ಶಹಾಬಾದ: ಭಾರತೀಯ ಜನತಾ ಪಕ್ಷದ ಸಂಸ್ಥಾಪಕ ಪಂಡಿತ್ ದೀನ ದಯಾಳ್ ಉಪಾಧ್ಯಾಯರ ಚಿಂತನೆ, ಮೌಲ್ಯಗಳು ಇಡೀ ಜಗತ್ತಿಗೆ ಆದರ್ಶ ಪ್ರಾಯ ಎಂದು ಬಿಜೆಪಿ ಅಧ್ಯಕ್ಷ ನಿಂಗಣ್ಣ ಹುಳಗೋಳಕರ್ ಹೇಳಿದರು.
ಅವರು ಬುಧವಾರ ನಗರದ ಬಿಜೆಪಿ ಮಂಡಲ ವತಿಯಿಂದ ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ ದೀನದಯಾಳ ಉಪಾಧ್ಯಾಯ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಾಮಾಣಿಕ ವ್ಯಕ್ತಿಯಾಗಿದ್ದ ಅವರು ತನಗಾಗಿ ಏನನ್ನು ಬಯಸಲಿಲ್ಲ. ಪಕ್ಷದ ಏಳಿಗೆಗಾಗಿ ದುಡಿದ ಧೀಮಂತ ನಾಯಕ. ಇಂದು ನಾವೆಲ್ಲರೂ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಸಂಘಟಿತರಾಗಬೇಕಿದೆ ಹಾಗೂ ಪಕ್ಷವನ್ನು ಸಂಘಟಿಸಬೇಕಾಗಿದಲ್ಲದೇ, ದೇಶದ ಭದ್ರತೆಗಾಗಿ ಎಲ್ಲರೂ ದೀನ ದಯಾಳ್ ಉಪಾಧ್ಯಾಯ ಅವರ ಆದರ್ಶಗಳನ್ನು ಅಳವಡಿಸಿಕೊಳ್ಳು ಅಗತ್ಯವಿದೆ ಎಂದು ಹೇಳಿದರು.
ಮುಖಂಡ ಭೀಮರಾವ ಸಾಳುಂಕೆ ಮಾತನಾಡಿ, ದೀನದಯಾಳರು ಸಂಘಟಿಕರಾಗಿ, ಸಂಘದ ಪ್ರಚಾರಕರಾಗಿ, ಜನಸಂಘದ ಪದಾಧಿಕಾರಿಯಾಗಿಯೂ, ಸಂಘಟನಾ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.ದೀನ ದಯಾಳರ ಕಾರ್ಯಶೈಲಿಯನ್ನು ನೋಡಿದ ಡಾ.ಶ್ಯಾಮ ಪ್ರಸಾದ ಮುಖರ್ಜಿಯವರು ನನಗೆ ಇಂತಹ ಇನ್ನಿಬ್ಬರು ದೀನದಯಾಳರು ಸಿಕ್ಕರೆ ದೇಶದ ರಾಜಕೀಯ ಚಿತ್ರವನ್ನೇ ಬದಲಾಯಿಸುತ್ತೆನೆ ಎಂದಿದ್ದರು.
ಈ ದೇಶದ ರಾಜಕೀಯದ ಬಗ್ಗೆ ಚಿಂತನೆ ಮಾಡಿ ಏಕತಾ ಮಾನವತಾವಾದ ಪುಸ್ತಕ ಬರೆದಿದ್ದರು.ಅಖಂಡ ಭಾರತವನ್ನು ಬಲಪಡಿಸಬೇಕೆಂದು ದಿನದ ಹೆಚ್ಚಿನ ಸಮಯವನ್ನು ಜನಸಂಘದ ಬಗ್ಗೆ ಚಿಂತಿಸಿದವರು. ಕೊನೆಗೆ ದೇಶಕ್ಕಾಗಿಯೇ ತನ್ನ ಪ್ರಾಣವನ್ನು ತ್ಯಾಗಮಾಡಿದರು. ಅವರು ಹಾಕಿಕೊಟ್ಟ ಸನ್ಮಾರ್ಗವನ್ನು ನಾವೆಲ್ಲ ಕಾರ್ಯಕರ್ತರು ಅನುಸರಿಸಬೇಕೆಂದು ಹೇಳಿದರು.
ಬಿಜೆಪಿ ಹಿರಿಯ ಮುಖಂಡ ಚಂದ್ರಕಾಂತ ಗೊಬ್ಬರಕರ್ ಮಾತನಾಡಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬೆಳೆಯಲು ಕಾರಣರಾದವರು ದೀನ ದಯಾಳರು. ಇವರು ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬರಲ್ಲೂ ರಾಷ್ಟ್ರಪ್ರೇಮ ಮೂಡಿಸಬೇಕು ಎಂಬ ಭಾವನೆ ಹೊಂದಿದ್ದರು ಎಂದು ಹೇಳಿದರು.
ದೇವದಾಸ ಜಾಧವ ನಿರೂಪಿಸಿ, ಸ್ವಾಗತಿಸಿದರು. ದಿನೇಶ ಗೌಳಿ ವಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿಯ ಪ್ರಮುಖರು ಸೇರಿದಂತೆ ಎಲ್ಲಾ ಕಾರ್ಯಕರ್ತರು ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…