ಸುರಪುರ: ಕಾರ್ಮಿಕರು ಸರಕಾರ ದಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳಲು ಕಾನೂನಿನ ನೆರವು ಪಡೆಯಲಿ ಎನ್ನುವ ಕಾರಣಕ್ಕಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸುರಪುರ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕ ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಫಕೀರವ್ವ ಕೆಳಗೇರಿ ತಿಳಿಸಿದರು.
ನಗರದ ತಾಲೂಕ ಪಂಚಾಯತಿ ಸಭಾಂಗಣದಲ್ಲಿ ತಾಲೂಕ ಕಾನೂನು ಸೇವೆಗಳ ಪ್ರಾಧಿಕಾರ,ತಾಲೂಕ ಆಡಳಿತರ,ತಾಲೂಕ ಪಂಚಾಯತಿ,ಕಾರ್ಮಿಕ ಇಲಾಖೆ ಸುರಪುರ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಇಂದು ಕಾರ್ಮಿಕರು ಸೌಲಭ್ಯಗಳಿಗಾಗಿ ಚಳವಳಿ ನಡೆಸುವುದನ್ನು ಕಾಣುತ್ತೇವೆ,ಆದರೆ ಕಾನೂನಿನ ಮೂಲಕ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಅವಕಾಶವಿದೆ,ಅದರ ಕುರಿತು ಎಲ್ಲಾ ರೀತಿಯ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಹಿರಿಯ ವಕೀಲ ದೇವಿಂದ್ರಪ್ಪ ಬೇವಿನಕಟ್ಟಿ ಹಾಗೂ ಉಪನ್ಯಾಸಕರಾಗಿ ಭಾಗವಹಿಸಿದ್ದ ವಕೀಲ ಗೋಪಾಲ ತಳವಾರ್ ಅವರು ಕಾರ್ಮಿಕರ ಕಾನೂನುಗಳು,ಸರಕಾರದ ಸೌಲಭ್ಯಗಳ ಕುರಿತು ತಿಳಿಸಿಕೊಟ್ಟರು.ನಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾರ್ಮಿಕರಿಗೆ ಸರಕಾರದ ಯೋಜನೆಗಳು,ಬಡತನ ನಿರ್ಮೂಲನೆ ಪರಿಣಾಮಕಾರಿ ಅನುಷ್ಠಾನದ ಕುರಿತು ಕಾರ್ಯಾಗಾರ ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕ ಪಂಚಾಯತಿ ಇಓ ಬಸವರಾಜ ಸಜ್ಜನ್ ವಹಿಸಿದ್ದರು,ಮುಖ್ಯ ಅತಿಥಿಗಳಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಮರೇಪ್ಪ ಹೊಸ್ಮನಿ,ಸುರೇಶ ಪಾಟೀಲ್,ವಕೀಲರ ಸಂಘದ ಪ್ರ.ಕಾರ್ಯದರ್ಶಿ ಮಲ್ಲಿಕಾರ್ಜುನ ಮಂಗಿಹಾಳ ವೇದಿಕೆಯಲ್ಲಿದ್ದರು.
ಕಾರ್ಮಿಕ ನಿರೀಕ್ಷಕರಾದ ಶಿವಪ್ಪ ಜಮಾದಾರ್,ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ,ವಕೀಲರಾದ ಮಲ್ಲಿಕಾರ್ಜುನ ಹಿರೇಮಠ,ನಂದಕುಮಾರ ಕನ್ನೆಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ರಿಯಾಜ್ ಪಟೇಲ್ ವರ್ಕನಳ್ಳಿ ನಿರೂಪಿಸಿದರು,ಕಾರ್ಮಿಕ ಇಲಾಖೆ ಸಿಬ್ಬಂದಿ ಸಂತೋಷ ಸ್ವಾಗತಿಸಿ,ವಂದಿಸಿದರು.ಅನೇಕ ಜನ ಕಾರ್ಮಿಕರು,ವಕೀಲರು ಹಾಗೂ ಕಾರ್ಮಿಕ ಇಲಾಕೆ ಸಿಬ್ಬಂದಿಗಳು ಭಾಗವಹಿಸಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…