ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇದೇ 29 ರಂದು ಬೆಳಗ್ಗೆ 10.45 ಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸಾದನೆ ಮಾಡಿದ ಹಾಗೂ ಪ್ರಶಸ್ತಿಗೆ ಭಾಜನರಾದ ಸಾಹಿತ್ಯ, ಸಂಸ್ಕøತಿ ಕ್ಷೇತ್ರದ ರಕ್ಷಕರಾದ ಸಾಧಕರಿಗೆ ಸತ್ಕಾರ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಈ ನೆಲದ ಕಲೆ, ಸಾಹಿತ್ಯ, ಸಂಗೀತ ಮತ್ತು ಸಾಂಸ್ಕøತಿಕ ಪರಂಪರೆಗೆ ಶ್ರಮಿಸಿದವರು ಅನೇಕರಿದ್ದಾರೆ. ಅವರಲ್ಲಿ ತಮ್ಮ ವೃತ್ತಿಯ ಜತೆಗೆ ಸಾಮಾಜಿಕ ಸೇವಾ ಕಾರ್ಯಗಳಲ್ಲೂ ತೊಡಗಿಸಿಕೊಂಡು ಸಾಧನೆ ಮಾಡಿದವರುಂಟು. ಅಂಥ ಮಹನೀಯರನ್ನು ಸತ್ಕರಿಸಿ ಗೌರವಿಸುವ ಕಾರ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಅಂದು ನಡೆಯುವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಗದ ಕಾರ್ಯದರ್ಶಿ ಬಸವರಾಜ ದೇಶಮುಖ, ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ, ಚರ್ಮರೋಗ ತಜ್ಞೆ ಡಾ. ರಾಜೇಶ್ವರ ಎಂ.ಎನ್. ಅವರು ಆಗಮಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಟಿ.ಎಸ್.ಆರ್. ಪತ್ರಿಕೋದ್ಯಮ ಪ್ರಶಸಿಗೆ ಭಾಜನರಾದ ಹಿರಿಯ ಪತ್ರಕರ್ತ ಶ್ರೀಕಾಂತಾಚಾರ್ಯ ಮಣೂರ, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತರಾದ ಡಿ.ಶಿವಲಿಂಗಪ್ಪ, ಗುಲಬರ್ಗ ವಿಶ್ವವಿದ್ಯಾಲಯದ ನೂತನ ಸಿಂಡಿಕೇಟ್ ಸದಸ್ಯರಾದ ಎಸ್.ಪಿ. ಸುಳ್ಳದ್, ಮಲ್ಲಣ್ಣ ಮಡಿವಾಳ, ಉದಯ ಪಾಟೀಲ, ಬೆಂಗಳೂರಿನ ರಾಜೀವ ಗಾಂಧಿ ವಿಜ್ಞಾನ ವಿಶ್ವವಿದ್ಯಾಲಯದ ನೂತನ ಸದಸ್ಯ ಡಾ. ಅರವಿಂದ ಎಸ್.ಎಚ್. ಕಟ್ಟಿ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ನೂತನ ಸಿಂಡಿಕೇಟ್ ಸದಸ್ಯ ಡಾ. ಅತೀಕ್ ಉರ್ ರೆಹಮಾನ್, ಗುಲಬರ್ಗ ವಿ.ವಿ. ಯಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಡಾ. ಲಕ್ಷ್ಮಣ ದಸ್ತಿ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕøತರಾದ ಸಿದ್ಧಲಿಂಗಯ್ಯಸ್ವಾಮಿ ಮಲಕೂಡ, ಶಂಕರಜೀ ಹಿಪ್ಪರಗಿ ಅವರನ್ನು ವಿಶೇಷವಾಗಿ ಸತ್ಕರಿಸಲಾಗುವುದು ಎಂದು ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಧರ್ಮಣ್ಣ ಎಚ್. ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…