ಕಲಬುರಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮದ ಶ್ರೀಕಾಂತ್ ಪೂಜಾರಿ (28) ಮೇಲೆ ಗುಂಡಿನ ದಾಳಿ ನಡೆದಿದೆ.
ಬುಧವಾರ ರಾತ್ರಿ ಕಡಗಂಚಿ ಗ್ರಾಮದ ಮನೆಯೊಂದರಲ್ಲಿ ಪಾರ್ಟಿ ಮಾಡುತ್ತಿರುವ ವೇಳೆ ಗುಂಡಿನ ದಾಳಿ ನಡೆದಿದೆ.
ಶ್ರೀಕಾಂತ್, ಮಾಳಪ್ಪ, ಕಾಂತಪ್ಪ ಸೇರಿದಂತೆ ಆರೇಳು ಜನ ಸೇರಿಕೊಂಡು ಪಾರ್ಟಿ ಮಾಡುತ್ತಿದ್ದ ವೇಳೆ ಜಗಳ ಉಂಟಾಗಿ ಶ್ರೀಕಾಂತನ ಮೇಲೆ ಗುಂಡಿನ ದಾಳಿಯಾಗಿದೆ.
ಗುಂಡಿನ ದಾಳಿ ಮಾಡಿದ ಆರೋಪಿಗಳಾದ ಕಾಂತಪ್ಪ ಮತ್ತು ಮಾಳಪ್ಪ ಅವರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ನರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆದಿದೆ.