ಕಲಬುರಗಿ: ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಜಿಲ್ಲಾ ಘಟಕದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಎರಡನೇ ದಿನ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಯಿತು.
ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ನಡೆಸಿದ ಅಧಿಕಾರಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ಹೊರಹಾಕಿದ್ರು.
ಕೆಸಿಎಸ್‍ಆರ್ ನಿಯಮ 16ಎ ಅನ್ನು ಮರು ಸ್ಥಾಪಿಸುವಂತೆ, ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರದಲ್ಲಿ ಇದುವರೆಗೂ ಆಗಿರುವ ಅಮಾನತ್ತುಗಳನ್ನು ತಕ್ಷಣವೇ ರದ್ದು ಪಡಿಸುವಂತೆ ಹಾಗೂ ಅಂತರ ಜಿಲ್ಲಾ ಪತಿ-ಪತ್ನಿ ಪ್ರಕರಣಗಳ ವರ್ಗಾವಣೆಯನ್ನು ಚಾಲನೆ ನೀಡಿ ಅಂತಿಮ ಆದೇಶಕ್ಕಾಗಿ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಪ್ರತಿಭಟನಾನಿರತರು ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸೈಯದ್ ಜುಬೇರ್ ಅಲಿ, ಕಾರ್ಯದರ್ಶಿ ಕುಮಾರ ಮೇಣಸಿನಕಾಯಿ, ಖಜಾಂಚಿ ರೇವಣಸಿದ್ದಪ್ಪ ಚಂದನಕೇರಿ, ಮಾಜಿ ಅಧ್ಯಕ್ಷ ಗುರುಮೂರ್ತಿ, ರಾಜ್ಯ ಸಂಘ ಸಂಚಾಲಕರಾಜು ಗೋಪಗೆ, ರಾಜ್ಯ ಸರಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಕೆ.ಕಿರಣಕುಮಾರ ಸತೀಶ ಸಜ್ಜನ,ಕೆ ಸೇರಿದಂತೆ ಅನೇಕರು ಪಾಲ್ಗೊಂಡರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…