21 ನೇ ಶತಮಾನವು ನುರಿತವರ ಯುಗವಾಗಿದೆ: ಶಶೀಲ್ ನಮೋಶಿ

ಕಲಬುರಗಿ: 21ನೇ ಶತಮಾನವು ನುರಿತವರ ಯುಗವಾಗಿದೆ. ಜಾಗತೀಕರಣಗೊಂಡ ಆರ್ಥಿಕತೆಯಲ್ಲಿ, ಭಾರತವು ತನ್ನ ಉದ್ಯೋಗಿಗಳು ಕೌಶಲ್ಯಪೂರ್ಣವಾಗಿರದ ಹೊರತು ಅಭಿವೃದ್ಧಿ ಹೊಂದಿದ ರಾಷ್ಟ್ರಗಳೊಂದಿಗೆ ಸ್ಪರ್ಧಿಸಲು ಆಶಿಸುವುದಿಲ್ಲ. ದುರದೃಷ್ಟವಶಾತ್, ನಮ್ಮ ಶಿಕ್ಷಣ ವ್ಯವಸ್ಥೆಯು ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ನಡೆಯುತ್ತಿಲ್ಲ ಮತ್ತು ನಿರುದ್ಯೋಗಿ ಪದವೀಧರರನ್ನು ಹೊರಹಾಕುತ್ತಲೇ ಇದೆ. ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಹೇಳಿದರು.

ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಕಾಲೇಜಿನಲ್ಲಿ ನಡೆದ. ಎಂ ಎಸ್ ಇರಾಣಿ ಕಾಲೇಜು, ಆಂತರಿಕ ಗುಣಮಟ್ಟ ಕೋಶ ಹಾಗೂ ವೃತ್ತಿ ಮಾರ್ಗದರ್ಶನ ಕೋಶ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉದ್ಯೋಗಶಿಲತೆಯಲ್ಲಿ ಕೌಶಲ್ಯ ವರ್ಧನೆಯ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಭಾರತದಲ್ಲಿ ಇಂದು ಉದ್ಯೋಗ,ನೌಕರಿ ಎಂಬ ಪದ ಬಹಳ ಮುಖ್ಯವಾಗಿ ಹೋಗಿದೆ ಇಂದು ಭಾರತಿಯರಿಗೆ ಉದ್ಯೋಗ ಅವಕಾಶ ಸಿಗಬೇಕಾದರೆ ಹೀಗಾಗಿ, ಭಾರತೀಯ ಯುವಕರಿಗೆ ಕೌಶಲ್ಯ ಅಭಿವೃದ್ಧಿ ಬಹಳ ಮುಖ್ಯ ಎಂಬುದು ಸ್ಪಷ್ಟವಾಗಿದೆ. ಇದು ಅವರ ವೃತ್ತಿಜೀವನದಲ್ಲಿ ಯಶಸ್ಸಿನ ಉತ್ತಮ ಅವಕಾಶವನ್ನು ನೀಡುತ್ತದೆ ಆದರೆ ಒಟ್ಟಾರೆಯಾಗಿ ದೇಶದ ಆರ್ಥಿಕತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಹಿಂದೆ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರ ಅಂದಿನ ಕೇಂದ್ರ ಸಚಿವರಾದ ಪ್ರಮೋದ್ ಮಹಾಜನ್ ನೇತೃತ್ವದಲ್ಲಿ ಯುವಜನತೆಯ ಉದ್ಯೋಗ ಅವಕಾಶಕ್ಕಾಗಿ ಸಾವಿರಾರು ಕೋಟಿ ರೂ ಜಾಗತೀಕ ಬ್ಯಾಂಕ್ ನಿಂದ ಸಾಲ ಪಡೆದು ವಿನಿಯೋಗಿಸಿತ್ತು. 2023 ರಿಂದ ಸರ್ಕಾರಗಳು ವಿಶ್ವವಿದ್ಯಾಲಯಗಳೋಂದಿಗೆ ಕೌಶಲ್ಯ ಅಭಿವೃದ್ಧಿಗಾಗಿ ಹೊಸ ಹೊಸ ಉದ್ಯೋಗ ಆಧಾರಿತ ಕೊರ್ಸಗಳನ್ನು ತೆಗೆದು ಅದರ ಮುಖಾಂತರ ಕೌಶಲ್ಯಗಳನ್ನು ನೀಡುತ್ತಿವೆ ಎಂದು ಹೇಳಿದರು.

