ಕಲಬುರಗಿ: ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಗುರುವಾರ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಜಿಲ್ಲಾ ಘಟಕದಿಂದ ತಹಶೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಯಿತು. ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ನಡೆಸಿದ ಅಧಿಕಾರಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ಹೊರಹಾಕಿದ್ರು.
ಕೆಸಿಎಸ್‍ಆರ್ ನಿಯಮ 16ಎ ಅನ್ನು ಮರು ಸ್ಥಾಪಿಸುವಂತೆ, ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರದಲ್ಲಿ ಇದುವರೆಗೂ ಆಗಿರುವ ಅಮಾನತ್ತುಗಳನ್ನು ತಕ್ಷಣವೇ ರದ್ದು ಪಡಿಸುವಂತೆ ಹಾಗೂ ಅಂತರ ಜಿಲ್ಲಾ ಪತಿ-ಪತ್ನಿ ಪ್ರಕರಣಗಳ ವರ್ಗಾವಣೆಯನ್ನು ಚಾಲನೆ ನೀಡಿ ಅಂತಿಮ ಆದೇಶಕ್ಕಾಗಿ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಪ್ರತಿಭಟನಾನಿರತರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸೈಯದ್ ಜುಬೇರ್ ಅಲಿ, ಕಾರ್ಯದರ್ಶಿ ಕುಮಾರ ಮೇಣಸಿನಕಾಯಿ, ಖಜಾಂಚಿ ರೇವಣಸಿದ್ದಪ್ಪ ಚಂದನಕೇರಿ, ಮಾಜಿ ಅಧ್ಯಕ್ಷ ಗುರುಮೂರ್ತಿ, ರಾಜ್ಯ ಸಂಘ ಸಂಚಾಲಕರಾಜು ಗೋಪಗೆ, ರಾಜ್ಯ ಸರಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಕೆ.ಕಿರಣಕುಮಾರ ಸತೀಶ ಸಜ್ಜನ,ಕೆ ಸೇರಿದಂತೆ ಅನೇಕರು ಪಾಲ್ಗೊಂಡರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…