371 J ಮೀಸಲಾತಿ ನಿಯಮದಂತೆ 545 ಪಿ ಎಸ್ ಐ ಹುದ್ದೆ ನೇಮಕಾತಿ ನಡೆಯಲಿ: ಶಶೀಲ್ ಜಿ ನಮೋಶಿ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳನ್ನು 371ಜೆ ಅಡಿಯಲ್ಲಿ ಮೀಸಲಾತಿ ಕೋರಿದ್ದು, ಆಯ್ಕೆ ಪಟ್ಟಿ ತಯಾರಿಸುವಾಗ ಮೊದಲಿಗೆ ಮೆರಿಟ್ ಆಧಾರದಲ್ಲಿ ಅವರನ್ನು ಮಿಕ್ಕುಳಿದ ವೃಂದದಲ್ಲಿ ಪರಿಗಣಿಸಿ. ಇನ್ನುಳಿದ ಅಭ್ಯರ್ಥಿಗಳನ್ನು ಸ್ಥಳೀಯ ವೃಂದದಲ್ಲಿ ಪರಿಗಣಿಸಿ ಆಯ್ಕೆ ಪಟ್ಟಿಯನ್ನು ತಯಾರಿಸಲು ಸೂಕ್ತ ನಿರ್ದೇಶನ ನೀಡಬೇಕೆಂದು ಸರ್ಕಾರಕ್ಕೆ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಆಗ್ರಹಿಸಿದ್ದಾರೆ.

ಕರ್ನಾಟಕ ಸರಕಾರ ದಿನಾಂಕ 21-01-2021 ರಂದು ಪೋಲಿಸ್ ಇಲಾಖೆಯ ಮೂಲಕ 545 ಪೋಲಿಸ್ ಸಬ್ ಇನ್ಸಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ನಡೆಸಿರುತ್ತದೆ. ಕಾರಣಾಂತರದಿಂದ ಹಿಂದೆ ನಡೆದ ಪರೀಕ್ಷೆಗಳು ರದ್ದಾಗಿ, ಇತ್ತೀಚಿಗೆ ಸರಕಾರವು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿರುತ್ತದೆ.

ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳನ್ನು ಆಯ್ಕೆ ಪಟ್ಟಿ ತಯಾರಿಸುವಾಗ ಅನುಸರಿಸಬೇಕಿರುವ ನಿಯಮಗಳನ್ನು ಕಾಲಕಾಲಕ್ಕೆ ಸರಕಾರವು ಸುತ್ತೋಲೆಯ ಮೂಲಕ ನೀಡುತ್ತ ಬಂದಿರುತ್ತದೆ. ಅದರಂತೆ ಪ್ರಸ್ತುತ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ದಿನಾಂಕ 01-02-2023ರಂದು ಹೊರಡಿಸಿರುವ ಸುತ್ತೋಲೆಯು ಚಾಲ್ತಿಯಲ್ಲಿರುತ್ತದೆ.

ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳು 371ಜೆ ಅಡಿಯಲ್ಲಿ ಮೀಸಲಾತಿ ಕೋರಿದ್ದು, ಆಯ್ಕೆ ಪಟ್ಟಿ ತಯಾರಿಸುವಾಗ ಮೊದಲಿಗೆ ಮೆರಿಟ್ ಆಧಾರದಲ್ಲಿ ಅವರನ್ನು ಮಿಕ್ಕುಳಿದ ವೃಂದದಲ್ಲಿ ಪರಿಗಣಿಸಿ, ಇನ್ನುಳಿದ ಅಭ್ಯರ್ಥಿಗಳನ್ನು ಸ್ಥಳೀಯ ವೃಂದದಲ್ಲಿ ಪರಿಗಣಿಸಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಬೇಕಿದೆ ಎಂದು ತಿಳಿಸಿದ ಅವರು ಇತ್ತೀಚಿಗೆ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ, ಒಳಾಡಳಿತ ಇಲಾಖೆಯವರು ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು, ಪೋಲಿಸ್ ಪ್ರಧಾನ ಕಛೇರಿ ಇವರಿಗೆ ಬರೆದ ಪತ್ರದಲ್ಲಿ ದಿನಾಂಕ 01-02-2023ರ ಸುತ್ತೋಲೆಯನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ದಾಖಲಾದ ಅರ್ಜಿ ಸಂ.1970/2023, ದಿನಾಂಕ 01-01-2024ರ ತೀರ್ಪಿನಲ್ಲಿ ರದ್ದುಪಡಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ತೀರ್ಪಿನ ವಿರುದ್ದ ಉಚ್ಚನ್ಯಾಯಾಲಯದಲ್ಲಿ ಸಲ್ಲಿಸಲಾಗಿರುವ ರಿಟ್ ಅರ್ಜಿ ಸಂ.16343/2024ರಲ್ಲಿ ನೀಡುವ ತೀರ್ಪಿಗೆ ಒಳಪಟ್ಟು ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಸಂಬಂದಿಸಿದಂತೆ ದಿನಾಂಕ: 06/6/2020ರ ಸುತ್ತೋಲೆಯಂತೆ ಕ್ರಮವಹಿಸುವಂತೆ ಸೂಚಿಸಿರುವದು ಸಂವಿಧಾನದ 371ಜೆ ಆಶಯಗಳಿಗೆ ವಿರುದ್ಧವಾಗಿರುತ್ತದೆ ಎಂದಿದ್ದಾರೆ.

ಉಚ್ಚನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ ಅರ್ಜಿ ಸಂ. 16343/2024ರಲ್ಲಿ ಮಾನ್ಯ ಉಚ್ಚನ್ಯಾಯಾಲಯವು ದಿನಾಂಕ 08-08-2024 ರಂದು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ದಾಖಲಾದ ಅರ್ಜಿ ಸಂ.1970/ 2023, ದಿನಾಂಕ 01-01-2024ರ ತೀರ್ಪಿಗೆ ತಡೆಯಾಜ್ಞೆಯನ್ನು ನೀಡಿರುತ್ತದೆ. ಉಚ್ಚ ನ್ಯಾಯಾಲಯದಲ್ಲಿ ಸದರಿ ಕೆಎಟಿ ಆದೇಶಕ್ಕೆ ತಡೆಯಾಜ್ಞೆ ಇದ್ದರೂ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ, ಒಳಾಡಳಿತ ಇಲಾಖೆಯವರು ಮುಖ್ಯ ಮಂತ್ರಿಗಳಿಗೆ ತಪ್ಪು ಮಾಹಿತಿ ನೀಡಿ ಅನುಮೋದನೆ ಪಡೆದಿರುವದು ಅತ್ಯಂತ ಅಕ್ಷಮ್ಯವಾಗಿರುತ್ತದೆ ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸರಕಾರವು ತಾರತಮ್ಯ ನೀತಿ ಅನುಸರಿಸುತ್ತಿದೆ ಎನ್ನುವ ಭಾವನೆ ವ್ಯಕ್ತವಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ 371ಜೆ ಮೀಸಲಾತಿ ಕೋರಿದ್ದರೂ ಮೆರಿಟ್ ಆಧಾರದಲ್ಲಿ ಮಿಕ್ಕುಳಿದ ವೃಂದದಲ್ಲಿ ಆಯ್ಕೆ ಮಾಡುವದರಲ್ಲಿ ಯಾವುದೇ ತಪ್ಪು ಕಂಡುಬರುವದಿಲ್ಲ ಹಾಗೂ ಇದು ಸಹಜ ನ್ಯಾಯ ಮತ್ತು ಎಲ್ಲಾ ರೀತಿಯ ಮೀಸಲಾತಿ ಕ್ರಮದಲ್ಲಿಯೇ ಇರುತ್ತದೆ.ಆದ್ದರಿಂದ. 545 ಪೋಲಿಸ್ ಸಬ್ ಇನ್ಸಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿಯಲ್ಲಿ ಆಯ್ಕೆ ಪಟ್ಟಿ ತಯಾರಿಸುವಾಗ ದಿನಾಂಕ 01-02-2023ರ ಸುತ್ತೋಲೆಯಂತೆಯೇ ಆಯ್ಕೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

5 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago