ಶಹಾಪುರ : ಬಹು ದಿನಗಳ ಬೇಡಿಕೆಯಾಗಿ ಉಳಿದಿದ್ದ ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ವಸತಿ ನಿಲಯ ಹಾಗೂ ಕಲ್ಯಾಣ ಮಂಟಪದ ನಿವೇಶನವನ್ನು ಸರ್ಕಾರದಿಂದ ಮಂಜೂರು ಮಾಡಿಸುವಲ್ಲಿ ಕಾರಣಿಭೂತರಾದ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರ ಅವರಿಗೆ ಸಮಸ್ತ ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಅಭಿನಂದನೆಗಳು ಸಲ್ಲಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟದಲ್ಲಿ ಅನುಮೋದನೆಗೊಳಿಸಿ ಮುಂದಿನ ಕಲ್ಯಾಣ ಮಂಟಪ ಹಾಗೂ ವಸತಿ ನಿಲಯದ ಕಟ್ಟಡದ ರೂಪರೇಷಗಳ ಕುರಿತು ಬಗ್ಗೆ ಚರ್ಚಿಸಿ,ಕಲ್ಯಾಣ ಮಂಟಪ ಹಾಗೂ ವಸತಿ ನಿಲಯದ ಕಟ್ಟಡ ನಿರ್ಮಾಣಕ್ಕಾಗಿ ಕೂಡಲೇ ಕಾರ್ಯ ಪ್ರವೃತ್ತರಾಗಬೇಕೆಂದು ಸಚಿವರು ಹಾಗೂ ಶಹಪುರ ತಾಲೂಕಿನ ಮತಕ್ಷೇತ್ರದ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಸೂಚಿಸಿ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ವೀರಶೈ ಸಮಾಜದ ಅಧ್ಯಕ್ಷ ಸಿದ್ದಣ್ಣ ಸಾಹು ಆರಬೋಳ,ಸಮಾಜದ ಹಿರಿಯ ಮುಖಂಡರಾದ ಲಿಂಗಣ್ಣ ಪಡಶೆಟ್ಟಿ,ಸಿದ್ದಲಿಂಗಣ್ಣ ಆನೆಗುಂದಿ, ಬಸನಗೌಡ ಮಾಲಿ ಪಾಟೀಲ್, ಚಂದ್ರಶೇಖರ್ ಸಾಹು ಆರಬೋಳ, ಮಲ್ಲಣ್ಣ ಮಡ್ಡಿ ಸಾಹು,ಶರಣಪ್ಪ ಮುಂಡಾಸ್,ಸೋಮಶೇಖರಯ್ಯ ಹಿರೇಮಠ,ಸುಧಾಕರ ಗುಡಿ,ಶಿವಣ್ಣ ಇಜೇರಿ,ರಾಜು ಆನೆಗುಂದಿ,ಬಸವರಾಜ ಶಿಣ್ಣೂರ ಸೇರಿದಂತೆ ಇನ್ನಿತರರು ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…