ಒಟ್ಟಾರೆಯಾಗಿ, ಕೌಶಲ್ಯ ಅಭಿವೃದ್ಧಿಯು ಭಾರತೀಯ ಯುವಕರ ಶಿಕ್ಷಣ ಮತ್ತು ಬೆಳವಣಿಗೆಯ ಅತ್ಯಗತ್ಯ ಭಾಗವಾಗಿದೆ. ಕೌಶಲ್ಯ ತರಬೇತಿಯಲ್ಲಿ ಹೂಡಿಕೆ ಮಾಡುವ ಮೂಲಕ ಮತ್ತು ಉದ್ಯಮಶೀಲತೆಯನ್ನು ಪ್ರೋತ್ಸಾಹಿಸುವ ಮೂಲಕ, ಭಾರತವು ತನ್ನ ಯುವಜನರಿಗೆ ಸಮಾಜದ ಉತ್ಪಾದಕ ಸದಸ್ಯರಾಗಲು ಹೆಚ್ಚಿನ ಅವಕಾಶಗಳನ್ನು ಒದಗಿಸಬಹುದು. ಸುಧಾರಿತ ಕೌಶಲ್ಯಗಳೊಂದಿಗೆ, ಅವರು ತಮ್ಮ ಕ್ಷೇತ್ರಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ, ಜೊತೆಗೆ ರಾಷ್ಟ್ರದ ಆರ್ಥಿಕ ಬೆಳವಣಿಗೆಗೆ ಅರ್ಥಪೂರ್ಣವಾಗಿ ಕೊಡುಗೆ ನೀಡುತ್ತಾರೆ ಎಂದು ಹೇಳಿದರು.

ಕಲಬುರ್ಗಿ ಜಿಲ್ಲೆಯ ಕೌಶಲ್ಯಾಭಿವೃದ್ಧಿ ಅಧಿಕಾರಿ ಮುರಳಿದರ ಮುಖ್ಯ ಅತಿಥಿಗಳಾಗಿದ್ದರು. ಸಿಡಾಕನ ಕಲಬುರ್ಗಿ ವಿಭಾಗಿಯ ಅಧಿಕಾರಿ ಸೈಯದ್ ಅಶ್ಫಾಕ್ ಅಹ್ಮದ್ ವಿಷಯ ಕುರಿತು ಮಾಹಿತಿ ಭಾಷಣ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಪ್ರೊ. ರೋಹಿಣಿಕುಮಾರ್ ಹಿಳ್ಳಿ ಸಂಪನ್ಮೂಲ ವ್ಯಕ್ತಗಳಾದ ಗುರುನಾಥ ಬಡಿಗೇರ, ಪ್ರೋ ವಿದ್ಯಾ ಪಾಟೀಲ್, ಡಾ ರಾಜು ತೆಗ್ಗೆಳ್ಳಿ, ಡಾ. ಜಯಶ್ರೀ ಬಡಿಗೇರ, ಡಾ. ರಾಜಶೇಖರ ಬೀರನಳ್ಳಿ, ಡಾ. ಪ್ರಾಣೇಶ್ ,ಡಾ ನೀಲಕಂಠ ಎಸ್ ವಾಲಿ ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಡಾ. ಜಯಶ್ರೀ ಬಡಿಗೇರ ಸ್ವಾಗತಿಸಿದರು. ವಿದ್ಯಾರ್ಥಿನಿ ನಾಗರತ್ನ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ಶ್ವೇತಾ ಪ್ರಾರ್ಥನೆ ಮಾಡಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

6 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

8 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

15 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

15 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

16 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago