ಕ್ರೀಡಾ ಲೋಕದ ಸಾಧಕ ಪ್ರತಿಭೆಗಳಿಗೆ ಸತ್ಕಾರ

ವಾಡಿ: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅದ್ಭುತ ಪ್ರತಿಭೆ ಪ್ರದರ್ಶಿಸುವ ಮೂಲಕ ವಿಭಾಗ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸ್ಥಳೀಯ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಸಾಧಕ ಪ್ರತಿಭೆಗಳನ್ನು ಬೆಳಗಿನ ಬಳಗದ ಸದಸ್ಯರು ಸತ್ಕರಿಸಿದರು. ವಾಲಿಬಾಲ್ ಮತ್ತು ಪುಸ್ತಕಗಳನ್ನು ಕಾಣಿಕೆಯಾಗಿ ನೀಡುವ ಮೂಲಕ ಗೌರವಿಸಿ ಪ್ರೋತ್ಸಾಹಿಸಿದರು.

ಈ ವೇಳೆ ಮಾತನಾಡಿದ ಬೆಳಗಿನ ಬಳಗದ ಯೋಗ ಶಿಕ್ಷಕ ವೀರಣ್ಣ ಯಾರಿ, ಸರ್ಕಾರಿ ಶಾಲೆಗಳಲ್ಲೂ ಪ್ರತಿಭೆಗಳಿರುತ್ತವೆ. ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂಬ ಸತ್ಯವನ್ನು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಹಾಗೂ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಆಟದಲ್ಲಿ ವಿಭಾಗ ಮಟ್ಟಕ್ಕೆ ಹಾಗೂ ಉದ್ದ ಜಿಗಿತ ಮತ್ತು ಎತ್ತರ ಜಿಗಿತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ತೋರಿಸಿಕೊಟ್ಟಿದ್ದಾರೆ.

ದೈಹಿಕ ಶಿಕ್ಷಕರ ಶ್ರಮ ಮತ್ತು ಪ್ರಾಂಶುಪಾಲರ ಪ್ರೋತ್ಸಾಹವೇ ಈ ಪ್ರತಿಭೆಗಳು ರಾಜ್ಯದಲ್ಲಿ ಗುರುತಿಸಿಕೊಳ್ಳು ಸಿದ್ಧರಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ವಾಡಿ ಮಕ್ಕಳು ಕ್ರೀಡಾ ಪ್ರತಿಭೆ ಮೆರೆಯುವ ಮೂಲಕ ನಾಡಿನಲ್ಲಿ ಮಿಂಚಬೇಕು. ಅಗತ್ಯ ಸಹಾಯ ಸಹಕಾರ ಬೆಳಗಿನ ಬಳಗ ಮಾಡಲಿದೆ ಎಂದರು.

ಪ್ರಾಂಶುಪಾಲರಾದ ಉದಯ ಧರೆಣ್ಣವರ್, ಶಂಕರ ರಾಠೋಡ ಹಾಗೂ ದೈಹಿಕ ಶಿಕ್ಷಕರಾದ ಶ್ರೀನಾಥ ಇರಗೊಂಡ, ಶಂಕರಲಿಂಗ ಕೋಡಿ ಅವರನ್ನು ಸನ್ಮಾನಿಸಲಾಯಿತು. ಕ್ರೀಡಾ ಪ್ರತಿಭೆಗಳಿಗೆ ಸಿಹಿ ತಿನಿಸಿ ಶುಭಕೋರಲಾಯಿತು. ಬೆಳಗಿನ ಬಳಗದ ಜಯದೇವ ಜೋಗಿಕಲ್‍ಮಠ, ಕಾಶೀನಾಥ ಶೆಟಗಾರ, ಸಿದ್ಧಯ್ಯಶಾಸ್ತ್ರೀ ನಂದೂರಮಠ, ಮಲ್ಲಯ್ಯಸ್ವಾಮಿ ಮಠಪತಿ, ಶಿವಪ್ಪ ಮುಂಡರಗಿ, ದೇವಿಂದ್ರ ದೊಡ್ಡಮನಿ, ಅರುಣಕುಮಾರ ಪಾಟೀಲ, ಆನಂದ ಇಂಗಳಗಿ, ನಾಗರಾಜ ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

11 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago