ಕಲಬುರಗಿ: ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನಿಗೆ ರಾಜ್ಯ ಪಾಲರು ಅನುಮತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ರಾಜ್ಯಪಾಲರ ಆದೇಶ ಎತ್ತಿ ಹಿಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ತನ್ನ ಸ್ನಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಬಿಜೆಪಿ ಮುಖಂಡ ಸಿದ್ದು ಮಾನಕರ್ ಆಗ್ರಹಿಸಿದ್ದಾರೆ.
ಈ ನೆಲದ ಕಾನೂನು ಎಲ್ಲರಿಗೂ ಒಂದೇ ಆಗಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡದೆ ಕಾಲಹರಣ ಮಾಡುತ್ತಿರುವುದು ನ್ಯಾಯಾಂಗ ಮತ್ತು ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ. ರಾಜ್ಯದ ಸಂಪತ್ತು ಲೂಟಿಗೈದವರನ್ನು ಜೈಲಿಗೆ ಅಟ್ಟಬೇಕು, ನಮ್ಮದು ನುಡಿದಂತೆ ನಡೆವ ಸರಕಾರ ಎಂದೆಲ್ಲಾ ಬೊಗಳೆ ಬಿಡುತ್ತಿದ್ದ ಸಿದ್ದ ರಾಮಯ್ಯ ತನ್ನ ಮಾತನ್ನು ಉಳಿಸಿಕೊಳ್ಳುವ ಅವಕಾಶ ಒದಗಿ ಬಂದಿದೆ.
ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣ, ಡಿನೋಟಿಫಿಕೇಷನ್ ಪ್ರಕರಣ, ಅಧಿಕಾರ ದುರ್ಬಳಕೆ, ಸ್ವಜನ ಪಕ್ಷ ಪಾತ ಸಹಿತ ಸಾಲು ಸಾಲು ಹಗರಣಗಳನ್ನು ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನಿನ ಕುಣಿಕೆಯಿಂದ ಪಾರಾಗಲು ಸಾಧ್ಯವೇ ಇಲ್ಲ. ಅಧಿಕಾರ ದಾಹದಿಂದ ಜನರ ಭಾವನೆಯೊಂದಿಗೆ ಚೆಲ್ಲಾಟವಾಡಿ, ರಾಜ್ಯವನ್ನು ದಿವಾಳಿಯ ಅಂಚಿಗೆ ನೂಕಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ರಾಜ್ಯದ ಜನತೆಗೆ ಕ್ಷೇಮ ಎಂದು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…