ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ

0
100

ಶಹಾಬಾದ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳು ತಾಲೂಕು ಕಚೇರಿಯ ಮುಂದೆ ಗುರುವಾರ ಕಪ್ಪುಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.

ಈ ಕುರಿತು ಗ್ರಾಮ ಆಡಳಿತಾಧಿಕಾರಿಗಳ ತಾಲೂಕಾಧ್ಯಕ್ಷ ಹಣಮಂತರಾವ ಪಾಟೀಲ ಮಾತನಾಡಿ, ಗ್ರಾಮಾಡಳಿತ ಅಧಿಕಾರಿಗಳು ಕಂದಾಯ ಇಲಾಖೆಯಲ್ಲಿ ದಿನದ 15-18 ಗಂಟೆಗಳ ಇಲಾಖೆಯ ಕೆಲಸದಲ್ಲಿ ನಿರತರಾಗಿದ್ದಾರೆ. ಅಲ್ಲದೇ ತಾಂತ್ರಿಕ ಅಧಿಕಾರಿಗಳು ಮಾಡುವ ಕೆಲಸಗಳನ್ನೂ ಸಹ ಮಾಡುತ್ತಿದ್ದಾರೆ.

Contact Your\'s Advertisement; 9902492681

ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನವನ್ನು ಮಾತ್ರ ನೀಡುತ್ತಿಲ್ಲ. ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ, ಗುಣಮಟ್ಟದ ಟೇಬಲ್, ಕುರ್ಚಿ ಮತ್ತು ಅಲ್ಮೆರ, ಉತ್ತಮ ಗುಣಮಟ್ಟದ ಮೊಬೈಲ್ ಫೋನ್ , ಗೂಗಲ್ ಕ್ರೋಮ್ ಬುಕ್, ಲ್ಯಾಪ್‍ಟಾಪ್, ಪ್ರಿಂಟರ್, ಸ್ಕ್ಯಾನರ್ ಒದಗಿಸಬೇಕು. ಕೆಸಿಎಸ್‍ಆರ್ ನಿಯಮಾವಳಿ ಪ್ರಕಾರ ಸರ್ಕಾರಿ ರಜಾ ದಿನಗಳಲ್ಲಿ ಕರ್ತವ್ಯ ನಿರ್ವಹಿಸಲು ಮೆಮೊ ಹಾಕಬಾರದು. ರಜಾ ದಿನಗಳಲ್ಲಿ ಕೆಲಸ ಮಾಡುವಂತೆ ಒತ್ತಾಯಿಸುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು.

ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು. ರಾಜಸ್ವ ನಿರೀಕ್ಷಕರ ಹುದ್ದೆಗೆ ತಕ್ಷಣವೇ ಬಡ್ತಿ ನೀಡಬೇಕು. ಅಂತರ್ ಜಿಲ್ಲೆ, ಪತಿ-ಪತ್ನಿ ಪ್ರಕರಣಗಳ ವರ್ಗಾವಣೆಯಾಗಿ ಅಂತಿಮ ಆದೇಶಕ್ಕಾಗಿ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ ಮಾಡಬೇಕು. ವಿಶೇಷಚೇತನ ಹಾಗೂ ತೀವ್ರ ಅನಾರೋಗ್ಯದ ಸಮಸ್ಯೆ ಇರುವ ಪರಕರಣಗಳ ನಿಯೋಜನೆಯನ್ನು ಮಾಡಿಕೊಡುವುದು.

ಕೆಲಸದ ಅವಧಿಯ ಮುನ್ನ ಹಾಗೂ ಕೆಲಸದ ಮುಕ್ತಾಯದ ನಂತರ ನಡೆಸಲಾಗುವ ಎಲ್ಲಾ ಬಗೆಯ ವರ್ಚುಯಲ್ ಸಭೆಗಳನ್ನು ಕಡ್ಡಾಯವಾಗಿ ನಿμÉೀಧಿಸುವುದು. ಮಾತೃ ಇಲಾಖೆಯ ಕೆಲಸಗಳೊಂದಿಗೆ ಸರ್ಕಾರದ ಆದೇಶದಂತೆ ಇತರೆ ಇಲಾಖೆಗಳ ಕೆಲಸಗಳನ್ನು ನಿರ್ವಹಿಸುವ ಚುನಾವಣೆ, ಅತಿವೃಷ್ಟಿ, ಅನಾವೃಷ್ಟಿ ಮುಂತಾದ ಕೆಲಸ ಕಾರ್ಯಗಳನ್ನು ಮಾಡುವಾಗ ಸಂಭವಿಸಬಹುದಾದ ಮಾರಣಾಂತಿಕ ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಪತ್ತಿನ ಭತ್ಯೆ ನೀಡುವುದು. ಕರ್ತವ್ಯ ನಿರ್ವಹಿಸುವ ವೇಳೆ ಜೀವಹಾನಿಯಾದ ಗ್ರಾಮಾಡಳಿತ ಅಧಿಕಾರಿಗಳ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡುವುದು, ಪ್ರಯಾಣ ಭತ್ಯೆಯ ದರವನ್ನು ಹೆಚ್ಚಿಸುವುದು.

ಮನೆಹಾನಿ ಪ್ರಕರಣಗಳ ಜವಾಬ್ದಾರಿಯಿಂದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೈ ಬಿಡುವುದು, ಇಂದಿನ ಜನಸಂಖ್ಯೆ ಜನಗುಣವಾಗಿ ಕಂದಾಯ ಇಲಾಖೆ ಹುದ್ದೆಗಳನ್ನು ಪರಿಷ್ಕರಿಸಿ, ಪುನರ್ ವಿಂಗಡಣೆ ಮಾಡಿ ಹೆಚ್ಚುವರಿ ಹುದ್ದೆಗಳನ್ನು ಸೃಜಿಸುವುದು. ಮ್ಯಟೇಶನ್ ಅವಧಿ ದಿನವನ್ನು ವಿಸ್ತರಣೆ ಮಾಡುವುದು ಹಾಗೂ ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾ ಭದ್ರತೆಯನ್ನು ಒದಗಿಸುವುದು ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಬಗೆಯ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಶನ್ ಅನ್ನು ಸ್ಥಗಿತಗೊಳಿಸಿ ಲೇಖನಿ ಸ್ಥಗಿತಗೊಳಿಸುವ ಮೂಲಕ ಅನಿರ್ದಿμÁ್ಟವಧಿ ಮುಷ್ಕರವನ್ನು ರಾಜ್ಯ ವ್ಯಾಪ್ತಿ ಹಮ್ಮಿಕೊಳ್ಳಲಾಗಿದ್ದು ಸರ್ಕಾರ ಈ ಕೂಡಲೇ ಕಡ್ಡಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಹಣಮಂತರಾವ ಪಾಟೀಲ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಶ್ರೀಮಂತ.ಎಚ್.ಆರ್,ಶರಣು ಕುಂಬಾರ, ಇಮ್ರಾನ್.ಟಿ, ಜಾನ್ ಜಾರ್ಜ, ಶಿಲ್ಪಾ, ಪಾರ್ವತಿ,ಜಯಶ್ರೀ, ರೇವಣಸಿದ್ದಪ್ಪ ಪಾಟೀಲ,ಮಹ್ಮದ್ ಬಿಲಾಲ್,ಶಿವಾನಂದ ಹೂಗಾರ,ಮಹ್ಮದ್ ಆರೀಫ್ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here