ಆಳಂದ; ಕೇಂದ್ರ ಸರ್ಕಾರದಿಂದ ಗ್ರಾಮ ಪಂಚಾಯತಗಳಿಗೆ ಮಂಜೂರಿಯಾಗಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮನೆಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಬಿಜೆಪಿ ಬೆಂಬಲಿತ ಗ್ರಾ.ಪಂ ಸದಸ್ಯರ ಕ್ಷೇತ್ರಗಳಲ್ಲಿ ಒಂದು ಮನೆಗೆ 10-15 ಸಾವಿರ ಹಣ ಪಡೆಯಲಾಗುತ್ತಿದೆ ಎಂದು ಮಾಜಿ ಶಾಸಕ ಸುಭಾಷ ಆರ್ ಗುತ್ತೇದಾರ ಆರೋಪಿಸಿದ್ದಾರೆ.
ಈ ಕುರಿತು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ಪ್ರಧಾನ ಮಂತ್ರಿ ಆವಾಸ ಯೋಜನೆಯ ಮನೆಗಳು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಯೋಜನೆಯಲ್ಲಿ ಮಂಜೂರಿಯಾದ ಮನೆಗಳಾಗಿದ್ದು ಈಗಾಗಲೇ ಕೇಂದ್ರ ಸರ್ಕಾರದಿಂದ ಅನುಮೋದನೆಗೊಂಡಿವೆ ಅಲ್ಲದೇ ಇದಕ್ಕೆ ಸಂಬಂಧಪಟ್ಟಂತೆ ಯಾರಿಗೂ ದುಡ್ಡು ಕೊಡುವ ಅವಶ್ಯಕತೆ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಇದಾಗಿದ್ದು ಈ ಮನೆಗಳು ನಿರ್ಮಾಣವಾಗುವುದು ನಿಶ್ಚಿತ ಎಂದಿದ್ದಾರೆ.
ಶಾಸಕ ಬಿ ಆರ್ ಪಾಟೀಲ ಬೆಂಬಲಿಗರು ತಾಲೂಕಿನ ಕೆಲವು ಗ್ರಾಮ ಪಂಚಾಯತಿಗಳಲ್ಲಿ 10-16 ಸಾವಿರ ಕೊಟ್ಟರೆ ಮಾತ್ರ ಮೊದಲನೆ ಕಂತಿನ ಹಣ 30 ಸಾವಿರ ಬಿಡುಗಡೆ ಮಾಡುತ್ತೇವೆ ಇಲ್ಲದಿದ್ದರೇ ಶಾಸಕರಿಗೆ ಹೇಳಿ ನಿಮ್ಮ ಮನೆ ನಿರ್ಮಾಣ ಆಗಲು ಬಿಡುವುದಿಲ್ಲ ಎಂದು ಹೇಳಿ ಫಲಾನುಭವಿಗಳಿಗೆ ಹೆದರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ತಾಲೂಕಿನ ಹಲವು ಗ್ರಾಮ ಪಂಚಾಯತಿಗಳಲ್ಲಿ ದುಡ್ಡು ಕೊಟ್ಟರೇ ಮಾತ್ರ ಜಿಪಿಎಸ್ ಮಾಡುತ್ತೇವೆ ಎಂದು ಹೆದರಿಸುತ್ತಿದ್ದಾರೆ ಇದಕ್ಕೆ ಯಾರು ಸೊಪ್ಪು ಹಾಕಬಾರದು ಎಂದು ಮನವಿ ಮಾಡಿದ್ದಾರೆ.
ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ 2024-25ನೇ ಸಾಲಿಗೆ ಕಲಬುರಗಿ ಜಿಲ್ಲೆಗೆ 13,175 ಮನೆಗಳನ್ನು ಜಿಪಿಎಸ್ ಮಾಡಲು ಗುರಿ ನೀಡಲಾಗಿದ್ದು, ಆದ್ಯತಾ ಪಟ್ಟಿಯಲ್ಲಿರುವ ಫಲಾನುಭವಿಗಳು ಇದೇ ಸೆ. 15 ರೊಳಗೆ ಅಗತ್ಯ ದಾಖಲೆಗಳನ್ನು ಗ್ರಾಮ ಪಂಚಾಯತಿಗೆ ಸಲ್ಲಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದ್ದರು.
ಕೇಂದ್ರ ಸರ್ಕಾರದಿಂದ ಪ್ರಸಕ್ತ ಸಾಲಿಗೆ ರಾಜ್ಯಕ್ಕೆ 2,26,175 ಮನೆಗಳ ಗುರಿಯನ್ನು ಮಂಜೂರು ಮಾಡಿದ್ದು, ಜಿಲ್ಲೆಯ 13,175 ಮನೆಗಳ ಫಲಾನುಭವಿಗಳ ಪಟ್ಟಿ ಈಗಾಗಲೇ ಗ್ರಾಮ ಪಂಚಾಯತಿಯಲ್ಲಿ ಲಭ್ಯವಿದ್ದು, ಇದನ್ನು ಖಾತ್ರಿಪಡಿಸಿಕೊಂಡು ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಸಂಖ್ಯೆ, ಜಾಬ್ ಕಾರ್ಡ್, ಪಡಿತರ ಚೀಟಿ ಹಾಗೂ ಇತರೆ ಅಗತ್ಯ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಅದರಂತೆ ಪಿಡಿಓ, ಟಿಎನ್‍ಒ ಹಾಗೂ ಡಿಇಓ ಅವರುಗಳು ಸೆ.12 ರಿಂದ 15ರ ವರೆಗೆ (ರಜೆ ದಿನಗಳು ಸೇರಿ) ಫಲಾನುಭವಿಗಳು ನೀಡುವ ಆಧಾರ ಕಾರ್ಡ, ಬ್ಯಾಂಕ್ ಪಾಸ್ ಬುಕ್, ಮೊಬೈಲ್ ಸಂಖ್ಯೆ, ಜಿಪಿಎಸ್ ಫೋಟೋಗಳನ್ನು ಕಡ್ಡಾಯವಾಗಿ ತಂತ್ರಾಂಶದಲ್ಲಿ ಅಪಲೋಡ್ ಮಾಡಬೇಕು.
ಈ ಸಂಬಂಧ ಫಲಾನುಭವಿಗಳಿಂದ ಏನೇ ದೂರು, ಅಕ್ಷೇಪಣೆಗಳಿದಲ್ಲಿ ಸಂಬಂಧಪಟ್ಟ ಆಯಾ ತಾಲೂಕಿನ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ಸಲ್ಲಿಸಿ ಬಗೆಹರಿಸಿಕೊಳ್ಳಬೇಕೆಂದು ತಿಳಿಸಿದ್ದರು ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡ ಕೆಲವರು ಫಲಾನುಭವಿಗಳಿಂದ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…