ರಾಯಚೂರು: ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರವು “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024″ ಪ್ರಶಸ್ತಿಯನ್ನು ಪ್ರಕಟಿಸಿದೆ.
ರಾಯಚೂರು ( ಸಹಾಯಕ ಅಯುಕ್ತರು) ಉಪ ವಿಭಾಗಾಧಿಕಾರಿ ಮಹಿಬೂಬಿ ಎಂ. ಕಾರಟಗಿ ಅವರ ಸೇವೆ ಪರಿಗಣಿಸಿ ಕನಾ೯ಟಕ ಸರಕಾರ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ನಾಳೆ ದಿನಾಂಕ 27.09.2024 ರಂದು ಬೆಳಿಗ್ಗೆ 10 ಗಂಟೆಗೆ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ, ವಿಕಾಸ ಸೌಧ, ಕೊಠಡಿ ಸಂಖ್ಯೆ 419 ರಲ್ಲಿ ನಡೆಯಲಿರುವ ಕಂದಾಯ ಇಲಾಖೆಯ ಅಭಿನಂದನಾ ಸಮಾರಂಭದಲ್ಲಿ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
ಕಂದಾಯ ಇಲಾಖೆಯ ಅತ್ಯುತ್ತಮ ಹಾಗೂ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿರುವ ರಾಯಚೂರು ಉಪ ವಿಭಾಗದ ಸಹಾಯಕ ಆಯುಕ್ತರಾದ ಸಹೋದರಿ ಮಹಿಬೂಬಿ (ಎಂ.ಎಂ.ಕಾರಟಗಿ) ಅವರಿಗೆ ಹಿರಿಯ ಪತ್ರಕರ್ತ ಹಟ್ಟಿ ನಜೀರ್ ಮಿಯಾನ್ ಕಲಬುರಗಿ ಹಾಗೂ ಅರಕೇರಾ ಮತ್ತು ಕಾರಟಗಿ ಪರಿವಾರ ಹಷ೯ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…