನ ಜೀವನದ ಶಿಲ್ಪಿ ನಾನೇ” ಎಂದು ನೆನಪಿಸಿ ಕೊಡುವ ಪ್ರತಿಮೆಯನ್ನು ನಿರ್ಮಿಸಲಾಗಿದೆ.

ಮನೆಯಲ್ಲಿ ತಮ್ಮ ತಂದೆ-ತಾಯಿಯವರ ಜೊತೆಗೆ ಮನೆಕೆಲಸದಲ್ಲಿ ನೆರವಾಗುತ್ತಾ ಗುರು ಹಿರಿಯರು ಕಲಿಸಿಕೊಡುವ ಪಾಠ ಪ್ರವಚನಗಳನ್ನು ಆಸಕ್ತಿಯಿಂದ ಆಲಿಸಿ, ಜೀವನದಲ್ಲಿ ನಾವು ಅನುಭವಿಸುವ ಸುಖ-ದುಃಖಗಳು ನಮ್ಮಯ ಪಾಲಿನ ಸುಂದರ ಅನುಭವಗಳು. ಈ ಲೋಕದಲ್ಲಿ ಹುಟ್ಟಿ ಇಲ್ಲೇ ಬೆಳೆದ ನಾವು ಏನಾದರೂ ಸಾಧಿಸಬೇಕು. ನಾನು ಹುಟ್ಟಿದ ಈ ನೆಲಕ್ಕೆ ಏನಾದರೂ ಕೊಡುಗೆ ನೀಡಬೇಕು. ನಮ್ಮ ಜೀವನ ಎಲ್ಲರಿಗೂ ಆದರ್ಶವಾಗಬೇಕು ಎಂದರು.

ವಿದ್ಯಾರ್ಥಿನಿಯರು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಸರಕಾರದಿಂದ ಹೆಣ್ಣು ಮಕ್ಕಳಿಗಾಗಿ ಇರುವಂತಹ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಇರುವಂತಹ ಮೀಸಲಾತಿಯನ್ನು ತಮ್ಮ ಮುಂಬರುವ ದಿನಗಳಲ್ಲಿ ಪಡೆದುಕೊಳ್ಳಬೇಕು ಎಂದು ಮಾತನಾಡಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಬೋಧಿಸಿ, ತ್ರೈ ಮಾಸಿಕ ಕಿರು ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ಧನವನ್ನು ನೀಡಲಾಯಿತು.

ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಂಸ್ಥೆಯ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳ ಅಭಿವೃದ್ಧಿ ಮಂಡಳಿಯ ಸಂಚಾಲಕರಾದ ನಾಗಣ್ಣ ಘಂಟಿ ಅವರು ವಹಿಸಿಕೊಂಡು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರೀಯವಾಗಿ ಭಾಗವಹಿಸಿ ವಿದ್ಯಾರ್ಥಿನಿಯರೆಲ್ಲಗೂ ತಮ್ಮ ಸುಂದರ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುಲು ಸಾಂಸ್ಕçತಿಕ, ಸಾಹಿತ್ಯಿಕ, ವಿಜ್ಞಾನ, ವಾಣಿಜ್ಯ, ಕ್ರೀಡೆಗೆ ಸಂಬಂಧಿಸಿದ ವಿವಿಧ ಚಟುವಟುಕೆಗಳಲ್ಲಿ ಭಾಗವಹಿಸಿ ಶಿಸ್ತು, ಸಂಸ್ಕಾರದೊಂದಿಗೆ ಪರಿಣಾಮಕಾರಿಯಾದ ಶಿಕ್ಷಣವನ್ನು ಪಡೆದುಕೊಳ್ಳಿ ಎಂದು ಅಧ್ಯಕ್ಷೀಯ ನುಡಿಗಳನ್ನಾಡಿದರು.

ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಮೋಹನರಾಜ ಪತ್ತಾರ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ಕಲಿಯುಗದ ಕಡೆ ಶರಣ ಶ್ರೀ ಕೂಡಲೂರು ಬಸವಲಿಂಗೇಶ್ವರ ಶರಣರ ಹೆಸರಿನಲ್ಲಿ ನಮ್ಮ ಮಹಾವಿದ್ಯಾಲಯದಿಂದ ರಾಜ್ಯಕ್ಕೆ ರ‍್ಯಾಂಕ್ ಪಡೆದು ಕೊಳ್ಳುವ ವಿದ್ಯಾರ್ಥಿನಿಯರಿಗೆ ರೂ.೨೫೦೦೦ ನಗದು ಬಹುಮಾನವನ್ನು ನೀಡುತ್ತೇನೆ ಎಂದು ಘೋಷಿಸಿದರು.

ಈ ಸಂದರ್ಭದಲ್ಲಿ ೨೦೨೪-೨೫ ನೇ ಸಾಲಿನ ವಿದ್ಯಾರ್ಥಿ ಸಂಘದ ಸಲಹೆಗಾರರಾಗಿ ಉಪನ್ಯಾಸಕರಾದ ಶೈಲಜಾ ನಾಕೇದಾರ ಅವರು ಡಾ. ಕಾಶೀಬಾಯಿ ಬೋಗಶೆಟ್ಟಿ ಅವರಿಂದ ಅಧಿಕಾರವನ್ನು ಸ್ವೀಕರಿಸಿದರು.

ರಷ್ಮೀ ಸ್ವಾಮಿ ಅವರು ಸಿಬ್ಬಂದಿ ಕಾರ್ಯದರ್ಶಿಗಳಾಗಿ ಆಯ್ಕೆಗೊಂಡು ಕನ್ಯಾಕುಮಾರಿ ಅವರಿಂದ ಅಧಿಕಾರವನ್ನು ಸ್ವೀಕರಿಸಿದರು.

ಡಾ. ನಯನತಾರ ಆಸ್ಪಲ್ಲಿ ಅವರು ವಿದ್ಯಾರ್ಥಿ ಸಂಘದ ಚುನಾವಣೆಯ ವರದಿಯನ್ನು ನೀಡಿದರು. ಜ್ಯೋತಿ ಪಾಟೀಲ, ಅನಿತಾ ಪಾಟೀಲ, ಮಾನಸಾ, ಸಂತೋಷಿ ಕೆ, ಪ್ರೀಯಾ ನಿಗ್ಗುಡಗಿ, ಬಸವರಾಜ ಗೋಣಿ, ಗುಲಿಂಗಯ್ಯಾ ಸ್ವಾಮಿ, ಕಿರಣಕುಮಾರ, ಬೋಧಕೇತರ ಸಿಬ್ಬಂದಿಗಳಾದ ಜ್ಯೋತಿ ಕಲ್ಲೂರ, ಸುಚಿತಾ ಪಾಟೀಲ, . ಶರಣಮ್ಮ ನೆಲ್ಲೂರ, ಭಾಗ್ಯವತಿ, ಜಯಶ್ರೀ ಎನ್ ಮತ್ತಿತರು ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಉಪನ್ಯಾಸಕರಾದ ಪ್ರೀಯಾ ನಿಗ್ಗುಡಗಿ ಅವರು ಅತಿಥಿಗಳನ್ನು ಪರಿಚಯಿಸಿದರು ಮತ್ತು ಮಹಾನಂದಾ ಗೊಬ್ಬುರ ಅವರು ವಂದಿಸಿದರು. ಉಪನ್ಯಾಸಕರಾದ ಜಗದೇವಿ ಚಿಕ್ಕೆಗೌಡ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ನಿರುಪಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago