ಡಾ. ಬಿ. ಆರ್. ಅಂಬೇಡ್ಕರ್ ಅವರ ಜ್ಞಾನ ಸಂದೇಶ ಪಾಲಿಸಿ

ಕಲಬುರಗಿ : ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಸಂದೇಶಗಳನ್ನು ಪಾಲಿಸಬೇಕು. ಅವರು ನೀಡಿರುವ ಜ್ಞಾನ, ಉತ್ತಮ ಚಾರಿತ್ರ‍್ಯ ಮತ್ತು ಸ್ವಾಭಿಮಾನದ ತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ರವರ ೧೩೩ನೇ ಜಯಂತ್ಯೋತ್ಸವ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ನಂತರ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಮಾತನಾಡಿ ಡಾ. ಬಿ. ಆರ್. ಅಂಬೇಡ್ಕರ್ ಅವರು ತಿಳಿಸಿರುವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾಧನೆ ಮಾಡಿದರೆ ಅವರ ಸಂದೇಶಗಳಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.

ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ರೂಪಿಸುವುದು ವಿಶ್ವಾವಿದ್ಯಾಲಯದ ಆಶೋತ್ತರವಾಗಿದೆ. ಅದರ ಹಿನ್ನೆಲೆಯಲ್ಲಿ ಪಠ್ಯೇತರ ಮತ್ತು ವಿಶೇಷ ಚಟುವಟಿಕೆಗಳನ್ನು ಆಯೋಜಿಸಿ ಪ್ರೋತ್ಸಾಹ ನೀಡಲಾಗುತ್ತಿದೆ ಎಂದ ಅವರು ವಿದ್ಯಾರ್ಥಿ ಜೀವನದಲ್ಲಿ ಉನ್ನತ ಶಿಕ್ಷಣ ಕಲಿಕೆ ಹಂತದಲ್ಲಿ ಅತ್ಯುತ್ತಮ ಗುರಿಯೊಂದಿಗೆ ಸಿಗುವ ಅವಕಾಶ ಮತ್ತು ಸೌಲಭ್ಯಗಳನ್ನು ಯೋಗ್ಯ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು. ಉತ್ತಮ ಜ್ಞಾನ ಮತ್ತು ಚಾರಿತ್ರö್ಯದೊಂದಿಗೆ ವ್ಯಕ್ತಿತ್ವ ಬೆಳೆಸಿಕೊಂಡು ಪಾಲಕರ ಕನಸನ್ನು ನನಸು ಮಾಡಬೇಕು ಎಂದರು.

ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ನಿರ್ದೇಶಕ ಪ್ರೊ. ಚಂದ್ರಕಾAತ್ ಎಂ. ಯಾತನೂರ್ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಒಲಂಪಿಕ್ ವಿಜೇತರಾದ ಮೇಜರ್ ಧ್ಯಾನಚಂದ್ ಅವರ ಜನ್ಮದಿನದಂದು ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿವಿ ವಿದ್ಯಾರ್ಥಿಗಳ ಸಾಧನೆಗೆ ಮತ್ತು ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಒತ್ತು ನೀಡಲಾಗುತ್ತಿದೆ.

ವಿದ್ಯಾರ್ಥಿಗಳ ನಡುವೆ ಪರಸ್ಪರ ಒಳ್ಳೆಯ ಭಾವನೆ ಮತ್ತು ಸಹೋದರತೆ ಬೆಳೆಸಲು ಇಂತಹ ಸ್ಪರ್ಧೆಗಳು ಪೂರಕವಾಗಿವೆ. ಯುವಕರು ಕ್ರಿಯಾಶೀಲ ಮನಸ್ಸಿನಿಂದ ಸ್ಪರ್ಧಾತ್ಮಕ ಮತ್ತು ಕ್ರೀಡಾ ಮನೋಭಾವನೆ ಬೆಳೆಸಿಕೊಂಡರೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು ಎಂದರು.

ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಹಾಗೂ ವಿಸಿ ಕಪ್ ಕ್ರೀಡಾ ಟೂರ್ನಮೆಂಟ್ ಅಂಗವಾಗಿ ಪುರುಷ ಮತ್ತು ಮಹಿಳಾ ವಿದ್ಯಾರ್ಥಿಗಳಿಗಾಗಿ ಕ್ರ‍್ರಿಕೆಟ್, ವಾಲಿಬಾಲ್, ಥ್ರೋಬಾಲ್ ಪಂಧ್ಯಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪದಕ ಮತ್ತು ಟ್ರೋಪಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ. ರಾಜನಾಳ್ಕರ್ ಲಕ್ಷ್ಮಣ, ಮೌಲ್ಯಮಾಪನ ಕುಲಸಚಿವೆ ಪ್ರೊ. ಮೇಧಾವಿನಿ ಕಟ್ಟಿ, ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ರವಿಕುಮಾರ್ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಶಿವಶರಣ ಪಾಟಿಲ ಉಪಸ್ಥಿತರಿದ್ದರು. ವಿವಿಧ ಸ್ನಾತಕೋತ್ತರ ವಿಭಾಗಗಳ ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿ, ಅತಿಥಿ ಅಧ್ಯಾಪಕರು, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ದೈಹಿಕ ಶಿಕ್ಷಣ ವಿಭಾಗದ ಪ್ರಾಂಶುಪಾಲ ಮತ್ತು ಸಂಯೋಜಕ ಡಾ. ಹನುಮಂತ ಜಂಗೆ ಬಹುಮಾನ ವಿತರಣಾ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಬಸವರಾಜ ಪ್ರಾರ್ಥಿಸಿದರು.

ಅಣವೀರಗೌಡ ಬಿರಾದಾರ ಕಾರ್ಯಕ್ರಮ ನಿರ್ವಹಿಸಿದರು. ಸಂಗೀತ ವಿಭಾಗದ ಡಾ. ಲಕ್ಷ್ಮಿಶಂಕರ ಜೋಷಿ ನಾಡಗೀತೆ ಪ್ರಸ್ತುತಪಡಿಸಿದರು. ಚಿಮ್ಮ ಇದಲಾಯಿ ಡಾ.ಬಿ. ಆರ್. ಅಂಬೇಡ್ಕರ್ ಗೀತೆ ಹಾಡಿದರು.

ಗುಲಬರ್ಗಾ ವಿವಿಯ ಸ್ನಾತಕ ಪದವಿಯ ೫ ವಿದ್ಯಾರ್ಥಿಗಳು ಇಂಗ್ಲೆAಡ್ ದೇಶಕ್ಕೆ ವ್ಯಾಸಂಗ ಮಾಡಲು ತೆರಳಿದ್ದಾರೆ. ರಾಜ್ಯದ ೩೧ ವಿಶ್ವವಿದ್ಯಾಲಯಗಳಲ್ಲಿ ೬ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ವಿದೇಶಿ ವಿವಿಯಲ್ಲಿ ಅಧ್ಯಯನದ ಅವಕಾಶ ಸಿಕ್ಕಿದೆ. ಸತತ ಎರಡು ವರ್ಷ ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಅವಕಾಶ ಲಭಿಸಿರುವುದು ನಿಜಕ್ಕೂ ಹೆಮ್ಮೆ ಎನಿಸಿದೆ. ಉನ್ನತ ಶಿಕ್ಷಣದಲ್ಲಿ ಗುರಿಯೊಂದಿಗೆ ಬದ್ಧತೆ ಮತ್ತು ಶಿಸ್ತಿನಿಂದ ಅಧ್ಯಯನ ಮಾಡಿದರೆ ಅತ್ಯುತ್ತಮ ಅವಕಾಶಗಳು ದೊರೆಯಲಿವೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ತತ್ವ ಮತ್ತು ಅವರು ಕಲ್ಪಿಸಿರುವ ಅವಕಾಶ ಪ್ರತಿಯೊಬ್ಬರ ಯಶಸ್ಸಿಗೆ ಮಾರ್ಗದರ್ಶನ ಮಾಡುತ್ತದೆ.- ಪ್ರೊ. ದಯಾನಂದ ಅಗಸರ, ಕುಲಪತಿಗಳು, ಗುಲಬರ್ಗಾ ವಿಶ್ವವಿದ್ಯಾಲಯ

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago