ಕಲಬುರಗಿ: ಬ್ಯಾಂಕ್ ಸಾಲದ ನೋಟಿಸ್ ಗೆ ಹೆದರಿ ರೈತ ಓರ್ವ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಸುಲೇಪೆಟ್ ಪೊಲೀಸ್ ಠಾಣೆ ವ್ಯಕ್ತಪ್ತಿಯಲ್ಲಿ ನಡೆದಿದೆ.
ಇಲ್ಲಿನ ಪೊತಂಗಲ ಗ್ರಾಮದ ನಿವಾಸಿ ಪಾಂಡಪ್ಪ ಕೋರವನ್ (46) ಅತ್ಮಹತ್ಯೆಗೆ ಶಣಾದ ರೈತ ಎಂದು ತಿಳಿದುಬಂದಿದೆ. ಬ್ಯಾಂಕ್ ನಿಂದ 1 ಲಕ್ಷ ರೂ. ಸಾಲ ಪಡೆದ ಇವರು ಸಾಲ ತೀರಸುವಂತೆ ಬ್ಯಾಂಕ್ ಅಧಿಕಾರಿಗಳು ವಕೀಲರ ಮೂಲಕ ಎರಡು ಬಾರಿ ನೋಟಿಸ್ ನೀಡಿದ್ದಾರೆ.
ನೋಟಿಸ್ ಗೆ ಹೆದರಿ ಎತ್ತುಗಳನ್ನು ಮಾರಾಟ ಮಾಡಲು ಮುಂದಾಗಿದ್ದ, ಕುಟುಂಬಸ್ಥರಿಂದ ವಿರೋಧ ವ್ಯಕ್ತಪಡಿಸುವುದರಿಂದ ದಿಕ್ಕು ತೊಚದೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
3 ಎಕರೆ ಜಮೀನು ಹೊಂದಿರುವ ಪಾಂಡಪ್ಪ ಸತತ ಮಳೆಯಿಂದಾಗಿ ತೊಗರಿ ಬೆಳೆ ಹಾಲಗಿದ್ದು, ಸಾಲದ ಖಿನ್ನತೆಗೆ ಒಳಗಾಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರಿಂದ ಬಹುತೇಕ ದೇಹ ಬೆಂಕಿಗೆ ಸುಟ್ಟಿತ್ತು. ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ತೆರಳಿದ್ದಾಗ ರೈತ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಸುಲೇಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…