ಕೆಕೆಆರಡಿಬಿಯಿಂದಿ ಸರಕಾರಿ ಶಾಲೆಗಳ ಅಭಿವೃದ್ಧಿಪಡಿಸಿ; ಅಟ್ಟೂರ

0
25

ಕಲಬುರಗಿ; ಸ್ನೇಹ ಸಂಗಮ ವಿವಿದೊದ್ದೇಶ ಸೇವಾ ಸಂಘದ ವತಿಯಿಂದ ಗ್ರಾಮೀಣ ಭಾಗದ ಸರಕಾರಿ ಶಾಲೆಗಳು ಉಳಿಸಿ ಮೂಲಭೂತ ಸಮಸ್ಯೆಗಳು ಪರಿಹರಿಸುವ ನಿಟ್ಟಿನಲ್ಲಿ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಅನುದಾನ ನೀಡಿ ಶಾಲೆಗಳು ಅಭಿವೃದ್ಧಿಪಡಿಸಬೇಕೆಂದು ಮಂಡಳಿಯ ಅಧೀನ ಕಾರ್ಯದರ್ಶಿಯಾದ ಪ್ರಕಾಶ ಕುದುರಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಇತ್ತೀಚೆಗೆ ಸಂಘದ ವತಿಯಿಂದ “ನಮ್ಮ ನಡಿಗೆ ಹಳ್ಳಿಯ ಕನ್ನಡ ಸರಕಾರಿ ಶಾಲೆಯ ಕಡೆಗೆ” ಎಂಬ ಸರಣಿ ಕಾರ್ಯಕ್ರಮವನ್ನು ಕಲಬುರಗಿ ತಾಲೂಕಿನಲ್ಲಿನ ಹರಸೂರ, ತಾವರಗೇರಾ , ತಾಜ ಸುಲ್ತಾನಪೂರ, ಕಡಣಿ, ಹಡಗಿಲ ಹಾರುತಿ, ಗ್ರಾಮಗಳಲ್ಲಿ ಮೂಲಭೂತ ಸಮಸ್ಯಗಳು ಪರಿಹರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Contact Your\'s Advertisement; 9902492681

ಅಧಿಕಾರಿಗಳು ಕೆಲವು ಸಮಸ್ಯಗಳಿಗೆ ಸ್ಪಂದಿಸಿ ಸ್ಥಳದಲ್ಲಿಯೇ ಪರಿಹರಿಸಿದ್ದಾರೆ. ಗ್ರಾಮೀಣ ಭಾಗದ ಕನ್ನಡ ಸರ್ಕಾರಿ ಶಾಲೆ ಉಳಿಸಬೇಕೆಂಬ ಸಂಕಲ್ಪದೊಂದಿಗೆ ಸರಣಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೊತೆಗೆ ಸರಕಾರಿ ಶಾಲೆಯ ಮಕ್ಕಳಿಗೆ ಪ್ರೋತ್ಸಾಹಿಸುವದರೊಂದಿಗೆ ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ “ಸಾಧಕ ರತ್ನ” ಪ್ರಶಸ್ತಿ ನೀಡಿ ಪ್ರೋತ್ಸಾಹಿಸಲಾಯಿತು.

ಮೇಲ್ಕಂಡ ಗ್ರಾಮದ ಸರಕಾರಿ ಶಾಲೆಗಳಲ್ಲಿ ಮೂಲಭೂತ ಸಮಸ್ಯಗಳಾದ ಕೊಠಡಿ, ಶೌಚಾಲಯ, ಆಟದ ಮೈದಾನ ಹೀಗಯೆ ಹಲವಾರು ಸಮಸ್ಯೆಗಳಿಂದ ಬಳಲುತ್ತಿವೆ. ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ತಮ್ಮ ಮಂಡಳಿಯಿಂದ ಸಹಕಾರ ನೀಡಿ ಹಣ ಬಿಡುಗಡೆಗೊಳಿಸಿ ಸಮಸ್ಯ ಪರಿಹರಿಸಬೇಕೆಂದರು.

ಸಂಘದ ಅಧ್ಯಕ್ಷರಾದ ನ್ಯಾಯವಾದಿ ಹಣಮಂತರಾಯ ಎಸ್ ಅಟ್ಟೂರ, ಅಂಬಾರಾಯ ಪಟ್ಟಣಕರ್ ಕಣ್ಣಿ, ಇತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here